ಲಕ್ಷಾಂತರ ಮೌಲ್ಯದ ರೂಪಾಯಿ ಆನೆ ದಂತದ ಕಲಾಕೃತಿ ಮಾರಾಟಕ್ಕೆ ಯತ್ನ: ಐವರ ಬಂಧನ
ಎಡಿಜಿಪಿ ಸಿ.ಐ.ಡಿ ಬೆಂಗಳೂರು ಮತ್ತು ಪ್ರಭಾರ ಡಿ.ಐ.ಜಿ.ಪಿ ಸಿಐಡಿ ಅರಣ್ಯ ಘಟಕ ಬೆಂಗಳೂರು ಹಾಗೂ ಪೊಲೀಸ್ ಉಪಾಧೀಕ್ಷಕರು ಸಿಐಡಿ ಅರಣ್ಯ ಘಟಕ ಹುಬ್ಬಳ್ಳಿ ವಿಭಾಗರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸಿದ
ಹುಬ್ಬಳ್ಳಿ, ಫೆಬ್ರವರಿ 16: ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ವಿಶೇಷ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದು, ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಎಡಿಜಿಪಿ ಸಿ.ಐ.ಡಿ ಬೆಂಗಳೂರು ಮತ್ತು ಪ್ರಭಾರ ಡಿ.ಐ.ಜಿ.ಪಿ ಸಿಐಡಿ ಅರಣ್ಯ ಘಟಕ ಬೆಂಗಳೂರು ಹಾಗೂ ಪೊಲೀಸ್ ಉಪಾಧೀಕ್ಷಕರು ಸಿಐಡಿ ಅರಣ್ಯ ಘಟಕ ಹುಬ್ಬಳ್ಳಿ ವಿಭಾಗರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಅರಣ್ಯ ಇಲಾಖೆಯು ಐವರನ್ನು ವಶಕ್ಕೆ ಪಡೆದಿದ್ದು, ಲಕ್ಷಾಂತರ ಮೌಲ್ಯದ ಆನೆ ದಂತದ ಕಲಾಕೃತಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕೊಲ್ಲಾಪೂರ ಮೂಲದ ಸಾತ್ ಶಹಾಜನ್ ಜಮಾದಾರ, ವಿಜಯ್ ರಾಜಾರಾಂ ಕುಂಬಾರ, ಸಾಗರ ಸುಭಾಷ ಪರಾಣಿಕ, ನಿಪ್ಪಾಣಿ ಮೂಲದ ವಿನಾಯಕ ನಾಮದೇವ ಕಾಂಬ್ಳೆ, ದಾನಜೀ ಪಾಂಡುರಂಗ ಪಾಟೀಲ್ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳು ಅಕ್ರಮವಾಗಿ ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ ಪೊಲೀಸರು 384 ಗ್ರಾಂ ತೂಕದ ಆನೆಯ ದಂತದಿಂದ ತಯಾರಿಸಿದ ಅಲಂಕಾರಿಕ ಪಟ್ಟಿಗೆ 112 ಗ್ರಾಂ ತೂಕದ ಆನೆಯ ದಂತದಿಂದ ತಯಾರಿಸಿದ ಕೆಂಪು ಹರಳು, ಇರುವ ಒಂದು ಖಡ್ಗ 350 ಗ್ರಾಂ ತೂಕದ ಆನೆಯ ದಂತದಿಂದ ಮಾಡಿದ ಒಂದು ಆಯತಾಕಾರದ ಪೆಟ್ಟಿಗೆ, 279 ಗ್ರಾಂ ತೂಕದ ಆನೆಯ ದಂತದಿಂದ ಮಾಡಿದ ಒಂದು ಮೊಟ್ಟೆಯಾಕಾರದ ಪೆಟ್ಟಿಗೆಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿತ ಸಾತ್ ಎನ್ನುವಾತನನ್ನು ಈ ಬಗ್ಗೆ ವಿಚಾರಣೆ ನಡೆಸಿದಾಗ, ತನ್ನ ತಂದೆಯವರಾದ ಶಹಜಾನ ಜಮಾದಾರ ರಾಜಸ್ಥಾನದಲ್ಲಿ ನಡೆಯುವ ಜಾತ್ರೆಗಳು ಸಂತೆಗಳಲ್ಲಿ ಸಾಧುಸಂತರ ಬಳಿಯಿಂದ ಅನೇಕ ವರ್ಷಗಳ ಹಿಂದೆ ಈ ವಸ್ತುಗಳನ್ನು ಸಂಗ್ರಹಿಸಿ ಮನೆಯಲ್ಲಿಟ್ಟಿದ್ದರು. ಅವುಗಳನ್ನು ಮಾರಾಟ ಮಾರಿದರೆ ಸಾಕಷ್ಟು ದುಡ್ಡು ಬರಬಹುದು ಎಂದು ತಿಳಿದು ನಾವು ಇಲ್ಲಿಗೆ ಮಾರಾಟ ಮಾಡಲು ಬಂದಿರುವುದಾಗಿ ಬಾಯಿ ಬಿಟ್ಟಿದ್ದಾರೆ.

ಆರೋಪಿತರ ವಿರುದ್ಧ 01/2023 ಕಲಂ 9,39,40, 48 (A)49(B), 50,51,55 R/W ಶೆಡ್ಯೂಲ್ (1) ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಸಾದ ಪಣೇಕರ್ ಹಾಗೂ ಸಿಬ್ಬಂದಿಗಳಾದ ಎಲ್.ಎ ಪಾಠಕ, ಅಶೋಕ ನಾಗರಹಳ್ಳಿ, ರವೀಂದ್ರ ಗೋಣೆನವರ, ಎಸ್.ಎಚ್. ಹುಲಗೇರ ಹಾಗೂ ದಿವ್ಯ ಎಸ್ ನಾಯ್ಕ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.












Click it and Unblock the Notifications