ಹುಬ್ಬಳ್ಳಿ-ಧಾರವಾಡದಲ್ಲಿ ಹೊತ್ತಿದ ಮಹಾದಾಯಿ ಕಿಚ್ಚು
ಹುಬ್ಬಳ್ಳಿ, ಡಿಸೆಂಬರ್ 27 : ಮಹಾದಾಯಿ, ಕಳಸಾ-ಬಂಡೂರಿ ಹೋರಾಟ ತಾರಕಕ್ಕೇರಿದೆ. ಇಡೀ ಉತ್ತರ ಕರ್ನಾಟಕಕ್ಕೆ ಮಹಾದಾಯಿಯ ಕಿಚ್ಚಿನಿಂದ ಹೊತ್ತಿ ಉರಿಯುತ್ತಿದೆ. ಬುಧವಾರ ಬಂದ್ ಹಿನ್ನೆಲೆಯಲ್ಲಿ ರೈಲ್ವೇ ನಿಲ್ದಾಣದೆದುರು ಸಂಗ್ರಾಮ ಸೇನೆಯಿಂದ ಪ್ರತಿಭಟನೆ ನಡೆಯಿತು. ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಹೋರಾಟಗಾರರನ್ನು ಪೊಲೀಸರು ತಡೆದಿದ್ದಾರೆ.
ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಟಾಯರ್ ಗೆ ಬೆಂಕಿಹ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ ಹುಬ್ಬಳ್ಳಿ- ಧಾರವಾಡ ಓಲಾ ಕ್ಯಾಬ್ ಅಸೋಸಿಯೇಷನ್ ವತಿಯಿಂದ ಕೂಡ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ದಿಕ್ಕಾರ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಪಕ್ಷದ ನಾಯಕರಿಗೆ ಒಳ್ಳೆ ಬುದ್ದಿ ಬರಲೆಂದು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹೋರಾಟಗಾರರಿಂದ ಹೋಮ ಹವನ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಸಕಲ ವಿಧಿವಾಧನಗಳ ಪ್ರಕಾರ ನಡು ರಸ್ತೆಯಲ್ಲಿ ಹೋಮ ಮಾಡಲಾಯಿತು. ರಾಜಕೀಯ ಬಿಟ್ಟು ನೀರು ಕೊಡಲು ಮುಂದಾಗಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಿದರು.












Click it and Unblock the Notifications