ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೋಶಿ ನಿವಾಸದಲ್ಲಿ ಉಪಹಾರ ಸೇವಿಸಿ ದೆಹಲಿಗೆ ಅಮಿತ್ ಶಾ ವಾಪಸ್

|
Google Oneindia Kannada News

ಹುಬ್ಬಳ್ಳಿ, ಜನವರಿ 19 : ಕರ್ನಾಟಕದ ಪ್ರವಾಸ ಮುಗಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ವಾಪಸ್ ಆದರು. ಶನಿವಾರ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಭಾನುವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಅಮಿತ್ ಶಾ ದೆಹಲಿಗೆ ಪ್ರಯಾಣ ಬೆಳೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಮಿತ್ ಶಾ ಅವರನ್ನು ಬೀಳ್ಕೊಟ್ಟರು.

ಟ್ವಿಟ್ಟರ್‌ನಲ್ಲಿ ಅಮಿತ್ ಶಾ ಭಾಷಣ ಬದಲು ಸಿನಿಮಾ ಹಾಡು ಕೇಳಿಸಿದ ಬಿಜೆಪಿ!ಟ್ವಿಟ್ಟರ್‌ನಲ್ಲಿ ಅಮಿತ್ ಶಾ ಭಾಷಣ ಬದಲು ಸಿನಿಮಾ ಹಾಡು ಕೇಳಿಸಿದ ಬಿಜೆಪಿ!

ಜನವರಿ 18ರ ಶನಿವಾರ ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಸಮಾವೇಶ ಉದ್ದೇಶಿಸಿ ಅಮಿತ್ ಶಾ ಮಾತನಾಡಿದ್ದರು. ಬಳಿಕ ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ದೆಹಲಿಗೆ ವಾಪಸ್ ತೆರಳಿದರು.

ಸಂಪುಟ ವಿಸ್ತರಣೆ: ಯಡಿಯೂರಪ್ಪ ಗೆ ಅಮಿತ್ ಶಾ ಸೂಚನೆಸಂಪುಟ ವಿಸ್ತರಣೆ: ಯಡಿಯೂರಪ್ಪ ಗೆ ಅಮಿತ್ ಶಾ ಸೂಚನೆ

Amit Shah Return To Delhi From Hubballi

ಭಾನುವಾರ ಬೆಳಗ್ಗೆ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಅಮಿತ್ ಶಾ ಭೇಟಿ ನೀಡಿದರು. ಜೋಶಿ ಕುಟುಂಬಸ್ಥರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಅಮಿತ್ ಶಾ ಭೇಟಿ; ಎಚ್‌ಡಿಕೆ ಸರಣಿ ಟ್ವೀಟ್‌ ಅಮಿತ್ ಶಾ ಭೇಟಿ; ಎಚ್‌ಡಿಕೆ ಸರಣಿ ಟ್ವೀಟ್‌

ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಅಮಿತ್ ಶಾ ನಳಿನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರ ಜೊತೆ ಉಪಹಾರ ಸೇವಿಸಿದರು. ಅವಲಕ್ಕಿ, ಉಪ್ಪಿಟ್ಟು, ಪೂರಿ ಸೇವಿಸಿದ ಅವರು ಜೋಶಿ ನಿವಾಸದ ಮುಂದೆ ಸೇರಿದ್ದ ಕಾರ್ಯಕರ್ತರನ್ನು ಭೇಟಿ ಮಾಡಿದರು.

Amit Shah Return To Delhi From Hubballi

ಬಳಿಕ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ್ದ ಅಮಿತ್ ಶಾ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಹುಬ್ಬಳ್ಳಿಗೆ ತೆರಳಿದ್ದರು.

ಅಮಿತ್ ಶಾ ದೆಹಲಿಗೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಗುವಿಗೆ ಪೋಲಿಯೋ ಡ್ರಾಪ್ ಹಾಕುವ ಮೂಲಕ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.

English summary
Bharatiya Janata Party (BJP) President and Union home minister Amit Shah return to Delhi from Hubballi on Sunday, January 19, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X