'ರಮ್ಯಾ ಅವರಿಗೆ ಯಾರ ಬೆಂಬಲದ ಅಗತ್ಯವೂ ಇಲ್ಲ'

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಆಗಸ್ಟ್ 29 : 'ಬಿಜೆಪಿ ನಾಯಕರಿಗೆ ರಾಜಕೀಯ ಬಿಟ್ಟು ಬೇರೆನೂ ಬರುವುದೇ ಇಲ್ಲ. ಪಾಕಿಸ್ತಾನ ಪರ ಹೇಳಿಕೆ ನೀಡಿದ ಮಾಜಿ ಸಂಸದೆ ರಮ್ಯಾ ಅವರಿಗೆ ಯಾರ ಬೆಂಬಲದ ಅಗತ್ಯವೂ ಇಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಧಾರವಾಡದ ಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾನುವಾರ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. 'ಬಿಜೆಪಿ ಕೇವಲ ರಾಜಕೀಯ ಮಾಡುತ್ತದೆ. ರಮ್ಯಾ ಅವರು ಪಾಕಿಸ್ತಾನ ಕುರಿತು ನೀಡಿದ ಹೇಳಿಕೆಯ ಬಗ್ಗೆ ನಾನೇನೂ ಹೇಳುವುದಲ್ಲ. ರಮ್ಯಾ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವಷ್ಟು ಶಕ್ತಿಯುತವಾಗಿದ್ದಾರೆ' ಎಂದರು.[ನನಗೆ ಮಂಗಳೂರು ಇಷ್ಟ. ಮಂಗಳೂರು ಹೆವೆನ್ : ರಮ್ಯಾ]

siddaramaiah

'ರಮ್ಯಾ ವಿರುದ್ಧ ಬಿಜೆಪಿಯವರು ಹೋರಾಟ ಮಾಡುತ್ತಿದ್ದರೂ ಕಾಂಗ್ರೆಸ್‌ನವರಾರೂ ರಮ್ಯಾ ಬೆಂಬಲಕ್ಕೆ ನಿಲ್ಲಲಿಲ್ಲ' ಎಂದು ಕೇಳಿದಾಗ, 'ಅವರಿಗೆ ಸ್ವಂತವಾಗಿ ಹೋರಾಡುವ ತಾಕತ್ತಿದೆ. ಅವರಿಗೆ ಯಾರ ಬೆಂಬಲ ಬೇಡ. ಹಾಗೇನಾದರೂ ಬೇಕಿದ್ದರೆ ಕಾಂಗ್ರೆಸ್‌ ಅವರ ಜೊತೆಗಿದೆ' ಎಂದು ಹೇಳಿದರು.[ಪಾಕಿಸ್ತಾನ ನರಕವಲ್ಲ, ನನ್ನ ಹೇಳಿಕೆ ಬದ್ಧಳಾಗಿದ್ದೇನೆ: ರಮ್ಯಾ ಲೇಖನ]

ಘಟನೆ ನಡೆಯಬಾರದಿತ್ತು : 'ರಮ್ಯಾ ಮೇಲೆ ಮೊಟ್ಟೆ ಎಸೆಯುವಂತಹ ಘಟನೆ ನಡೆಯಬಾರದಿತ್ತು. ಅವರು ನೀಡಿರುವ ಹೇಳಿಕೆ ಬಗ್ಗೆ ಈಗಾಗಲೇ ಹಲವು ಬಾರಿ ಸ್ಪಷ್ಟನೆಗಳನ್ನು ನೀಡಿದ್ದಾರೆ' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ಹೇಳಿದ್ದರು.[ರಾಜದ್ರೋಹದ ಆರೋಪ, ರಮ್ಯಾ ಉತ್ತರವೇನು?]

ದೇವೇಗೌಡ ಬೆಂಬಲಿಸಿದ್ದರು : 'ರಮ್ಯಾ ಅವರು ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪು ಕಾಣುತ್ತಿಲ್ಲ. ಅವರು ಈಗಾಗಲೇ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ' ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದರು ಮತ್ತು ರಮ್ಯಾ ಅವರಿಗೆ ಬೆಂಬಲ ನೀಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah on Sunday said that, Ramya issue is being politicized by the Bharatiya Bharatiya Janata Party.
Please Wait while comments are loading...