• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿಯಲ್ಲಿ ನಟಿ ಉಮಾಶ್ರೀ ಕಾರು ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು

|

ಹುಬ್ಬಳ್ಳಿ, ನವೆಂಬರ್ 21: ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಈ ಬಗ್ಗೆ ಸುದ್ದಿವಾಹಿನಿಗಳು ವರದಿ ಮಾಡಿದ್ದು, ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ಶುಕ್ರವಾರ ರಾತ್ರಿ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸ್ ಮೂಲಗಳು ತಿಳಿಸಿರುವಂತೆ ಅಪಘಾತಕ್ಕೀಡಾಗ ಕಾರು ಚಿತ್ರನಟಿ ಹಾಗೂ ರಾಜಕಾರಣಿ ಉಮಾಶ್ರೀ ಅವರಿಗೆ ಸೇರಿದ್ದು ಎನ್ನಲಾಗಿದೆ.

ಮೃತರು ಮತ್ತು ಗಾಯಾಳುಗಳೆಲ್ಲರೂ ಬಲೆನೋ ಕಾರಿನಲ್ಲಿದ್ದವರು. ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಬಲೆನೋ ಕಾರು, ಗದಗದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದಿವೆ.

ಈ ಕುರಿತು ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದೇವೆ ಎಂದು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

Breaking:ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಇದ್ದ ಕಾರು ಅಪಘಾತ

ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಸಮೀಪ ಅಪಘಾತ ನಡೆದಿದ್ದು, ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿಗೆ ಬಂದ ಕಾರುಗಳ ನಡುವೆ ಡಿಕ್ಕಿಯಾಗಿದೆ.

   Corona ಪ್ರಕರಣಗಳ ಅಸಲಿ ಸಂಖ್ಯೆ ತಿಳಿದರೆ ಭಯವಾಗೋದಂತೂ ಖಂಡಿತ | Oneindia Kannada

   ಧಾರವಾಡ ಮೂಲದ ಶಾರದಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

   English summary
   Former minister and actress Umashree's car crashed after two people died on the spot in Hubballi.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X