ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಬಿಜೆಪಿ ಶಾಸಕ
ಹುಬ್ಬಳ್ಳಿ, ಏಪ್ರಿಲ್ 26: ರಾಜ್ಯದಲ್ಲಿ ಮುಸ್ಲಿ ಮೀಸಲಾತಿ ಕುರಿತ ಹೇಳಿಕೆ, ಆರೋಪಗಳು ಮುನ್ನೆಲೆಗೆ ಬಂದಿವೆ. ಈ ಮಧ್ಯೆ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗುವುದು ಎಂದು ವಿಜಯಪುರ ಶಾಸಕ ಹಾಗೂ ಬಿಜೆಪಿ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಅದೇ ಮೀಸಲಾತಿಯನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಿಗೆ ಹೆಚ್ಚಳ ಮಾಡುತ್ತೇವೆ. ಮುಸಲ್ಮಾನರ ಮತಗಳು ಕಾಂಗ್ರೆಸ್ ಗೆ ಮಾತ್ರ ಮೀಸಲು. ಹೀಗಾಗಿ ಅವರು ಮತ ಪಡೆಯಲು ನಾವು ಯಾವುದೇ ರೀತಿಯ ಒಲೈಕೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಸ್ಲಿಂ ಮೀಸಲಾತಿಯಲ್ಲಿ ಸಿಎಂಗೆ ಸ್ಪಷ್ಟತೆ ಇಲ್ಲ
ರಾಜ್ಯದ ಮುಸಲ್ಮಾನರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ಪಷ್ಟತೆ ಇಲ್ಲ ಧರ್ಮಾಧಾರಿತ ಸಂವಿಧಾನ ಆಧಾರಿತ ಮೀಸಲಾತಿ ಕೊಡಲು ಅವಕಾಶ ಇಲ್ಲ ಎಂದು ಅವರು ವಿವರಿಸಿದರು.
ಪ್ರಧಾನಿ, ಅಮಿತ್ ಶಾ ಹೇಳಿದ್ದು ಇದನ್ನೆ: ಯತ್ನಾಳ್
ಮುಂದಿನ ದಿನಗಳಲ್ಲಿ ಧರ್ಮದಲ್ಲಿ ಮೀಸಲಾತಿ ಕೊಟ್ಟಿದ್ದೆ ಆದಲ್ಲಿ ನಾವು ಮುಸ್ಲಿಂ ಮೀಸಲಾತಿ ರದ್ದು ಮಾಡೇ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ ಎಂದರು.
ಒಂದು ವಾರ ಕಾಂಗ್ರೆಸ್ ನಾಯಕರು ಎಲ್ಲಿದ್ದರು?
ಹುಬ್ಬಳ್ಳಿಯಲ್ಲಿನ ನೇಹಾ ಕೊಲೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ಕೊಟ್ಟ ಯತ್ನಾಳ್ ಅವರು, ಪ್ರಕರಣ ನಡೆದು ಒಂದು ವಾರ ಕಾಂಗ್ರೆಸ್‌ನವರು ಎಲ್ಲಿ ಹೋಗಿದ್ದರು. ಕೊಲೆ ಇದು ವೈಯಕ್ತಿಕ ಕಾರಣಕ್ಕೆ ನಡೆದಿದೆ, ಆಕಸ್ಮಿಕ ಎಂದು ಏಕೆ ಹೇಳಿದರು ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಪ್ರಿಯಾಂಕಾ, ಡಿ.ಕೆ ಶಿವಕುಮಾರ್ ಸಿದ್ಧರಾಮಯ್ಯ ಅವರು ಹುಬ್ಬಳ್ಳಿಗೆ ಬಂದು ಕಣ್ಣೀರು ಹಾಕುತ್ತಿದ್ದಾರೆ. ಒಬ್ಬ ಹಿಂದು ಹೆಣ್ಣು ಮಗಳ ಕೊಲೆ ನಡೆದರೆ, ಒಂದು ವಾರ ಬಿಟ್ಟು ಇವರು ಸಾಂತ್ವನ ಹೇಳಲು ಬರುತ್ತಿದ್ದಾರೆ. ರಾಹುಲ್ ಗಾಂಧಿ ವಿಜಯಪುರ ಬಂದಾಗ ಹುಬ್ಬಳ್ಳಿಗೆ ಬರಬೇಕಾಗಿತ್ತು. ಸಾಂತ್ವನ ಹೇಳಿ ಹೋಗಬೇಕಾಗಿತ್ತು ಎಂದಿದ್ದಾರೆ.
ಕಾಂಗ್ರೆಸ್‌ಗೆ ನಾವೇ ಚೊಂಬು ಕೊಡುತ್ತೇವೆ
ಈ ಮೂಲಕ ಕಾಂಗ್ರೆಸ್ ನಾಯಕರು ತುಷ್ಟೀಕರಣ ಮಾಡುತ್ತಿದ್ದಾರೆ. ಇದನ್ನು ಜನರೆಲ್ಲರು ಗಮನ ಹರಿಸುತ್ತಿದ್ದಾರೆ ಎಂದರು.
ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ್ ಚೊಂಬು ಇರಿಸಿಕೊಂಡು ಸುದ್ದಿಗೋಷ್ಠಿ ಮಾಡಿದರು. ಜೂನ್ ನಂತರ ನಮ್ಮ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲಿದೆ. ಅವರಿಗೆ ನಾವೇ ಚೊಂಬು ಕೊಡುತ್ತೇವೆ ಎಂದು ತಿರುಗೇಟು ಕೊಟ್ಟರು.
ಶುಕ್ರವಾರ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಮತದಾನ ಚುರುಕುನಿಂದ ನಡೆದಿದೆ. ಬೆಳಿಗ್ಗೆ 6 ಗಂಟೆಯಿಂದಲೇ ಜನರು ಮತಗಟ್ಟಿಯತ್ತ ಬರುತ್ತಿದ್ದಾರೆ. ಬೆಂಗಳೂರು ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಮತದಾನ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಹೆಚ್ಚು ಮತದಾನ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications