Breaking; ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಡಿಸೆಂಬರ್ 14; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬುಧವಾರ ಹುಬ್ಬಳ್ಳಿಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು. ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಜೊತೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದರು.

Basavaraj Bommai In Delhi To Attend Meeting Called By Amit Shah

ಗೃಹ ಸಚಿವ ಅಮಿತ್ ಶಾ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಈ ಸಭೆ ಸಂಜೆ 7 ಗಂಟೆಗೆ ನಡೆಯಲಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ದೆಹಲಿಗೆ ಪ್ರಯಾಣ ಬೆಳೆಸಿದರು.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅಮಿತ್ ಶಾ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉಭಯ ರಾಜ್ಯಗಳ ಗೃಹ ಸಚಿವರು ಸೇರಿದಂತೆ ಕೆಲವು ಸಚಿವರು ಸಹ ಸಭೆಯಲ್ಲಿ ಉಪಸ್ಥಿತರಿರುತ್ತಾರೆ.

ಬುಧವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಅಮಿತ್ ಶಾ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ನಾನು ಎಲ್ಲಾ ಸಿದ್ಧತೆಗಳ ಜೊತೆ ಹೋಗುತ್ತಿದ್ದೇನೆ" ಎಂದು ಹೇಳಿದರು.

"ಮಹಾರಾಷ್ಟ್ರ ಗಡಿ ವಿಚಾರವನ್ನು ದಶಕಗಳ ಕಾಲದಿಂದಲೂ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ. ನಾವು ನಮ್ಮ ನಿಲುವನ್ನು ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ತಿಳಿಸುತ್ತೇವೆ" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಕಾರಣವಾಗಿದೆ. ಎರಡೂ ರಾಜ್ಯಗಳ ರಾಜಕೀಯ ನಾಯಕರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಕರ್ನಾಟಕದ ಸಾರಿಗೆ ಬಸ್‌ಗಳಿಗೆ ಮಹಾರಾಷ್ಟ್ರದಲ್ಲಿ ಮಸಿ ಬಳಿದ ಪ್ರಕರಣಗಳು ಸಹ ನಡೆದಿವೆ.

ಡಿಸೆಂಬರ್ 19ರಿಂದ ಕರ್ನಾಟಕದ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಆರಂಭವಾಗಲಿದೆ. ಈ ಸಮಯದಲ್ಲಿ ಗಡಿ ವಿವಾದ ಮುಂದಿಟ್ಟುಕೊಂಡು ಎಂಇಸ್ ಗಲಾಟೆಯನ್ನು ಸಹ ಮಾಡಬಹುದಾಗಿದೆ. ಆದ್ದರಿಂದ ಸಂಜೆ 7 ಗಂಟೆಗೆ ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+