ಹುಬ್ಬಳ್ಳಿಯಲ್ಲಿ "ಕಮಲ" ಪಡೆ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಪ್ರತಿಕೃತಿ ದಹಿಸಿದ್ದು ಏಕೆ?

ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಎಚ್.ಡಿ.ಕುಮಾರಸ್ವಾಮಿಯವರ ಕಟುಂಬದ ಪ್ರತಿಕೃತಿಯನ್ನು ದಹಿಸಿದ್ದೇಕೆ?

ಹುಬ್ಬಳ್ಳಿ, ಫೆಬ್ರವರಿ, 20: ಎಚ್‌.ಡಿ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿಯವರ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ. ಹಾಗೂ ಪ್ರಲ್ಹಾದ್‌ ಜೋಶಿಯವರ ತೇಜೋವಧೆ ಮಾಡುವ ಹುನ್ನಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಲ್ಹಾದ್‌ ಜೋಶಿಯವರ ವಿರುದ್ಧ ಬಿಜೆಪಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವೈಯಕ್ತಿಕವಾಗಿ ಜಾತಿ ನಿಂದನೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಯಿತು. ಹಾಗೂ ಅಣುಕು ಶವಯಾತ್ರೆಯನ್ನು ಸಹ ನಡೆಸಿದರು. ಬಳಿಕ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಎಚ್‌.ಡಿ. ಕುಮಾರಸ್ವಾಮಿಯವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

HDK ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಇನ್ನು ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಶನಿಯಾತ್ರೆಯ ರೂವಾರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಜಾತಿ ರಾಜಕಾರಣ ಮಾಡುವುದು ಹಾಗೂ ಒಬ್ಬರ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

BJP Activists Outrage against HD Kumaraswamy in Hubballi

ಕಾಂಗ್ರೆಸ್‌ ವಿರುದ್ಧ ಸಿಎಂ ಆಕ್ರೋಶ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಕರ್ನಾಟಕ ರಾಜ್ಯದ ಬಗ್ಗೆ ಏನು ಗೊತ್ತು. ಅವರು ಮೊದಲು ಕಾಂಗ್ರೆಸ್‌ ಒಳಜಗಳಗಳನ್ನು ಸರಿಪಡಿಸಿ ನಂತರ ನಮ್ಮ ರಾಜ್ಯದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ ಗುಡುಗಿದ್ದರು.

ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ನರಕ ಸೃಷ್ಟಿಯಾಗಿದೆ ಇತ್ತೇಚೆಗೆ ಸುರ್ಜೇವಾಲಾ ಹೇಳಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್‌ನವರು ಸೃಷ್ಟಿಸಿದ್ದ ನರಕದಿಂದಲೇ ಅವರನ್ನು ಜನರೇ ಮನೆಗೆ ಕಳುಹಿಸಿದ್ದಾರೆ. ಅತ್ಯಂತ ಬೇಜವಾಬ್ದಾರಿಯುವಾದ ವಿರೋಧ ಪಕ್ಷ ಕಾಂಗ್ರೆಸ್. ಜನರಿಗೆ ತಮ್ಮ, ನಮ್ಮ ವೈಫಲ್ಯಗಳನ್ನು ತೋರಿಸುವ ಬದಲು ಈ ರೀತಿಯ ಮಾತುಗಳು ಜನರ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ತಿರುಗೇಟು ನೀಡಿದರು.

BJP Activists Outrage against HD Kumaraswamy in Hubballi

ಕರ್ನಾಟಕದ ಜನರಿಗೆ ಯಾರು ಯಾರು ಅಸುರರು, ಯಾರು ದೇವತೆಗಳು ಎಂಬುದು ಸರಿಯಾಗಿ ತಿಳಿದಿದೆ. ಸುಮಾರು 70 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ನ್ನು ಕಿತ್ತೊಗೆದು ಅಸುರರು ಯಾರೆಂದು ಜನರೇ ತೋರಿಸಿದ್ದಾರೆ. ಕಾಂಗ್ರೆಸ್ ನಲ್ಲಿರುವ ಅಸುರರ ದೊಡ್ಡ ಪಟ್ಟಿಯೇ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+