ಗಣೇಶಪೇಟೆ ನನಗೆ ಪಾಕಿಸ್ತಾನದಂತೆಯೇ ಎಂದಿದ್ದ ಮೌಲ್ವಿ ವಿರುದ್ಧ ದೂರು
ಡಿಸೆಂಬರ್ 4: ಹುಬ್ಬಳ್ಳಿಯ ಗಣೇಶ್ ಪೇಟೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದ ಮುಸ್ಲಿಂ ಮೌಲ್ವಿ ಅಬ್ದುಲ್ ಹಬೀಬ್ ಇಮಾಮಸಾಬ್ ವಿರುದ್ಧ ದೂರು ದಾಖಲಾಗಿದೆ.
ಹುಬ್ಬಳ್ಳಿ ಉತ್ತರ ವಿಭಾದ ಎಸಿಪಿ ದಾವುದ್ ಖಾನ್ ಅವರು ಶಹರ ಪೊಲೀಸ್ ಠಾಣೆಯಲ್ಲಿ ಮೌಲ್ವಿ ಅಬ್ದುಲ್ ಹಬೀಬ್ ಇಮಾಮಸಾಬ್ ವಿರುದ್ಧ ಸೆಕ್ಷನ್ 153 ದೇಶದ್ರೋಹ ಹೇಳಿಕೆ, ಶಾಂತಿಭಂಗಕ್ಕೆ ಪ್ರಚೋರದನೆ ಆರೋಪದಡಿ ದೂರು ದಾಖಲಿಸಿದ್ದಾರೆ.

"ಪಾಕಿಸ್ತಾನ ನೋಡಬೇಕೆಂದರೆ ಅಲ್ಲಿಗೇ ಹೋಗುವ ಅವಶ್ಯಕತೆ ಇಲ್ಲ. ಈ ಗಣೇಶಪೇಟೆ ನನಗೆ ಪಾಕಿಸ್ತಾನದಂತೆಯೇ ಕಾಣುತ್ತಿದೆ" ಎಂದು ಶನಿವಾರ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದರು.
ಹುಬ್ಬಳ್ಳಿ ಉತ್ತರ ಎಸಿಪಿ ದಾವೂದ್ ಖಾನ್ ಹಾಗೂ ಶಹರ ಠಾಣೆ ಇನ್‌ಸ್ಪೆಕ್ಟರ್ ಶಿವಾನಂದ ಚಲವಾದಿ ಅವರ ಸಮ್ಮುಖದಲ್ಲೇ ಮೌಲ್ವಿ ಈ ರೀತಿಯ ಹೇಳಿಕೆ ನೀಡಿದ್ದು, ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
ಇದರಿಂದ ಸ್ವತಹಃ ಎಸಿಪಿ ದಾವೂದ್ ಖಾನ್ ಅವರೇ ಮೌಲ್ವಿ ಅಬ್ದುಲ್ ಹಬೀಬ್ ಇಮಾಮಸಾಬ್ ವಿರುದ್ಧ ದೂರು ದಾಖಲಿಸಿದ್ದಾರೆ. ಶನಿವಾರದಂದು ಈದ್ ಮಿಲಾದ್ ಮೆರವಣಿಗೆಯಲ್ಲಿ ಬೆಳಗಾವಿಯಲ್ಲಿ ಪಾಕ್ ಸೈನ್ಯದ ಹಾಡು ಹಾಕಾಲಾಗಿತ್ತು.
ಒಂದೆಡೆ ಪಾಕ್ ಗುಣಗಾನ ಮಾಡುತ್ತಿರುವುದು. ಮತ್ತೊಂದೆಡೆ ಹಿಂದೂಗಳ ಮೆರವಣಿಗೆಗೆ ಅವಕಾಶ ನೀಡದಿರುವುದು ಸಾಮಾಜಿಕ ಜಾಲಾತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿವೆ.












Click it and Unblock the Notifications