ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫೆಬ್ರವರಿ 16ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನ ಸಂಚಾರ

|
Google Oneindia Kannada News

ಹುಬ್ಬಳ್ಳಿ, ಫೆಬ್ರವರಿ 10: ಉತ್ತರ ಕರ್ನಾಟಕ ಭಾಗದ ಜನರಿಗೆ ಸಿಹಿಸುದ್ದಿ. ಹುಬ್ಬಳ್ಳಿ-ಮುಂಬೈ ನಡುವೆ ಏರ್ ಇಂಡಿಯಾ ವಿಮಾನ ಸಂಚಾರವನ್ನು ಆರಂಭಿಸುವುದಾಗಿ ಘೋಷಣೆ ಮಾಡಿದೆ. ಫೆಬ್ರವರಿ 16ರಿಂದ ವಿಮಾನ ಸಂಚಾರ ಆರಂಭವಾಗಲಿದೆ.

ಏರ್ ಇಂಡಿಯಾ ಮುಂಬೈ-ಹುಬ್ಬಳ್ಳಿ ನಡುವೆ ಏರ್ ಬಸ್ ಸಂಚಾರವನ್ನು ಆರಂಭಿಸಲಿದೆ. ವಾರದಲ್ಲಿ ಮೂರು ದಿನ ಉಭಯ ನಗರಗಳ ನಡುವೆ ಏರ್ ಬಸ್ ಸಂಚಾರ ನಡೆಸಲಿದೆ. ಇದರಿಂದಾಗಿ ಎರಡೂ ನಗರದ ಜನರಿಗೆ ಅನುಕೂಲವಾಗಲಿದೆ.

ಹುಬ್ಬಳ್ಳಿ, ಕಲಬುರಗಿಯಿಂದ ತಿರುಪತಿಗೆ ವಿಮಾನ; ವೇಳಾಪಟ್ಟಿ ಹುಬ್ಬಳ್ಳಿ, ಕಲಬುರಗಿಯಿಂದ ತಿರುಪತಿಗೆ ವಿಮಾನ; ವೇಳಾಪಟ್ಟಿ

ಫೆಬ್ರವರಿ 16ರಿಂದ ಏರ್ ಬಸ್ ಸಂಚಾರ ಆರಂಭವಾಗಲಿದೆ. ಮಂಗಳವಾ, ಶುಕ್ರವಾರ ಮತ್ತು ಶನಿವಾರ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನ ಸಂಚಾರ ನಡೆಸಲಿದೆ. ಟಿಕೆಟ್ ಬುಕ್ಕಿಂಗ್‌ಗಾಗಿ ಏರ್ ಇಂಡಿಯಾ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾರ್ಗೋ ಟರ್ಮಿನಲ್ ಆರಂಭ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾರ್ಗೋ ಟರ್ಮಿನಲ್ ಆರಂಭ

Air India Air Bus Between Hubballi And Mumbai

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹಲವಾರು ನಗರಗಳಿಗೆ ವಿಮಾನಗಳ ಸಂಪರ್ಕಿವಿದೆ. ಏರ್ ಇಂಡಿಯಾ, ಸ್ಟಾರ್ ಏರ್ ಸೇರಿದಂತೆ ಪ್ರಮುಖ ವಿಮಾನಯಾನ ಸಂಸ್ಥೆಗಳು ಹುಬ್ಬಳ್ಳಿ ಮತ್ತು ವಿವಿಧ ನಗರಗಳಿಗೆ ಸಂಪರ್ಕವನ್ನು ಕಲ್ಪಿಸುತ್ತವೆ.

ಹುಬ್ಬಳ್ಳಿ-ತಿರುಪತಿ ವಿಮಾನ ಹಾರಾಟ ಹುಬ್ಬಳ್ಳಿ-ತಿರುಪತಿ ವಿಮಾನ ಹಾರಾಟ

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಗೊಳಿಸಿ ಪ್ರಯಾಣಿಕರ ಹೊಸ ಟರ್ಮಿನಲ್ ನಿರ್ಮಾಣ ಮಾಡಲಾಗಿದೆ. ಉಡಾನ್ ಯೋಜನೆಯಡಿ ಬೆಂಗಳೂರು, ತಿರುಪತಿ, ದೆಹಲಿ ಸೇರಿದಂತೆ ವಿವಿಧ ನಗರಗಳಿಗೆ ಹುಬ್ಬಳ್ಳಿಯಿಂದ ವಿಮಾನಗಳು ಹಾರಾಟ ನಡೆಸುತ್ತವೆ.

ಉತ್ತರ ಕರ್ನಾಟಕ ಭಾಗಕ್ಕೆ ಹುಬ್ಬಳ್ಳಿ ಪ್ರಮುಖ ವಿಮಾನ ನಿಲ್ದಾಣವಾಗಿದೆ. ಲಾಕ್ ಡೌನ್ ಅವಧಿಯಲ್ಲಿ ಬಂದ್ ಆಗಿದ್ದ ವಿಮಾನ ನಿಲ್ದಾಣದಲ್ಲಿ ಈಗ ವಿಮಾನಗಳ ಹಾರಾಟ ಆರಂಭವಾಗಿದೆ.

Recommended Video

ಶಿಕ್ಷಣ ಸಚಿವರಿಂದ ಮಹತ್ವದ ನಿರ್ಧಾರ! | Oneindia Kannada

ವಿಮಾನ ನಿಲ್ದಾಣದ ಹಳೆ ಟರ್ಮಿನಲ್ ಅನ್ನು ಸುಮಾರು 60.6 ಲಕ್ಷ ರೂ. ವೆಚ್ಚದಲ್ಲಿ ಸರಕು ಟರ್ಮಿನಲ್ ಆಗಿ ಪರಿವರ್ತನೆ ಮಾಡಲಾಗಿದೆ. 700 ಚದರ ಮೀಟರ್ ಪ್ರದೇಶದ ಟರ್ಮಿನಲ್‌ನಲ್ಲಿ 15,00 ಮೆಟ್ರಿಕ್ ಟನ್ ಸರಕನ್ನು ಸಂಗ್ರಹ ಮಾಡಬಹುದಾಗಿದೆ.

English summary
Air India will introduced Air Bus between Hubballi and Mumbai three days a week. Flight will run on every Tuesday , Friday and Saturday from February 16, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X