ಕಾಂಗ್ರೆಸ್ ಹಿರಿಯ ನಾಯಕರೇ ಬಜರಂಗದಳ ಬ್ಯಾನ್ ಮಾಡಲ್ಲ ಅಂದಿದ್ದಾರೆ: ಜಗದೀಶ್ ಶೆಟ್ಟರ್ ಸ್ಪಷ್ಟನೆ
ಹುಬ್ಬಳ್ಳಿ, ಮೇ, 05: ವಿಧಾನಸಭೆ ಚುನಾವಣೆ ಹಿನ್ನೆಲೆ ಇತ್ತೀಚೆಗಷ್ಟೇ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳಿದ್ದರು. ಇದು ರಾಜ್ಯದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು, ಮತ್ತೊಂದೆಡೆ ಬಿಜೆಪಿ ನಾಯಕರು ಕೂಡ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಲೇ ಇದ್ದಾರೆ. ಇದೀಗ ಈ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಯಾವುದೇ ರೀತಿಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡಲ್ಲವೆಂದು ಕಾಂಗ್ರೆಸ್ ಹಿರಿಯ ನಾಯಕರು ಮತ್ತು ಪ್ರಾಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆಂದು ಹೇಳಿದರು.
ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಇದರ ಬಗ್ಗೆ ನಾನು ಹೆಚ್ವು ಮಾತನಾಡುವುದಿಲ್ಲ. ಯಾವುದೇ ಸಂಸ್ಥೆ, ಸಂಘಟನೆಯನ್ನು ಬ್ಯಾನ್ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಹೊರತು ರಾಜ್ಯ ಸರ್ಕಾರಕ್ಕೆ ಇರುವುದಿಲ್ಲ ಎಂದರು. ಇನ್ನು ಎಸ್‌ಸಿ, ಎಸ್‌ಟಿ ಮೀಸಲಾತಿ ರದ್ದುಗೋಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಒಟ್ಟಾರೆ ಸೀಜ್ ಆಗಿದೆ. ಮುಸ್ಲಿಮರ ಮೀಸಲಾತಿ ತೆಗೆದು ಹಂಚಿಕೆ ಮಾಡಿದ್ದರು. ಸುಪ್ರೀಂ ಕೋರ್ಟ್ ಅದನ್ನು ರದ್ದು ಮಾಡಿದೆ. ಆದೇಶ ಹೊರಗೆ ಬರುವವರೆಗೂ ಕಾಯಬೇಕು ಎಂದರು. ಮೀಸಲಾತಿ ವಿಚಾರ ಕೋರ್ಟ್‌ನಲ್ಲಿರುವುದರಿಂದ ಏನು ಮಾಡುವುದಕ್ಕೆ ಆಗುವುದಿಲ್ಲ. ಕಾನೂನು ಪ್ರಕಾರ ಹೋಗಬೇಕು ಎಂದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಹೇಳಿದ್ದೇನು?
ಇನ್ನು ಹುಬ್ಬಳ್ಳಿಯ ಕಾಡಸಿದಶ್ವೇರ ಮಹಾವಿದ್ಯಾಲಯದಲ್ಲಿ ನಡೆದ ಯುಥ್ ಪೊರಂನಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನವೀಸ್ ಭಾಗವಹಿಸಿ ದೇಶದ ಬೆಳವಣಿಗೆಗೆ ವಿದ್ಯಾರ್ಥಿಗಳ ಕೊಡುಗೆ ಬಗ್ಗೆ ತಿಳಿಸಿಕೊಟ್ಟರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸ್ಪಷ್ಟವಾದ ಬಹುಮತ ಬರುತ್ತದೆ. ಕರ್ನಾಟಕದ ಜನತೆ ಮೋದಿ ಜೊತೆಗೆ ಇದ್ದಾರೆ, ಕರ್ನಾಟಕದ ಜನತೆಯ ನಾಡಿಮೀಡಿತವೇ ಬಿಜೆಪಿ ಆಗಿದೆ ಎಂದರು.
ಬಿಜೆಪಿಗೆ ಮತದಾರರ ಬೆಂಬಲವಿದೆ
ಕರ್ನಾಟಕದ ಮತದಾರರರು ಪ್ರಧಾನಿ ನರೇಂದ್ರ ಮೋದಿ ಅವರ ಹಿಂದೆ ಇದ್ದಾರೆ. ಇಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಹಾಗೆಯೆ ಬಜರಂಗದಳ ನಿಷೇಧ ಕುರಿತು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪ್ರಸ್ತಾಪ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಜರಂಗ ದಳ ನಿಷೇಧ ವಿಷಯದಿಂದ ಯಾವುದೇ ಪರಿಣಾಮ ಆಗುವುದಿಲ್ಲ. ಈ ಕುರಿತು ತಮ್ಮ ಹೊಟ್ಟೆಯಲ್ಲಿ ಏನು ಇದೆ ಅದನ್ನು ಬಾಯಿಯಲ್ಲಿ ಹೇಳಿದ್ದಾರೆ ಎಂದರು.
ಬಿಜೆಪಿಯನ್ನು ಸೋಲಿಸಲು ಆಗಲ್ಲ
ಜನರ ಮನಸ್ಸಿನಲ್ಲಿ ಬಜರಂಗದಳ ಶಾಶ್ವತವಾಗಿದೆ. ಆದರೆ ಕಾಂಗ್ರೆಸ್‌ನವರು ಬಜರಂಗದಳ ನಿಷೇಧಕ್ಕೆ ಮುಂದಾಗಿದ್ದಾರೆ. ಯಾರು ಏನೇ ಮಾಡಿದರೂ ಬಿಜೆಪಿಯನ್ನು ಸೋಲಿಸಲು ಆಗಲ್ಲ ಎಂದರು. ಇನ್ನು ಬೆಳಗಾವಿಯಲ್ಲಿ ಕಪ್ಪು ಬಾವುಟ ಪ್ರದರ್ಶನದ ಬಗ್ಗೆ ಮಾಧ್ಯಮದರು ಕೇಳಿದ ಪ್ರಶ್ನೆಗೆ ಉತ್ತಿರಿಸಿದ ಅವರು, ನಾನು ಬಿಜೆಪಿ ಪರವಾಗಿ ಪ್ರಚಾರ ಮಾಡಲು ಹೋಗಿದ್ದೆ. ಆ ಸಮಯದಲ್ಲಿ ಈ ರೀತಿಯ ಘಟನೆ ನಡೆದಿದೆ ಎಂದರು
ಹಾಗೆಯೆ ಜಗದೀಶ್ ಶೆಟ್ಟರ್, ಸವದಿ ಬಿಜೆಪಿ ತೊರೆದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಕ್ಷದ ಜೊತೆಗೆ ಜನರಿದ್ದಾರೆ. ಒಬ್ಬ ನಾಯಕ ಹೋದರೆ ಏನು ಆಗುವುದಿಲ್ಲ. ಪಾರ್ಟಿ ತೊರದವರಿಗೆ ದುಃಖ ಆಗುತ್ತದೆ. ಜನರು ಯಾವಾಗಲೂ ನಾಯಕನ ಜೊತೆಗೆ ಇರಲ್ಲ, ಪಕ್ಷದ ಜೊತೆಗೆ ಇರುತ್ತಾರೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮುಂತಾದವರು ನಮ್ಮ ಜೊತೆಗೆ ಇದ್ದಾರೆ. ಅವರು ನಮಗೆ ಸಾಥ್ ಕೊಡುತ್ತಾರೆ. ಯಾರ ಜೊತೆಗೆ ಹೋಗಿದ್ದಾರೆ ಅವರಿಗೆ ಲಿಂಗಾಯತರೇ ಬೈಯುತ್ತಾರೆ ಎಂದು ತಿಳಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications