ಹುಬ್ಬಳ್ಳಿ: ಬಾಲಕಿ ಅಪಹರಿಸಿ ಅತ್ಯಾಚಾರ, JDS ಮುಖಂಡನ ಬಂಧನ

Posted By:
Subscribe to Oneindia Kannada

ಹುಬ್ಬಳ್ಳಿ, ಜೂನ್ 14 : ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಜೆಡಿಎಸ್ ಮುಖಂಡ ಮುಕ್ತುಂಸಾಬ್ ಸೋಗಲದ್ ಎಂಬುವವರನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೇ 5ರಂದು ಬೆಳಗಾವಿ ಜಿಲ್ಲೆಯ ಬಾಲಕಿಯನ್ನು ಹುಬ್ಬಳ್ಳಿಯ ಹಳೇ ಬಸ್‌ ನಿಲ್ದಾಣದಿಂದ ಬಾಲಕಿಯನ್ನ ಅಪಹರಿಸಿ, ವಿದ್ಯಾನಗರದ ಲಾಡ್ಜ್ ವೊಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತ ಬಾಲಕಿ ನೀಡಿದ ಮಾಹಿತಿ ಮೇರೆಗೆ ಮುಕ್ತುಂಸಾಬ್ ಸೋಗಲದ್ ಬಂಧಿಸಲಾಗಿದೆ.

ಐಸ್ ಕ್ರೀಂ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ ಯತ್ನ, ಆರೋಪಿ ಬಂಧನ

Accused arrested for minor girl kidnap and rape in Hubballi

ಪೊಲೀಸರು ಲಾಡ್ಜ್ ಗೆ ಭೇಟಿ ನೀಡಿದ ವೇಳೆ ಹಿಂಬಾಗಿಲ ಮೂಲಕ ಆರೋಪಿ ಪರಾರಿಯಾಗಿದ್ದ. ಈ ಬಗ್ಗೆ ವಿದ್ಯಾನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಬಂಧನಕ್ಕೆ ವಿಳಂಬವಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ವಿದ್ಯಾನಗರ ಠಾಣೆಯಿಂದ ಆಶೋಕನಗರ ಠಾಣೆಗೆ ವರ್ಗಾಯಿಸಲಾಗಿತ್ತು.

ಬಾಲಕಿ ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಅಪಹರಣಕ್ಕೆ ಬಳಸಿದ ಕಾರೊಂದನ್ನು ವಶಕ್ಕೆ ಪಡೆದು ವಿಚಾರಣೆ ಮುಂದುರಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Vidya nagar police of Hubballi have apprehended the tantric who was absconding after kidnap and raping a girl. Hubballi JDS leader Maktoum Sogalad arrested accused.
Please Wait while comments are loading...