ಹುಬ್ಬಳ್ಳಿಯಲ್ಲಿ KSRTC ಮತ್ತು ಚಿಗರಿ ಬಸ್ ನಡುವೆ ಅಪಘಾತ
ಹುಬ್ಬಳ್ಳಿ, ಜುಲೈ, 15: ಕೆಎಸ್‌ಆರ್‌ಟಿಸಿ ಮತ್ತು ಚಿಗರಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮುಂದೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ಗೆ ಚಿಗರಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ವಾಯುವ್ಯ ಸಾರಿಗೆ ಸಂಸ್ಥೆ ಬಸ್ ಹಿಂದಿನ ಗಾಜು ಒಡೆದು ಪುಡಿಪುಡಿಯಾಗಿರುವ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ನಡೆದಿದೆ. ಹೀಗೆ ಚಿಗರಿ ಬಸ್ ಒಂದಿಲ್ಲೊಂದು ರೀತಿಯಲ್ಲಿ ಅಪಘಾತಕ್ಕೆ ಸಿಲುಕುತ್ತಿರುವುದು ನಿಜಕ್ಕೂ ಜನರಲ್ಲಿ ಆತಂಕ ಮೂಡಿಸಿದೆ.

ಚಿಗರಿ ಬಸ್ ಅಪಘಾತ ಇದೆ ಮೊದಲೇನಲ್ಲ. ಇದಕ್ಕೂ ಮುಂಚೆ ಹಲವು ಬಾರಿ ಎಲ್ಲೆಂದರಲ್ಲಿ ಡಿಕ್ಕಿ ಹೊಡೆಯುವ ಪ್ರಸಂಗಗಳನ್ನು ನೋಡಿದರೇ, ಇದು ಬ್ರೇಕ್ ಸಮಸ್ಯೆಯಿಂದ ಸಂಭವಿಸುತ್ತದೆಯೋ ಏನೋ ತಿಳಿದಂತಾಗಿದೆ. ಇನ್ನು ಇಂದು ಸಂಭವಿಸಿದ ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಅಪಘಾತ ಸಂಭವಿಸದ ಮಾರ್ಗದಲ್ಲಿ ವಾಹನ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಮಾನವೀಯತೆ ಮೆರೆದ ಶಾಸಕ ಕೋನರಡ್ಡಿ
ಬೈಕ್‌ಗಳ ಮಧ್ಯೆ ಡಿಕ್ಕಿ ಸಂಭವಿಸಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರ ಚಿಕಿತ್ಸೆಗೆ ಶಾಸಕ ಎನ್.ಎಚ್.ಕೋನರಡ್ಡಿ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಧಾರವಾಡದ ಕೆಲಗೇರಿ ಬಳಿ ಎರಡು ಬೈಕ್‌ಗಳ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಗಾಯಗೊಂಡಿದ್ದ. ಇದನ್ನು ಕಂಡ ಶಾಸಕ ಕೋನರಡ್ಡಿ, ಕೂಡಲೇ ಗಾಯಗೊಂಡ ವ್ಯಕ್ತಿಯನ್ನು ತಮ್ಮ ಮನೆಯ ಬಳಿ ಕೂರಿಸಿ ತಾವೇ 108 ಅಂಬ್ಯುಲೆನ್ಸ್‌ಗೆ ಕರೆ ಮಾಡಿ ಚಿಕಿತ್ಸೆಗೆ ಕಳುಹಿಸಿಕೊಟ್ಟಿದ್ದಾರೆ.
ವಿದ್ಯಾರ್ಥಿಗಳ ಬೈಕ್ ಹಾಗೂ ಸರ್ಕಾರಿ ಬಸ್ ನಡುವೆ ಅಪಘಾತ
ಹಾಗೆಯೇ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳ ಬೈಕ್ ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲೇ ಮೃತಪಟ್ಟು, ಮತ್ತೋರ್ವ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಹಾಗೂ ಮಾಗಡಿ ಹೆದ್ದಾರಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಸರ್ಕಾರಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಲ್ಲಿ ಹಾರೋಹಳ್ಳಿಯ ಬೆಳ್ಳನ ಕುಪ್ಪೆ ನಿವಾಸಿ ದರ್ಶನ್ (19) ಮೃತಪಟ್ಟಿದ್ದಾನೆ. ಆತನ ಜೊತೆಗಿದ್ದ ಹಾರೋಹಳ್ಳಿಯ ಮೆಗಳ ಬೀದಿಯ ಭರತ್‌ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ವಿದ್ಯಾರ್ಥಿಯನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಐಟಿಐ ವಿದ್ಯಾರ್ಥಿಗಳಾದ ದರ್ಶನ್ ಹಾಗೂ ಭರತ್ ಪರೀಕ್ಷೆ ಬರೆಯಲು ಹಾರೋಹಳ್ಳಿಯಿಂದ ಬೈಕ್‌ನಲ್ಲಿ ಮಾಗಡಿಗೆ ತೆರಳುವ ಸಮಯದಲ್ಲಿ ಮಾಗಡಿ ಸಮೀಪದ ಜೋಡುಗಟ್ಟೆ ಕ್ರಾಸ್ ಬಳಿ ಮಾಗಡಿಯಿಂದ ರಾಮನಗರ ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿಯಾಗಿತ್ತು.
ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಮೃತ ದರ್ಶನ್ ಬೈಕ್ ಸಮೇತ ಬಸ್ ಮುಂಭಾಗಕ್ಕೆ ಸಿಲುಕಿರುವುದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿತ್ತು. ಇನ್ನು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು.
ಅಪಘಾತದ ನಡೆದ ಜೋಡುಗಟ್ಟೆ ಕ್ರಾಸ್ ಬಳಿ ತೀವ್ರ ತಿರುವಿರುವ ಕಾರಣ ಇದೇ ಸ್ಥಳದಲ್ಲೇ ಪದೇಪದೇ ಅಪಘಾತಗಳು ನಡೆಯುತ್ತಿರುತ್ತವೆ. ಅಪಘಾತಗಳನ್ನು ತಡೆಯಲು ಸಂಬಂಧಿಸಿದ ಅಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮಕೈಗೊಳ್ಳದೇ ಇರುವುದೇ ಇಂತಹ ದುರ್ಘಟನೆಗಳಿಗೆ ಕಾರಣ ಎಂದು ಸ್ಥಳೀಯರು ಹಾಗೂ ಅಪಘಾತದ ಪ್ರತ್ಯಕ್ಷ ದರ್ಶಿಗಳು ಆರೋಪಿಸಿದ್ದಾರೆ. ಹೀಗಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ಜೋಡುಗಟ್ಟೆ ಕ್ರಾಸ್ ಬಳಿ ನಡೆಯುತ್ತಿರುವ ಅಪಘಾತಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ.












Click it and Unblock the Notifications