ಹುಬ್ಬಳ್ಳಿ-ಹೈದರಾಬಾದ್ ವಿಮಾನ ಸಂಚಾರ ಆರಂಭ

ಹುಬ್ಬಳ್ಳಿ, ಮಾರ್ಚ್ 31; ಅಲಯನ್ಸ್ ಏರ್ ಹುಬ್ಬಳ್ಳಿ-ಹೈದರಾಬಾದ್ ಮಾರ್ಗದಲ್ಲಿ ವಿಮಾನ ಸಂಚಾರವನ್ನು ಆರಂಭಿಸಿದೆ. ಹುಬ್ಬಳ್ಳಿ-ಮಂಗಳೂರು ನಡುವೆ ವಿಮಾನ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲು ಸಹ ಮನವಿ ಮಾಡಲಾಗಿದೆ.

ಬುಧವಾರ ಅಲಯನ್ಸ್ ಏರ್ ಹುಬ್ಬಳ್ಳ-ಹೈದರಾಬಾದ್ ವಿಮಾನ ಸೇವೆಗೆ ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. ಅಲಯನ್ಸ್ ಏರ್ ಸಿಇಒ ಹರ್ಪ್ರೀತ್ ಎ ಡಿ ಸಿಂಗ್ ಮತ್ತು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಉಪಸ್ಥಿತರಿದ್ದರು.

ಎಐ 9879 ವಿಮಾನ ಹೈದರಾಬಾದ್-ಹುಬ್ಬಳ್ಳಿ ನಡುವೆ ಸಂಚಾರ ನಡೆಸಲಿದೆ. ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೈದರಾಬಾದ್‌ನಿಂದ ಬೆಳಗ್ಗೆ 6.25ಕ್ಕೆ ಹೊರಡುವ ವಿಮಾನ 8 ಗಂಟೆಗೆ ಹುಬ್ಬಳ್ಳಿಗೆ ತಲುಪಲಿದೆ.

Alliance Air Flight Service From Hubballi And Hyderabad

ಎಐ 9890 ವಿಮಾನ ಹುಬ್ಬಳ್ಳಿ-ಹೈದರಾಬಾದ್ ನಡುವೆ ಸಂಚಾರ ನಡೆಸಲಿದೆ. ಬೆಳಗ್ಗೆ 8.25ಕ್ಕೆ ಹುಬ್ಬಳ್ಳಿಯಿಂದ ಹೊರಡುವ ವಿಮಾನ 9.55ಕ್ಕೆ ಹೈದರಾಬಾದ್ ತಲುಪಲಿದೆ. ಸೋಮವಾರ, ಬುಧವಾರ ಮತ್ತು ಶುಕ್ರವಾರ ಈ ವಿಮಾನ ಸಂಚಾರ ನಡೆಸಲಿದೆ.

ವಿಮಾನ ಸೇವೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, "ಹುಬ್ಬಳ್ಳಿ - ಹೈದರಾಬಾದ್ ವಿಮಾನ ಸೇವೆಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಧನ್ಯವಾದ ತಿಳಿಸುತ್ತೇನೆ" ಎಂದರು.

ಹುಬ್ಬಳ್ಳಿ-ಮಂಗಳೂರು ವಿಮಾನ ಸೇವೆಯನ್ನು ಕೂಡಲೇ ಪ್ರಾರಂಭಿಸಲು ಅಲಯನ್ಸ್ ಏರ್ ಸಿಇಒ ಅವರಿಗೆ ಮನವಿ ಮಾಡಿದ್ದೇನೆ, ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ" ಎಂದು ಹೇಳಿದರು.

"ಹುಬ್ಬಳ್ಳಿಯಿಂದ Middle East ನೇರ ವಿಮಾನ ಸೇವೆ ಪ್ರಾರಂಭಿಸಲು ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಿಸುವ ಪ್ರಸ್ತಾಪವನ್ನು ಕಳುಹಿಸುವಂತೆ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದೇನೆ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+