Bus Accident: ಕೋಲಾರ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ: ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
Bus Accident: ರಾಜ್ಯದಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಹಾಗೆಯೇ ಇದೀಗ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ಗುಂಟಪಲ್ಲಿ ಕ್ರಾಸ್ ಬಳಿ ನಿನ್ನೆ ಅಂದರೆ ಮಾರ್ಚ್ 11ರ ತಡರಾತ್ರಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಆಂದ್ರಪ್ರದೇಶ ಮೂಲದ ಮದನಪಲ್ಲಿಯ ಗಂಗಾಧರ್ ಎಂಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿದ್ದ ಖಾಸಗಿ ಬಸ್ ಓವರ್ ಟೆಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಂದ್ರಪ್ರದೇಶದ ಮದನಪಲ್ಲಿ ಹಾಗೂ ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭೀಕರ ಅಪಘಾತ: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನಲ್ಲಿ ಚಿಕ್ಕಿಂದುವಾಡಿ ಬಳಿಯ ಮುಖ್ಯ ರಸ್ತೆಯಲ್ಲಿ ಇತ್ತೀಚೆಗಷ್ಟೇ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇವರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ನಡೆಯುತ್ತಿದ್ದು, ಈ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಮತ್ತೊಂದೆಡೆ, ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದ, 33 ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಕೆಲವು ತಿಂಗಳುಗಳ ಹಿಂದೆಯಷ್ಟೇ ಧ್ರಪ್ರದೇಶದಲ್ಲಿ ನಡೆದಿತ್ತು.
ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿತ್ತು. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿತ್ತು.
ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ಇನ್ನು ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಈ ಭೀಕರ ಅಪಘಾತ ಸಂಭವಿಸಿದ್ದು, ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲಮನೇರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಮೊಗಿಲಿ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ಅದೇ ರಸ್ತೆಯಲ್ಲಿ ಕಬ್ಬಿಣದ ಲೋಡ್‌ನೊಂದಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡು ವಾಹನಗಳು ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತದ ತೀವ್ರತೆ ಹೆಚ್ಚಿದೆ ಎನ್ನಲಾಗಿದೆ.












Click it and Unblock the Notifications