ಯಾವುದೇ ತಕರಾರು ಇಲ್ಲದೇ ರೈತರಿಗೆ 10 ಲಕ್ಷ ವರೆಗೆ ಬೆಳೆ ಸಾಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಧಾರವಾಡ, ಸೆಪ್ಟೆಂಬರ್‌ 14: ಯಾವುದೇ ತಕರಾರು ಇಲ್ಲದೇ ರೈತರಿಗೆ 10 ಲಕ್ಷ ರೂಪಾಯಿವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. ಇದನ್ನು ಬ್ಯಾಂಕ್‌ ಸಿಬ್ಬಂದಿ ಪಾಲನೆ ಮಾಡಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಧಾರವಾಡ ಜಿಲ್ಲಾ ಸಲಹಾ ಸಮಿತಿ ಸಭೆಯ ಮಾತನಾಡಿದ ಅವರು, ಈಗ ರೈತರು ಸಂಕಷ್ಟದಲ್ಲಿದ್ದು, ಅನಗತ್ಯವಾಗಿ ಕೆಲವು ಬ್ಯಾಂಕ್‌ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ. ಬ್ಯಾಂಕ್‌ ಸಿಬ್ಬಂದಿ ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು ಎಂದರು.

Banks Should Not Bother Farmers In Giving Crop Loans Says Central Minister Pralhad Joshi

ಕೇಂದ್ರ ಸರ್ಕಾರದಿಂದ ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಕೇಂದ್ರ ಸರಕಾರ ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡುತ್ತಿದೆ. ಬ್ಯಾಂಕಗಳು ನಿಗದಿತ ಗುರಿಗೆ ಅನುಗುಣವಾಗಿ ಸಾಲ ಬಿಡುಗಡೆ ಮಾಡಬೇಕು. ಕಾಲಮಿತಿಯಲ್ಲಿ ಪ್ರಗತಿ ಸಾಧಿಸಬೇಕೆಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಉಪಸ್ಥಿರಿದ್ದ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭುದೇವ ಎನ್.ಜಿ ಮಾತನಾಡಿ, ಕೃಷಿ ಬೆಳೆ ಸಾಲವು ಜೂನ್ 2024ರ ಅಂತ್ಯಕ್ಕೆ 610.8 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದೆ. ಜೂನ್ 2024ರ ಅಂತ್ಯಕ್ಕೆ 650.34 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಮತ್ತು ಶೇ.106.47 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ.

Banks Should Not Bother Farmers In Giving Crop Loans Says Central Minister Pralhad Joshi

ಕೃಷಿ ಅವಧಿ ಸಾಲವು ಜೂನ್ 2024 ರ ಅಂತ್ಯಕ್ಕೆ 615.66 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 641.57 ಕೋ.ರೂಗಳಷ್ಟು ಸಾಧನೆಯಾಗಿದೆ. ಶೇ. 104.18 ರಷ್ಟು ತ್ರೈಮಾಸಿಕ ಗುರಿಗೆ ಸಾಧನೆಯಾಗಿದೆ ಎಂದರು.

ಸೂಕ್ಷ್ಮ ,ಸಣ್ಣ, ಹಾಗೂ ಮಧ್ಯಮ ಉದ್ಯಮಗಳು ಜೂನ್ 2024ರ ಅಂತ್ಯಕ್ಕೆ 2357.81 ಕೋ.ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 3312.98 ಕೋ.ರೂ.ಗಳಷ್ಟು ಸಾಧನೆಯಾಗಿದೆ. ಶೇ.140.51 ರಷ್ಟು ತ್ರೈಮಾಸಿಕ ಗುರಿಗೆ ಶೇಕಡಾವಾರು ಸಾಧನೆಯಾಗಿದೆ. ಇತರೆ ಆಧ್ಯತಾ ವಲಯದಲ್ಲಿ ಜೂನ್ 2024ರ ಅಂತ್ಯಕ್ಕೆ 180.23 ಕೋಟಿ.ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 147.8 ಕೋಟಿ.ರೂ. ಗಳಷ್ಟು ಸಾಧನೆಯಾಗಿದೆ. ಮತ್ತು ಶೇ 82.01 ರಷ್ಟು ತ್ರೈಮಾಸಿಕ ಗುರಿಗೆ ಶೇಕಡಾವಾರು ಸಾಧನೆಯಾಗಿದೆ ಎಂದು ವಿವರಿಸಿದರು.

ಆಧ್ಯತಾ ರಹಿತಾ ವಲಯದಲ್ಲಿ ಜೂನ್ 2024 ರ ಅಂತ್ಯಕ್ಕೆ 1828.76 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 2701.13 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಶೇ.147.7 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ. ಒಟ್ಟಾರೆಯಾಗಿ ಜೂನ್ 2024 ರ ಅಂತ್ಯಕ್ಕೆ 5593.26 ಕೋಟಿ ರೂ.ಗಳ ಗುರಿಯನ್ನು ಹೊಂದಿದ್ದು, 2024 ರ ಅಂತ್ಯಕ್ಕೆ 7453.82 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ.133.26 ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+