ಏರ್ ಶೋ ಸ್ಥಳಾಂತರದ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಹುಬ್ಬಳ್ಳಿ, ಆಗಸ್ಟ್ 12 : 'ಉತ್ತರ ಪ್ರದೇಶದಲ್ಲಿ ಬಿಜೆಪಿ ಹೆಚ್ಚಿನ ವೋಟ್ ಬ್ಯಾಂಕ್ ಹೊಂದಿದೆ. 2019ರ ಲೋಕಸಭೆ ಚುನಾವಣೆಗಾಗಿ ಏರ್ ಶೋ ಅನ್ನು ಬೆಂಗಳೂರಿನಿಂದ ಲಕ್ನೋಗೆ ಸ್ಥಳಾಂತರ ಮಾಡಲಾಗಿದೆ' ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಬೆಂಗಳೂರಿನಲ್ಲಿ ಏರ್ ಶೋ ನಡೆಸಲು ಅಗತ್ಯವಾದ ಎಲ್ಲಾ ವ್ಯವಸ್ಥೆಗಳಿವೆ. ಇಲ್ಲಿ ಹಲವಾರು ಬಾರಿ ಶೋ ನಡೆಸಲಾಗಿದೆ' ಎಂದರು.

'ಏರ್ ಶೋ ಸ್ಥಳಾಂತರವಾಗಿರುವ ಬಗ್ಗೆ ರಕ್ಷಣಾ ಇಲಾಖೆಯಿಂದ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏರ್ ಶೋ ಸ್ಥಳಾಂತರ ಮಾಡಲಾಗುತ್ತಿದೆ' ಎಂದು ದೂರಿದರು.
ಟ್ವೀಟ್ : ಶನಿವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಟ್ವೀಟ್ ಮಾಡಿದ್ದರು. ಏರ್ ಶೋ ಸ್ಥಳಾಂತರವಾಗುತ್ತಿರುವ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಗ್ರಹಿಸಿದ್ದರು.
Reports of #AeroIndia being moved out of Bengaluru are very unfortunate.
— Dr. G Parameshwara (@DrParameshwara) August 11, 2018
We have been India's Defence Hub since Independence, but under the NDA we are constantly losing key defense projects and flagship programs.
I request @nsitharaman to clarify her stand on the issue.
11 ವರ್ಷಗಳಿಂದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಉತ್ತರ ಪ್ರದೇಶದ ಲಕ್ನೋಗೆ ಏರ್ ಶೋ ಸ್ಥಳಾಂತರ ಮಾಡುತ್ತಿರುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏರ್ ಶೋ ವನ್ನು ಲಕ್ನೋಗೆ ಸ್ಥಳಾಂತರ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಲಕ್ನೋದ ಭಕ್ಷಿತಾ ತಲಾಬ್ ವಾಯುನೆಲೆಯಲ್ಲಿ ಏರ್ ಶೋ ನಡೆಯುವ ಸಾಧ್ಯತೆ ಇದೆ.












Click it and Unblock the Notifications