ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಅಮಿತ್ ಶಾ ಭೇಟಿ
Recommended Video

ಹುಬ್ಬಳ್ಳಿ, ಏಪ್ರಿಲ್ 12 : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗುರುವಾರ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದರು. ಎರಡು ದಿನಗಳ ಪ್ರವಾಸಕ್ಕಾಗಿ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ.
ಗುರುವಾರ ಬೆಳಗ್ಗೆ ಅಮಿತ್ ಶಾ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದರು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂಪ್ಪ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎರಡು ದಿನದ ಕರ್ನಾಟಕ ಪ್ರವಾಸಕ್ಕಾಗಿ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಧಾರವಾಡ, ಹುಬ್ಬಳ್ಳಿ, ಗದಗ ಜಿಲ್ಲೆಯಲ್ಲಿ ಅವರು ಪ್ರವಾಸ ನಡೆಸಲಿದ್ದಾರೆ. ಏಪ್ರಿಲ್ 13ರಂದು ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ.

ಏಪ್ರಿಲ್ 13ರಂದು ಬಾಗಲಕೋಟೆಯಲ್ಲಿ ರೋಡ್ ಶೋ ನಡೆಸಲಿರುವ ಅಮಿತ್ ಶಾ, ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿ ಉಳಿದಿದ್ದು, ಅಮಿತ್ ಶಾ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಿ ಪಕ್ಷದ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಬಾಲಿವುಡ್ ನಟಿ ಕಾಜೋಲ್ ಭೇಟಿ
2017ರ ನವೆಂಬರ್‌ನಲ್ಲಿ ಬಾಲಿವುಡ್ ನಟಿ ಕಾಜೋಲ್ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದರು













Click it and Unblock the Notifications