ಹುಬ್ಬಳ್ಳಿಯಲ್ಲಿ ಎಸಿಬಿ ದಾಳಿ: 6 ಸಾವಿರ ಸೀರೆ, 7 ಲಕ್ಷ ರೂ ನಗದು ವಶ
ಹುಬ್ಬಳ್ಳಿ, ಫೆಬ್ರವರಿ, 28 : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ಹುಬ್ಬಳ್ಳಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಮನೆ ಮೇಲೆ ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದಲ್ಲಿರುವ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಕರಿಯಪ್ಪ ಕರ್ನಲ್ ಮನೆ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ದಾಳಿ ವೇಳೆ ಕರಿಯಪ್ಪ ಅವರ ಮನೆಯಿಂದ 7 ಲಕ್ಷ ರೂ. ನಗದು ಹಾಗೂ 6 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದು,ಅಕ್ರಮ ಹಾಗೂ ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಮೇಲೆ ದಾಳಿ ಮಾಡಲಾಗಿದೆ.

ಇದಲ್ಲದೇ ನಗರದಲ್ಲಿರುವ ಇವರ ಸಂಬಂಧಿಗಳು ಹಾಗೂ ಸ್ನೇಹಿತರ ಮನೆಯ ಮೇಲೂ ದಾಳಿ ಮುಂದುವರೆದಿದೆ ಎನ್ನಲಾಗುತ್ತಿದೆ.












Click it and Unblock the Notifications