ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ-ಬಿ.ಎಸ್ ಯಡಿಯೂರಪ್ಪ
ಹುಬ್ಬಳ್ಳಿ, ಏಪ್ರಿಲ್ 27: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆದೇಶದಂತೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಬರಲಿದೆ. ಮೋದಿಜಿ, ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ನಾಯಕರು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದರಿಂದ ಇಡೀ ರಾಜ್ಯದ ಚಿತ್ರಣವೇ ಬದಲಾಗಿದೆ. ನೂರಕ್ಕೆ ನೂರು ನಾವು ಈ ಬಾರಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯುದರಿಂದ ರಾಜ್ಯದಲ್ಲಿ ಆಳ್ವಿಕೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಳ್ಳು ಭರವಸೆ ಕೊಡುವುದನ್ನು ಬಿಡಬೇಕು. ಯಾಕೆಂದರೆ ಈ ಬಾರಿ ನೀವು ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿನೇ ಅಧಿಕಾರಕ್ಕೆ ಬರುತ್ತದೆ. ನಾವೇನು ಭರವಸೆ ಕೊಟ್ಟಿದ್ದೇವೆ ಅದನ್ನು ನಾವು ಈಡೇರಿಸು ಕೆಲಸ ಮಾಡುತ್ತೇವೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯನೋ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದರು.
ಕಾರ್ಯಕರ್ತರನ್ನು ಮತ್ತು ಪ್ರತಿ ಭೂತ್‌ನಲ್ಲಿ ಬಲಿಷ್ಠಗೋಳಿಸಬೇಕು. ಇನ್ನೂ 10 ದಿನ ಕಾರ್ಯಕರ್ತರು ಕೆಲಸ ಮಾಡಿದರೆ ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರು ಜನರ ದಾರಿ ತಪ್ಪಿಸುತ್ತಿದ್ದಾರೆ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಚುನಾವಣೆಯಲ್ಲಿ ಜನರಿಗೆ ಮೋಸ ಮಾಡಲೆಂದು ಕಾಂಗ್ರೆಸ್ ಗ್ಯಾರಂಟಿ ಭರವಸೆ ನೀಡುತ್ತಿದೆ. ಕಾಂಗ್ರೆಸ್ ನಾಯಕರ ಮೇಲೆ ಜನರಿಗೆ ವಿಶ್ವಾಸವಿಲ್ಲ. ಅದಕ್ಕೆ ಕಾರ್ಡ್ ಕೊಡುತ್ತಿದ್ದಾರೆ. ಇದು ಜನರನ್ನು ದಾರಿ ತಪ್ಪಿಸುವ ಹೊಸ ತಂತ್ರವಷ್ಟೆ ಎಂದು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೇವಡಿ ಮಾಡಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚುನಾವಣೆವರೆಗೂ ಅಷ್ಟೇ ಗ್ಯಾರಂಟಿ ಇರುತ್ತವೆ. ಚುನಾವಣೆ ಬಳಿಕ ಯಾವುದು ಈಡೇರುವುದಿಲ್ಲ. ಇದಕ್ಕೆ ಉದಾಹರಣೆಗೆ ಬೇರೆ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರಕ್ತದಲ್ಲಿ ಬರೆದುಕೊಡುವ ಅವಶ್ಯಕತೆ ಇಲ್ಲ. 150 ಸ್ಥಾನ ಯಾರಿಗೆ ನೀಡಬೇಕು ಎಂಬುದು ಜನ ನಿರ್ಧಾರ ಮಾಡುತ್ತಾರೆ. ನಮಗೆ ಜನರ ಮೇಲೆ ವಿಶ್ವಾಸವಿದೆ. ಸಂಪೂರ್ಣ ಬಹುಮತ ನೀಡುತ್ತಾರೆ ಎಂದರು.
ಅಲ್ಲದೇ ಯಡಿಯೂರಪ್ಪ ಅವರು ಜನರ ನಾಡಿಮಿಡಿತ ಅರಿತಿದ್ದು, ಅವರ ಅನುಭವದ ಪ್ರಕಾರ ಬಿಜೆಪಿ ಹೆಚ್ಚಿನ ಸ್ಥಾನ ಪಡೆದು ಅಧಿಕಾರಕ್ಕೆರಲಿದೆ ಎಂದು ತಿಳಿಸಿದರು.
ಪ್ರಧಾನಿ ಮೋದಿಯವರು ಸಂವಾದದಲ್ಲಿ ಬೂತ್ ಗೆಲ್ಲುವ ಮೂಲಕ ಕ್ಷೇತ್ರ ಗೆಲ್ಲುವ ಅಂಶವನ್ನು ಒತ್ತಿ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪಕ್ಷದಲ್ಲಿ ಸಂಘಟನೆ ಮತ್ತು ಚುನಾವಣೆ ತಂತ್ರ ಮಾಡಲಾಗಿದೆ. ಡಬಲ್ ಎಂಜಿನ ಸರ್ಕಾರ ಪೂರಕವಾಗಿದೆ ಎಂಬುದ ಕುರಿತು ಹೇಳಿದ್ದಾರೆ.
ಮೂಲಸೌಕರ್ಯ ಸೇರಿದಂತೆ ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. 75 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಕಾಂಗ್ರೆಸ್ ಒದಗಿಸಿತ್ತು. ಆದರೆ ಬಿಜೆಪಿ ಜಲ ಜೀವ ಮಿಷನ್ ಯೋಜನೆಯಲ್ಲಿ ಕಳೆದ ಮೂರು ವರ್ಷ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಿದೆ. ಅವರ ಅವಧಿಯಲ್ಲಿ 5 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯಾಗಿತ್ತು. ಈಗ ಕೇವಲ ಐದು ವರ್ಷದಲ್ಲಿ 6 ಸಾವಿರ ಕಿ.ಮೀ ಅಭಿವೃದ್ಧಿ ಮಾಡಲಾಗಿದೆ. ಕಿಶಾಸ ಸನ್ಮಾನ ಯೋಜನೆಯಲ್ಲಿ 16 ಸಾವಿರ ಕೋಟಿ ಹಣ ರೈತರ ಖಾತೆಗೆ ಹಾಕಲಾಗಿದೆ. ಬಡವರು, ರೈತರು, ಮಹಿಳೆಯರು, ನೀರು, ರಸ್ತೆ ಹಲವಾರು ವಲಯಗಳಲ್ಲಿ ಅಭಿವೃದ್ಧಿ ಮಾಡಿದ್ದು, ಇದು ಡಬಲ್ ಎಂಜಿನ ಸರ್ಕಾರ ದಿಂದ ಮಾತ್ರ ಸಾಧ್ಯ ಎಂದರು.
ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ತರುವ ನಿಟ್ಟಿನಲ್ಲಿ ಎಲ್ಲ ನಾಯಕರು ಶ್ರಮವಹಿಸುತ್ತೇವೆ. ಜನರಿಗೂ ನಮ್ಮ ಮೇಲೆ ವಿಶ್ವಾಸವಿದ್ದು ಬಹುಮತ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಸ್ವಾಸ ವ್ಯಕ್ತಪಡಿಸಿದರು.












Click it and Unblock the Notifications