ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಿಮ್ಸ್ ಆಸ್ಪತ್ರೆಗೆ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಮೇ31: ಇತ್ತಿಚೆಗೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಜನರು ಮೃತಪಟ್ಟಿದ್ದು, 15 ಜನರು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿ ಧೈರ್ಯ ತುಂಬಿದರು.

ಧಾರವಾಡ ಬಾಡಾ ಬಳಿ ರಸ್ತೆ ಅಪಘಾತದ ಪ್ರಕರಣದಲ್ಲಿ ಮೃತಪಟ್ಟಿರುವ ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ರಸ್ತೆ ಅಪಘಾತದಲ್ಲಿ 11 ಜನ ಮೃತಪಟ್ಟಿದ್ದಾರೆ.‌ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಹುಬ್ಬಳ್ಳಿ ರಸ್ತೆ ಅಪಘಾತ: ಕೇಂದ್ರದಿಂದ 2 ಲಕ್ಷ ರೂ, ರಾಜ್ಯದಿಂದ 5 ಲಕ್ಷ ರೂ ಪರಿಹಾರಹುಬ್ಬಳ್ಳಿ ರಸ್ತೆ ಅಪಘಾತ: ಕೇಂದ್ರದಿಂದ 2 ಲಕ್ಷ ರೂ, ರಾಜ್ಯದಿಂದ 5 ಲಕ್ಷ ರೂ ಪರಿಹಾರ

ಗಾಯಗೊಂಡ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದು, ಹೆದ್ದಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಲಾಗಿದೆ. ಆದರೇ ಬಾಡ ಅಪಘಾತದಲ್ಲಿ ಮೃತಪಟ್ಟವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ.‌ಅಪಘಾತ ಪ್ರಕರಣಗಳಲ್ಲಿ ತಾರತಮ್ಯ ಏಕೆ..? ಕೇವಲ ಪರಿಹಾರ ಘೋಷಣೆ ಮಾಡಿ ಕೈತೊಳೆದುಕೊಳ್ಳಬೇಡಿ,‌ ಆದಷ್ಟು ಈ ಕುಟುಂಬಗಳಿಗೆ ಪರಿಹಾರ ನೀಡಿ,‌ ಒಂದು ವೇಳೆ ಪರಿಹಾರ ನೀಡದೆ ಇದ್ದರೆ ನಿಮ್ಮ ಧಾರವಾಡ ಜಿಲ್ಲೆಯ ಜನತೆ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.

Basava Jayamrityunjaya Swamiji Visits KIMS hospital

ಪರಿಹಾರ ಧನ ವಿತರಿಸಲು ಸಿಎಂ ಜೊತೆಗೆ ಚರ್ಚಿಸುವೆ

ಬೈಪಾಸ್ ಬಳಿಯಲ್ಲಿ ನಡೆದ ಅಪಘಾತದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮದ ಜೊತೆ ವಿಶ್ವಾಸ ವ್ಯಕ್ತಪಡಿಸಿದರು. ಮಾತನಾಡಿದ ಅವರು, ನಿನ್ನೆ ಸೋಮವಾರ ರಾತ್ರಿ ಭೀಕರ ಅಪಘಾತ ನಡೆದಿದ್ದು, ಪರಿಹಾರ ಧನ ವಿತರಿಸಲು ಸಿಎಂ ಜೊತೆಗೆ ಚರ್ಚಿಸುವೆ. ಅಲ್ಲದೇ ಈ ಬೈಪಾಸ್ ನಲ್ಲಿ ಸಾಕಷ್ಟು ಅಪಘಾತಗಳು ನಡೆದಿದ್ದು, ಕೂಡಲೇ ಈ ಬಗ್ಗೆ ಸೂಕ್ತ ಕ್ರಮಗಳನ್ನು ಜರುಗಿಸಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದರು. ಬೈಪಾಸ್ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದ ಅಪಘಾತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಸ್ತೆ ಅಗಲೀಕರಣ ಹಾಗೂ ಚತುಷ್ಪದ ರಸ್ತೆಯ ಕಾಮಗಾರಿಯನ್ನು ಎರಡು ವರ್ಷಗಳಲ್ಲಿಯೇ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತ ಮಾಡುವ ಮೂಲಕ ಅಪಘಾತಗಳಿಗೆ ಬ್ರೇಕ್ ಹಾಕಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ವಿಶ್ವಾಸ ವ್ಯಕ್ತಪಡಿಸಿದರು.

Basava Jayamrityunjaya Swamiji Visits KIMS hospital

ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಈಗಾಗಲೇ ಭೂಸ್ವಾದೀನ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲದೆ ಜೂನ್ ಮೊದಲ ವಾರದಲ್ಲಿ ಟೆಕ್ನಿಕಲ್ ಟೀಮ್ ಭೇಟಿ ನೀಡಿ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳಿಗೆ ಎರಡು ವರ್ಷ ಟೈಮ್ ಬಾಂಡ್ ಇರುತ್ತದೆ. ಟೈಮ್ ಬಾಂಡ್ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಕೋರಲಾಗಿದೆ ಎಂದು ಅವರು ಹೇಳಿದರು.

(ಒನ್ಇಂಡಿಯಾ ಸುದ್ದಿ)

English summary
Panchama Peetha Seer Basava Jaya Mrityunjaya Swamiji visits KIMS hospital at Hubbali to meet 15 victims who were injured in the road accident in Bada village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X