ಎಎಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಹುಬ್ಬಳ್ಳಿಯಿಂದ ಆಯ್ಕೆಯಾದ ಅಭ್ಯರ್ಥಿಗಳ ವಿವರ ತಿಳಿಯಿರಿ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಎಎಪಿ ಪಕ್ಷದಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಧಾರವಾಡ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡ ಅನಂತಕುಮಾರ್ ತಿಳಿಸಿದರು.
ಹುಬ್ಬಳ್ಳಿ, ಮಾರ್ಚ್, 21: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ. ಆದರೆ ಇವೆರಡು ಪಕ್ಷಗಳಿಗಿಂತ ಮುಂಚೆಯೇ ಆಮ್ ಆದ್ಮಿ ಪಕ್ಷವು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಧಾರವಾಡ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಎಎಪಿ ಪಕ್ಷದ ಮುಖಂಡ ಅನಂತಕುಮಾರ್ ಬುಗಡಿ ತಿಳಿಸಿದರು.
ನಗರದಲ್ಲಿಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ವಿಕಾಸ ಸೊಪ್ಪಿನ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರಕ್ಕೆ ಬಸವರಾಜ ತೆರದಾಳ, ಕಲಘಟಗಿ ಕ್ಷೇತ್ರಕ್ಕೆ ಮಂಜುನಾಥ ಜಕ್ಕಣ್ಣನವರ ಅವರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಜನರು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಸಕ್ರಿಯವಾಗಿರುವ ಎಎಪಿ
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯದಲ್ಲಿ ಸಕ್ರಿಯವಾಗಿರುವ ಎಎಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಲವು ವಿಚಾರಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಾ ಬಂದಿದ್ದಾರೆ. ಇದೀಗ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲೂ ಮುಂದಾಗಿದ್ದಾರೆ.
ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಮಾರ್ಚ್ 20ರಂದು ತಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ಒಟ್ಟು 80 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ 7 ಮಂದಿ ರೈತರು ಹಾಗೂ 7 ಮಂದಿ ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಲು ಮುಂದಾಗಿದೆ.

ಅಭಿವೃದ್ಧಿಗೆ ಭ್ರಷ್ಟಾಚಾರ ಅಡ್ಡಿಯಾಗಿದೆ
ಅಭ್ಯರ್ಥಿಗಳ ಪಟ್ಟಿ ಘೋಷಣೆ ಬಳಿಕ ಮಾತನಾಡಿರುವ ಪೃಥ್ವಿ ರೆಡ್ಡಿ, ಎಎಪಿ ಪಕ್ಷವು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಲು ಹೆಮ್ಮೆ ಪಡುತ್ತದೆ. ಎಎಪಿಯು ಭ್ರಷ್ಟಾಚಾರ ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ ಹಾಗೂ ಭಾರತವು ವಿಶ್ವದ ನಂಬರ್ ಒನ್ ಸ್ಥಾನ ಅಲಂಕರಿಸುವುದಕ್ಕೆ ಭ್ರಷ್ಟಾಚಾರ ಅಡ್ಡಿಯಾಗಿದೆ ಎಂದರು.
ಭಾರತ ಭ್ರಷ್ಟಾಚಾರ ಮುಕ್ತವಾಗಬೇಕು
ಭಾರತವನ್ನು ಶೇಕಡಾ 100ರಷ್ಟು ಭ್ರಷ್ಟಾಚಾರ ಮುಕ್ತ ಮಾಡಬೇಕೆಂದರೆ ಶೇಕಡಾ 100ರಷ್ಟು ಪ್ರಮಾಣಿಕರಾಗಿರುವವರು ನಮ್ಮನ್ನು ಪ್ರತಿನಿಧಿಸಬೇಕು. ನಮ್ಮ ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಮಾಣಿಕರಿದ್ದರೂ ಅವರು ರಾಜಕೀಯ ಪ್ರವೇಶಿಸಲಿಲ್ಲ. ಇಂತಹವರು ಚುನಾವಣೆಗೆ ಸ್ಪರ್ಧಿಸುವುದು, ಸಾಂಪ್ರದಾಯಿಕ ಪಕ್ಷಗಳ ಹಣಬಲಕ್ಕೆ ತೀವ್ರ ಪೈಪೋಟಿ ನೀಡುವುದು ಇಲ್ಲಿಯವರೆಗೂ ಕಷ್ಟಕರವಾಗಿತ್ತು ಎಮದರು.
ಪ್ರಾಮಾಣಿಕರನ್ನ ರಾಜಕೀಯಕ್ಕೆ ಕರೆತಂದಿದ್ದೇವೆ
ಇದೀಗ ಎಎಪಿ ಎಲ್ಲವನ್ನೂ ಬದಲಾಯಿಸಿದೆ. ಸಾಮಾನ್ಯ ಹಿನ್ನೆಲೆಯ ಪ್ರಾಮಾಣಿಕ ಜನರನ್ನು ನಾವು ರಾಜಕೀಯಕ್ಕೆ ಕರೆತಂದಿದ್ದೇವೆ. ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದ್ದೇವೆ. ಜಯಗಳಿಸದ ನಂತರ ಶೇಕಡಾ 100ರಷ್ಟು ಭ್ರಷ್ಟಾಚಾರರಹಿತ ಆಡಳಿತ ನೀಡುವುದು ಮಾತ್ರವಲ್ಲದೇ, ಪ್ರತಿಯೊಬ್ಬ ನಾಗರಿಕನಿಗಿರುವ ಕನಸು ಕಾಣುವ ಹಾಗೂ ಬೆಳೆಯುವ ಹಕ್ಕುಗಳನ್ನು ಕಾಪಾಡುವುದಾಗಿ ಹೇಳಿದರು.
ಎಎಪಿ ಪಕ್ಷ ವೇಗವಾಗಿ ಬೆಳೆಯುತ್ತಿದೆ
ಎಎಪಿ ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದೆ. ಇದು ಅನೇಕ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸುವ ಸಮರ್ಥವನ್ನು ಹೊಂದಿದೆ ಎಂದು ಪೃಥ್ವಿ ರೆಡ್ಡಿ ಇತ್ತೀಚೆಗಷ್ಟೇ ಹೇಳಿದ್ದರು. ಪ್ರತಿಯೊಬ್ಬರೂ ಜನಪ್ರತಿನಿಧಿಗಳಾಗಲು ಸಮರ್ಥರಾಗಿದ್ದಾರೆ ಎಂದು ನಂಬಲಾಗಿತ್ತು. ಇಂದು ಭಾರತದಲ್ಲಿ ಎಎಪಿಯನ್ನು ಒಂದು ವೇದಿಕೆಯಾಗಿ ಬಳಸಿಕೊಂಡು ಜನಸಾಮಾನ್ಯರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಮತ್ತು ಜನರನ್ನು ಪ್ರತಿನಿಧಿಸಬಹುದು ಎಂದರು.
ಸಾಮಾನ್ಯ ಮನುಷ್ಯನ ನೋವನ್ನು ಅರ್ಥಮಾಡಿಕೊಳ್ಳಲು ಅಭ್ಯರ್ಥಿಗಳು ಜೀವನದ ವಿವಿಧ ಹಂತಗಳ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಮುಖ್ಯವಾಗಿದೆ ಎಂದು ನಾವು ನಂಬಿದ್ದೇವೆ. ನಮ್ಮದು ಯುವ ದೇಶವಾಗಿದ್ದು, ಯುವಕರು ತಮ್ಮ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಧ್ವನಿ ಹೊಂದಿರಬೇಕು. ನಮ್ಮ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳಾಗಿದ್ದಾರೆ. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದರು.
ವಿಧಾನಸಭೆಯಲ್ಲಿ ರೈತರಿಗೆ ಪ್ರಾತಿನಿಧ್ಯವಿಲ್ಲ
ನಮ್ಮ ರಾಜ್ಯದ ಅರ್ಧಕ್ಕಿಂತಲೂ ಹೆಚ್ಚಿನ ಭಾಗ ಕೃಷಿಯನ್ನು ಅವಲಂಬಿಸಿದೆ. ಆದರೆ ನಮ್ಮ ವಿಧಾನಸಭೆಯಲ್ಲಿ ರೈತರಿಗೆ ಪ್ರಾತಿನಿಧ್ಯವಿಲ್ಲ. ನಮ್ಮ ಮೊದಲ ಪಟ್ಟಿಯಲ್ಲಿ 7 ರೈತರು ಇರುವುದು ನಮಗೆ ಸಂತೋಷವಾಗುತ್ತಿದೆ. ರಾಜ್ಯದ ಜನಸಂಖ್ಯೆಯ ಶೇಕಡಾ 50ರಷ್ಟು ಮಹಿಳೆಯರಿದ್ದಾರೆ. ಮತ್ತು ಬೇರೆ ಪಕ್ಷಗಳು ಅವರನ್ನು ನಾಮನಿರ್ದೇಶನ ಮಾಡದ ಕಾರಣ ಮಹಿಳೆಯರಿಗೆ ಸಾರ್ವಜನಿಕ ಹುದ್ದೆಯನ್ನು ಪಡೆಯುವುದು ಕಷ್ಟವಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ನಮ್ಮ ಮೊದಲ ಪಟ್ಟಿಯಲ್ಲಿ 7 ಜನ ಮಹಿಳೆಯರಿದ್ದು, ಇದರಿಂದ ನಮಗೆ ತುಂಬಾ ಸಂತೋಷವಾಗುತ್ತಿದೆ. ಹಾಗೆಯೇ ಮುಂದೆ ಬಿಡುಗಡೆ ಮಾಡಲಿರುವ ಪಟ್ಟಿಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇರುತ್ತಾರೆ ಎಂದು ಭಾವಿಸಿದ್ದೇವೆ ಎಂದರು.
ರಾಜ್ಯದ ಜನರಿಗೆ ಹೆಚ್ಚಿನ ರೀತಿಯಲ್ಲಿ ಸೇವೆ ಸಲ್ಲಿಸಲು ದೇಶಾದ್ಯಂತ ಸಾಮಾಜಿಕ ಕಾರ್ಯಕರ್ತರು ಎಎಪಿಯನ್ನು ಒಂದು ವೇದಿಕೆಯಾಗಿ ನೋಡುತ್ತಾರೆ. ಹಾಗೆಯೇ ನಾವು ಮೊದಲು ಬಿಡುಗಡೆ ಮಾಡಿದ ಪಟ್ಟಿಯಲ್ಲಿ 5 ಜನ ಸಾಮಾಜಿಕ ಕಾರ್ಯಕರ್ತರು ಇದ್ದಾರೆ ಎಂದು ತಿಳಿಸಿದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications