ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ವಾತಾವರಣವಿದೆ : ಯಡಿಯೂರಪ್ಪ

|
Google Oneindia Kannada News

ಹುಬ್ಬಳ್ಳಿ, ಮೇ 12 : 'ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶವಿದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.

ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ ಯಡಿಯೂರಪ್ಪ ಅವರು, 'ಕುಂದಗೋಳ, ಚಿಂಚೋಳಿ ಉಪ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುತ್ತಿದ್ದೇವೆ. ಎರಡೂ ಕಡೆ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ' ಎಂದರು.

ಉಪ ಚುನಾವಣೆ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಹಾದಿ ಸುಗಮ?ಉಪ ಚುನಾವಣೆ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಹಾದಿ ಸುಗಮ?

'ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವ ಅವಕಾಶವಿದೆ. ಪಕ್ಷದಲ್ಲಿ ಎಲ್ಲರೂ ಒಂದಾಗಿದ್ದೇವೆ. ನಮ್ಮ ಕಾರ್ಯಕರ್ತರಲ್ಲೂ ಯಾವುದೇ ಗೊಂದಲವಿಲ್ಲ. ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಗೆಲ್ಲುವ ವಿಶ್ವಾಸವಿದೆ' ಎಂದು ಹೇಳಿದರು.

ಜೂನ್ ನಲ್ಲಿ ಯಡಿಯೂರಪ್ಪ ಸರ್ಕಾರ ಅಸ್ತಿತ್ವಕ್ಕೆ : ಸೋಮಣ್ಣ ಭವಿಷ್ಯಜೂನ್ ನಲ್ಲಿ ಯಡಿಯೂರಪ್ಪ ಸರ್ಕಾರ ಅಸ್ತಿತ್ವಕ್ಕೆ : ಸೋಮಣ್ಣ ಭವಿಷ್ಯ

Yeddyurappa

'ಹಣದ ಬಲದಿಂದಾಗಿ ಉಪ ಚುನಾವಣೆಯಲ್ಲಿ ಏನೋ ಮಾಡುತ್ತೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಜನರ ಮೇಲೆ ಪಕ್ಷಕ್ಕೆ ನಂಬಿಕೆ ಇದೆ. ಅದರಿಂದಲೇ ನಾವು ಗೆದ್ದು ಬರುತ್ತೇವೆ' ಎಂದು ಯಡಿಯೂರಪ್ಪ ತಿಳಿಸಿದರು.

ಕುಂದಗೋಳ, ಚಿಂಚೋಳಿ ಚುನಾವಣೆ ಗೆಲ್ಲುತ್ತೇವೆ : ಯಡಿಯೂರಪ್ಪಕುಂದಗೋಳ, ಚಿಂಚೋಳಿ ಚುನಾವಣೆ ಗೆಲ್ಲುತ್ತೇವೆ : ಯಡಿಯೂರಪ್ಪ

'ರಾಜ್ಯದಲ್ಲಿ ಬದಲಾವಣೆಯಾಗಲಿದೆ, ಉಪ ಚುನಾವಣೆ ಗೆದ್ದ ಬಳಿಕ ವಿಧಾನಸಭೆಯಲ್ಲಿ ಪಕ್ಷದ ಬಲ ಹೆಚ್ಚಲಿದೆ ಪಕ್ಷೇತರ ಬೆಂಬಲವೂ ನಮಗೆ ಇದೆ' ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.

ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ 104 ಸದಸ್ಯ ಬಲ ಹೊಂದಿದೆ. ಮೇ 19ರಂದು ಕುಂದಗೋಳ, ಚಿಂಚೋಳಿ ಉಪ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

English summary
Karnataka BJP president B.S.Yeddyurappa said that there is an atmosphere for party to form government in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X