ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ- ಬೊಮ್ಮಾಯಿ
ಹುಬ್ಬಳ್ಳಿ, ಜೂನ್ 18: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡಜನರಿಗೆ ಒಳ್ಳೆಯದು ಆದರೆ ಸಾಕು. ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆಯೇ ಇಲ್ಲ. ರಾಜ್ಯದ ರೈತರು ಅಕ್ಕಿ ಕೊಡಲು ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿ ಅಲ್ಲ ಎಂದರು.

ಅಕಸ್ಮಾತ್ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ ನಾವು ಪ್ರತಿಭಟನೆ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದರು.
ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರ್ಕಾರ ತಗೆದುಕೊಂಡು ಏನು ಮಾಡಬೇಕು ಎಂದ ಅವರು ವಿಪಕ್ಷ ನಾಯಕನ ಆಯ್ಕೆ ಕುರಿತು ಪ್ರತಿಕ್ರಿಯೆ ನೀಡಿ, ಸೆಷನ್ಸ್ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂದು ಮಾಹಿತಿ ನೀಡಿದರು.

ಛಬ್ಬಿ ಗ್ರಾಮದಲ್ಲಿ ಪ್ರೌಢಶಾಲಾ ನಿರ್ಮಾಣ ಭೂಮಿ ಪೂಜೆ: ಮಾಜಿ ಸಿಎಂ ಬೊಮ್ಮಾಯಿ, ರಿಷಬ್ ಶೆಟ್ಟಿ ಭಾಗಿ..!
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢಶಾಲಾ ನಿರ್ಮಾಣದ ಭೂಮಿ ಪೂಜೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಚಿತ್ರ ನಟ ರಿಷಬ್ ಶೆಟ್ಟಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ನೆರವೇರಿಸಿದರು.
ಗಣಪತಿ ಪ್ರತಿಷ್ಠಾನದ ಮೂಲಕ ಸಾಕಷ್ಟು ಹೆಸರು ಮಾಡಿರುವ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢಶಾಲಾ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ಸಂಪ್ರದಾಯ ಬದ್ಧವಾಗಿ ಮಾಡಲಾಯಿತು.
ಇನ್ನೂ ಕಾಂತಾರ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಗ್ರಾಮಸ್ಥರು ತೀವ್ರ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಂ.ಆರ್. ಪಾಟೀಲ್ ಸೇರಿದಂತೆ ಇತರ ಗಣ್ಯರು ಹಾಜರಿದ್ದರು.












Click it and Unblock the Notifications