ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮಹಿಳೆ ಸಾವು, ಆರು ಜನರ ಸ್ಥಿತಿ ಗಂಭೀರ
ಹುಬ್ಬಳ್ಳಿ, ಆಗಸ್ಟ್ 28: ಲಾರಿ ಮತ್ತು ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ ಆರು ಜನರು ಗಂಭೀರ ಗಾಯಗೊಂಡ ಘಟನೆ ಪುನಾ-ಬೆಂಗಳೂರು ರಸ್ತೆಯ ಹುಬ್ಬಳ್ಳಿಯ ತಡಸ್ ಕ್ರಾಸ್ ಸಮೀಪ ನಡೆದಿದೆ. ಇಂದು ( ಆಗಸ್ಟ್ 28) ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ರಕ್ತಸಿಕ್ತಗೊಂಡು ರಸ್ತೆಯಲ್ಲಿ ಬಿದ್ದಿದ್ದ ಜನರನ್ನು ಕಂಡು ಸ್ಥಳೀಯರು ಹೌಹಾರಿದ್ದಾರೆ.
ಟಾಟಾ ಏಸ್ ಚಾಲಕನ ಅಜಾಗರೂಕತೆ ಚಾಲನೆಯೇ ಈ ಭೀಕರ ಅಪಘಾತಕ್ಕೆ ಕಾರಣ ಎನ್ನುವ ಆರೋಪಗಳು ಕೇಳಿಬರುತ್ತಿದೆ. ವೇಗವಾಗಿ ಬಂದ ಟಾಟಾ ಏಸ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತದಲ್ಲಿ ಮೃತಪಟ್ಟ ಮಹಿಳೆ ಹಾಗೂ ಗಾಯಾಳುಗಳು ತರಿಹಾಳದಲ್ಲಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವ ಉದ್ಯೋಗಿಗಳು ಎಂದು ತಿಳಿದುಬಂದಿದೆ. ಇನ್ನು ಸಾವನ್ನಪ್ಪಿದ ಮಹಿಳೆಯ ಹೆಸರು ವಿಳಾಸ ಪತ್ತೆಯಾಗಬೇಕಿದೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: ಆರು ಜನರು ಜಸ್ಟ್ ಬಚಾವ್
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ನಡೆದಿದೆ. ಈ ಅಪಘಾತದಿಂದ ಆರು ಜನ ಪ್ರವಾಸಿಗರು ಗಾಯಗೊಂಡಿದ್ದು, ಸದ್ಯ ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಾಯಾಳು ಆರು ಜನರು ಶಿವಮೊಗ್ಗ ಜಿಲ್ಲೆಯ ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ವಾಪಸ್ ತೆರಳುತ್ತಿದ್ದರು. ರಾತ್ರಿ 2.30ರ ವೇಳೆಗೆ ಕಾರು ಚಾಲಕ ಕಾರ್ತಿಕ್ ಎನ್ನುವಾತ ಅತಿ ವೇಗವಾಗಿ ಕಾರು ಚಲಾಯಿಸಿದ್ದು, ನಿಯಂತ್ರಣ ತಪ್ಪಿ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
-
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?












Click it and Unblock the Notifications