ಹುಬ್ಬಳ್ಳಿಯಲ್ಲಿ ದಿಢೀರ್‌ ಅಮಿತ್ ಶಾ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ: ಚುನಾವಣೆ ಬಗ್ಗೆ ಸುಧೀರ್ಘ ಚರ್ಚೆ

ಹುಬ್ಬಳ್ಳಿ, ಏಪ್ರಿಲ್‌, 26: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡಿರುವ ಭಾರತೀಯ ಜನತಾ ಪಾರ್ಟಿ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯಲ್ಲಿ ಬಿಜೆಪಿ ಭದ್ರಪಡಿಸಲು ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲು ರಾಜ್ಯ ನಾಯಕರ ತಂಡ ಹುಬ್ಬಳ್ಳಿಗೆ ಲಗ್ಗೆ ಇಡುತ್ತಿದೆ.

ಚುನಾವಣಾ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ಖಾಸಗಿ ಹೊಟೇಲ್‌ಗೆ ಆಗಮಿಸಿದ್ದಾರೆ.ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ತಂಗಿರುವ ಅಮಿತ್ ಶಾ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸುವ ಸಾಧ್ಯತೆ ದಟ್ಟವಾಗಿದೆ.

Basavaraj Bommai suddenly met Amit Shah in Hubballi

ಇನ್ನೂ ಬೆಳಿಗ್ಗೆಯಿಂದಲೂ ಕೇಂದ್ರ ಸಚಿವ ಅಮಿತ್ ಶಾ ಅವರು ಕಾರ್ಯಕರ್ತರ ಹಾಗೂ ನಾಯಕರ ಜೊತೆಗೆ ಗೌಪ್ಯ ಸಭೆ ನಡೆಸುತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಪ್ರಮುಖರ ಸಭೆಯಲ್ಲಿ ಭಾಗಿ ಆಗಿದ್ದಾರೆ.

ಶೆಟ್ಟರ್‌ ಮಣಿಸಲು ಬಿಜೆಪಿ ರಣತಂತ್ರ

ಇನ್ನು ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯಲ್ಲಿನ ಬಿಜೆಪಿಯನ್ನು ಭದ್ರಪಡಿಸುವ ಉದ್ದೇಶದಿಂದ ಅಮಿತ್‌ ಶಾ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಗಿದೆ. ಹಾಗೆಯೆ ಈ ಮೂಲಕ ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರಿರುವ ಜಗದೀಶ್‌ ಶೆಟ್ಟರ್ ಅವರನ್ನು ಮಣಿಸಲು ಸಭೆಯಲ್ಲಿ ರಣತಂತ್ರ ರೂಪಿಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಕುರಿತು ಸಭೆಯನ್ನು ಮಾಡಲಾಗಿದ್ದು, ಹಾಗೆಯೆ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಬಲಗೊಳಿಸುವ ಬಗ್ಗೆಯೂ ಚರ್ಚೆ ಮಾಡಲಾಯಿತು. ಇತ್ತೀಚೆಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ್‌ ಶೆಟ್ಟರ್‌ಗೆ ಠಕ್ಕರ್ ಕೊಡಲು ಬಿಜೆಪಿ ರಣತಂತ್ರ ರೂಪಿಸಿದ್ದು, ಈ ಬಗ್ಗೆ ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಪ್ರಲ್ಹಾದ್‌ ಜೋಶಿ ನೇತೃತ್ವದಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಬಿಜೆಪಿ ಮತಗಳನ್ನು ಭದ್ರಪಡಿಸುವುದರ ಜೊತೆಗೆ ಇನ್ನುಳಿದ ಮತಗಳನ್ನು ಸೆಳೆಯುವ ಬಗ್ಗೆ ಚುನಾವಣಾ ಚಾಣಕ್ಯ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಬಿಜೆಪಿ ಬಾವುಟವನ್ನು ಮತ್ತಷ್ಟು ರಾರಾಜಿಸುವಂತೆ ಮಾಡಲು ಕಾರ್ಯಕರ್ತರು ಹಾಗೂ ನಾಯಕರು ಶ್ರಮಿಸುತ್ತಿದ್ದು, ಇಂತಹದೊಂದು ಮಹತ್ವದ ಸಭೆಗೆ ಶಾಸಕ ಅರವಿಂದ ಬೆಲ್ಲದ್‌, ಅಮೃತ್‌ ದೇಸಾಯಿ, ಸಚಿವ ಶಂಕತ್‌ ಪಾಟೀಲ ಮುನೇನಕೊಪ್ಪ ಸಾಥ್ ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ

ಅಲ್ಲದೆ ಲಿಂಗಾಯುತರ ಬಗ್ಗೆ ಹಗುರವಾಗಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷಮೆ ಕೇಳಿಲ್ಲ. ಸಿದ್ದರಾಮಯ್ಯ ಕ್ಷಮೆ ಕೇಳಬೇಕು. ಈ ಬಗ್ಗೆ ಈಗಾಗಲೇ ಚುನಾವಣೆ ಆಯೋಗಕ್ಕೆ ದೂರ ಕೊಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದರು. ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷಮೆ ಕೇಳಬೇಕು. ಗೌರವಯುತ ಸ್ಥಾನದಲ್ಲಿರುವವರು ಹಾಗೂ ಸಾರ್ವಜನಿಕ ಜೀವನದಲ್ಲಿರುವವರು ನೈತಿಕತೆ ಇದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.

ಲಿಂಗಾಯತ ಸಮುದಾಯ ನಮಗೆ ಅಸ್ತ್ರ ಅಲ್ಲ. ಲಿಂಗಾಯತರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್‌ನವರಿಗೆ, ರಾಹುಲ್ ಗಾಂಧಿ ಅವರಿಗೆ ಸಮುದಾಯದ ಮೇಲೆ ಪ್ರೀತಿ ಇದ್ದರೆ ಲಿಂಗಾಯತ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಲಿ ನೋಡೋಣ. ನಾವು ಮೂರು ಜನ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+