ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏರ್ ಶೋ ಸ್ಥಳಾಂತರದ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!

By Gururaj
|
Google Oneindia Kannada News

ಹುಬ್ಬಳ್ಳಿ, ಆಗಸ್ಟ್ 12 : 'ಉತ್ತರ ಪ್ರದೇಶದಲ್ಲಿ ಬಿಜೆಪಿ ಹೆಚ್ಚಿನ ವೋಟ್ ಬ್ಯಾಂಕ್ ಹೊಂದಿದೆ. 2019ರ ಲೋಕಸಭೆ ಚುನಾವಣೆಗಾಗಿ ಏರ್ ಶೋ ಅನ್ನು ಬೆಂಗಳೂರಿನಿಂದ ಲಕ್ನೋಗೆ ಸ್ಥಳಾಂತರ ಮಾಡಲಾಗಿದೆ' ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಬೆಂಗಳೂರಿನಲ್ಲಿ ಏರ್ ಶೋ ನಡೆಸಲು ಅಗತ್ಯವಾದ ಎಲ್ಲಾ ವ್ಯವಸ್ಥೆಗಳಿವೆ. ಇಲ್ಲಿ ಹಲವಾರು ಬಾರಿ ಶೋ ನಡೆಸಲಾಗಿದೆ' ಎಂದರು.

ಬೆಂಗಳೂರಿನಿಂದ ಏರೋ ಇಂಡಿಯಾ ಲಕ್ನೋಗೆ ಶಿಫ್ಟ್ ?ಬೆಂಗಳೂರಿನಿಂದ ಏರೋ ಇಂಡಿಯಾ ಲಕ್ನೋಗೆ ಶಿಫ್ಟ್ ?

Air Show shifted to UP for Lok Sabha Elections 2019

ಬೆಂಗಳೂರಿನಿಂದ ಏರ್ ಶೋ ಸ್ಥಳಾಂತರ?, ಪರಮೇಶ್ವರ ಟ್ವೀಟ್ಬೆಂಗಳೂರಿನಿಂದ ಏರ್ ಶೋ ಸ್ಥಳಾಂತರ?, ಪರಮೇಶ್ವರ ಟ್ವೀಟ್

'ಏರ್ ಶೋ ಸ್ಥಳಾಂತರವಾಗಿರುವ ಬಗ್ಗೆ ರಕ್ಷಣಾ ಇಲಾಖೆಯಿಂದ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏರ್‌ ಶೋ ಸ್ಥಳಾಂತರ ಮಾಡಲಾಗುತ್ತಿದೆ' ಎಂದು ದೂರಿದರು.

ಟ್ವೀಟ್ : ಶನಿವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಟ್ವೀಟ್ ಮಾಡಿದ್ದರು. ಏರ್ ಶೋ ಸ್ಥಳಾಂತರವಾಗುತ್ತಿರುವ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಗ್ರಹಿಸಿದ್ದರು.

11 ವರ್ಷಗಳಿಂದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಉತ್ತರ ಪ್ರದೇಶದ ಲಕ್ನೋಗೆ ಏರ್ ಶೋ ಸ್ಥಳಾಂತರ ಮಾಡುತ್ತಿರುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏರ್ ಶೋ ವನ್ನು ಲಕ್ನೋಗೆ ಸ್ಥಳಾಂತರ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಲಕ್ನೋದ ಭಕ್ಷಿತಾ ತಲಾಬ್ ವಾಯುನೆಲೆಯಲ್ಲಿ ಏರ್ ಶೋ ನಡೆಯುವ ಸಾಧ್ಯತೆ ಇದೆ.

English summary
Karnataka Chief Minister H.D.Kumaraswamy alleged that Air Show was shifted to Lucknow for Lok Sabha Elections 2019, BJP has a firm voter base in Uttar Pradesh
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X