ಮುಖಕ್ಕೆ ಬಟ್ಟೆ ಮುಚ್ಚಿಕೊಂಡು ಅಪ್ರಾಪ್ತೆ ಮೇಲೆ ಅತ್ಯಾಚಾರ, ಮೂವರ ಬಂಧನ

Posted By: Basavaraj
Subscribe to Oneindia Kannada

ಹುಬ್ಬಳ್ಳಿ, ಜುಲೈ 12: ಒಂದು ತಿಂಗಳಿಂದ ಬಾಲಕಿಯನ್ನು ಚುಡಾಯಿಸುತ್ತಿದ್ದ ಯುವಕನೊಬ್ಬ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಆಕೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಕುಂದಗೋಳ ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ನಡೆದಿದೆ.

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ

ಶರೀಫ್ ದ್ಯಾಮಣ್ಣ ಕಾಳಿ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಜುಲೈ ಒಂದರಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಹಿಂಬಾಗಿಲಿನಿಂದ ಒಳಗಡೆ ಪ್ರವೇಶಿಸಿದ್ದಾನೆ. ತನ್ನ ಮುಖಕ್ಕೆ ಬಟ್ಟೆ ಕಟ್ಟಿಕೊಂಡು, ಬಾಯಿಗೆ ಬಟ್ಟೆ ಕಟ್ಟಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ.

A minor girl raped by person at her residence

ಅತ್ಯಾಚಾರ ನಡೆಸಿದ ನಂತರ ಹಗ್ಗದಿಂದ ಬಾಲಕಿ ಕೈ- ಕಾಲು ಕಟ್ಟಿ ಹಾಕಿ ಆರೋಪಿ ಪರಾರಿಯಾಗಿದ್ದ. ಭಯದಿಂದ ಈ ವಿಷಯವನ್ನು ಬಾಲಕಿ ಮನೆಯಲ್ಲಿ ಹೇಳಿರಲಿಲ್ಲ. ಜುಲೈ ಎಂಟರಂದು ಪಾಲಕರಿಗೆ ಮಾಹಿತಿ ನೀಡಿದ್ದಳು. ಆ ನಂತರ ಪೋಷಕರು ಕುಂದಗೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶರೀಫ್ ಕಾಳಿ, ಆತನಿಗೆ ಸಹಕರಿಸಿದ ಸಂತೋಷ ಕಾಳಿ ಹಾಗೂ ಮಂಜುನಾಥ ಕಾಳಿ ಎಂಬುವರನ್ನು ಬಂಧಿಸಿದ್ದಾರೆ. ಹಾಗೂ ತನಿಖೆಯನ್ನು ಮುಂದುವರಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A minor girl raped by person at her residence in a village of Kundagol taluk recently. Accused identified as Sharif Dyamanna Kale and other two who were support to prime accused have arrested by Kundagol police.
Please Wait while comments are loading...