ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸಿದ್ಧಾರೂಢರ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ ಗಮನ ಸೆಳೆದರು.

ಹುಬ್ಬಳ್ಳಿ, ಫೆಬ್ರವರಿ, 19: ಉತ್ತರ ಕರ್ನಾಟಕದ ಆರಾಧ್ಯ ದೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ದರ್ಶನ ಪಡೆದರು.

ಮಹಾಶಿವರಾತ್ರಿ ಅಂಗವಾಗಿ ಸದ್ಗುರು ಸಿದ್ಧಾರೂಢರ ಜಾತ್ರೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಸಿದ್ಧಾರೂಢರ ಹಾಗೂ ಗುರುನಾಥರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಮಹಾಶಿವರಾತ್ರಿಯ ಅಂಗವಾಗಿ ತವರಿಗೆ ಆಗಮಿಸಿದ ಸಿಎಂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಅಲ್ಲದೇ ಸಿದ್ಧಾರೂಢ ಮಠದ ಟ್ರಸ್ಟ್ ಕಮಿಟಿಯ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದ್ದು, ಸಿದ್ಧಾರೂಢರ ಜಾತ್ರೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡಿರುವುದು ವಿಶೇಷವಾಗಿದೆ.

ಸುರ್ಜೇವಾಲ ವಿರುದ್ಧ ಸಿಎಂ ಆಕ್ರೋಶ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಕರ್ನಾಟಕ ರಾಜ್ಯದ ಬಗ್ಗೆ ಏನು ಗೊತ್ತು. ಅವರು ಮೊದಲು ಕಾಂಗ್ರೆಸ್‌ ಒಳಜಗಳಗಳನ್ನು ಸರಿಪಡಿಸಿ ನಂತರ ನಮ್ಮ ರಾಜ್ಯದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು. ಹುಬ್ಬಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಸುದ್ದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ನರಕ ಸೃಷ್ಟಿಯಾಗಿದೆ ಇತ್ತೇಚೆಗೆ ಸುರ್ಜೇವಾಲಾ ಹೇಳಿದ್ದರು.

Basavaraj Bommai visit to Siddaroodha Math

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್‌ನವರು ಸೃಷ್ಟಿಸಿದ್ದ ನರಕದಿಂದಲೇ ಅವರನ್ನು ಜನರೇ ಮನೆಗೆ ಕಳುಹಿಸಿದ್ದಾರೆ. ಅತ್ಯಂತ ಬೇಜವಾಬ್ದಾರಿಯುವಾದ ವಿರೋಧ ಪಕ್ಷ ಕಾಂಗ್ರೆಸ್. ಜನರಿಗೆ ತಮ್ಮ, ನಮ್ಮ ವೈಫಲ್ಯಗಳನ್ನು ತೋರಿಸುವ ಬದಲು ಈ ರೀತಿಯ ಮಾತುಗಳು ಜನರ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ತಿರುಗೇಟು ನೀಡಿದರು.

ಕರ್ನಾಟಕದ ಜನರಿಗೆ ಯಾರು ಯಾರು ಅಸುರರು, ಯಾರು ದೇವತೆಗಳು ಎಂಬುದು ಸರಿಯಾಗಿ ತಿಳಿದಿದೆ. ಸುಮಾರು 70 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ನ್ನು ಕಿತ್ತೊಗೆದು ಅಸುರರು ಯಾರೆಂದು ಜನರೇ ತೋರಿಸಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಅಸುರರ ದೊಡ್ಡ ಪಟ್ಟಿಯೇ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾದಂತಿದೆ.

Basavaraj Bommai visit to Siddaroodha Math

ಅವರಿಗೂ ನಮಗೂ ಬಹಳಷ್ಟು ವ್ಯತ್ಯಾಸಗಳು ಇವೆ. ಅವರು ಚುನಾವಣೆಗಾಗಿ ಆಕಾಶ ತೋರಿಸಿ ಜನರನ್ನು ಮರಳು ಮಾಡಲು ಹೊರಟಿದ್ದಾರೆ. ನಾವು ಯಾವುದಕ್ಕಾಗಿ, ಯಾರಿಗೆ, ಎಷ್ಟು ಹಣವಾಗುತ್ತದೆ ಎಂದು ವಿವರಿಸಿದ್ದೇವೆ. ಅವರೇ ನಮ್ಮನ್ನು ನಕಲು ಮಾಡಿದ್ದಾರೆ. ಬಿಜೆಪಿ ಗೃಹಿಣಿ ಶಕ್ತಿ ನೀಡಿದ ಮೇಲೆ ಅವರು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ್ದಾರೆ. ಇದರಿಂದ ಯಾರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+