ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಮುಖ್ಯಮಂತ್ರಿ : ಶೆಟ್ಟರ್

Posted By: Gururaj
Subscribe to Oneindia Kannada

ಹುಬ್ಬಳ್ಳಿ, ನವೆಂಬರ್ 06 : 'ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಮುಖ್ಯಮಂತ್ರಿ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ' ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದರು.

ಹುಬ್ಬಳ್ಳಿ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಸೂರ್ಯ, ಚಂದ್ರರು ಇರುವುದು ಎಷ್ಟು ಸತ್ಯವೋ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅಧಿಕಾರ ಪಡೆಯುವುದೂ ಅಷ್ಟೇ ಸತ್ಯ. ಈ ಭಯದಿಂದಲೇ ಜಾತಿ ರಾಜಕಾರಣ ಮಾಡಿ ಸಮಾಜ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ' ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಸಿಬಿ ರದ್ದು: ಶೆಟ್ಟರ್

BJP will return to power in 2018 says Jagadish Shettar

'ಕಾಂಗ್ರೆಸ್ ಅಧಿಕಾರಲ್ಲಿದ್ದು 4 ವರ್ಷ ಕಳೆದರೂ ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಮಾತನಾಡಿರಲಿಲ್ಲ. ಈಗ ಚುನಾವಣೆಗೆ ಕೇವಲ 6 ತಿಂಗಳು ಬಾಕಿ ಇದೆ ಎನ್ನುವ ಸಂದರ್ಭದಲ್ಲಿಯೇ ಸಮಾವೇಶ ಆಯೋಜನೆ ಮಾಡಿ ಜನರ ದಾರಿ ತಪ್ಪಿಸುತ್ತಿದೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ನಂತರವೇ, ಕಾಂಗ್ರೆಸ್ ಲಿಂಗಾಯತ ಮತಗಳನ್ನು ಒಡೆಯುವ ಹುನ್ನಾರದಿಂದ ಪ್ರತ್ಯೇಕ ಲಿಂಗಾಯತ ಧರ್ಮದ ಹಿಂದೆ ಬಿದ್ದಿದೆ' ಎಂದು ಕಿಡಿಕಾರಿದರು.

ಶೆಟ್ಟರ್‌ಗೆ ಗುಂಡಿನ ಬ್ರಾಂಡ್ ಕ್ಲಾಸ್ ತೆಗೆದುಕೊಂಡ ಸಿದ್ದು

'ಲಿಂಗಾಯತರನ್ನು ಅಲ್ಪಸಂಖ್ಯಾಾತರನ್ನಾಾಗಿ ಘೋಷಣೆ ಮಾಡುವುದು ರಾಜ್ಯ ಸರಕಾರದ ಕೈಯಲ್ಲಿಯೇ ಇದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಅಲ್ಲಿನ ಸರ್ಕಾರ ಈಗಾಗಲೇ ಲಿಂಗಾಯತರನ್ನು ಅಲ್ಪಸಂಖ್ಯಾಂತರೆಂದು ಘೋಷಣೆ ಮಾಡಿವೆ. ಅದರಂತೆಯೇ ಲಿಂಗಾಯತರನ್ನು ರಾಜ್ಯ ಸರ್ಕಾರ ಕೂಡಾ ಘೋಷಣೆ ಮಾಡಲಿ. ಅದು ಬಿಟ್ಟು ಫೆಬ್ರವರಿ, ಜನವರಿ ಗಡುವು ನೀಡಿ ಕೇಂದ್ರ ಸರಕಾರದ ವಿರುದ್ಧ ಹಾಗೂ ಬಿಜೆಪಿ ವಿರುದ್ಧ ಜನರನ್ನು ಎತ್ತಿ ಕಟ್ಟುವುದು ಸರಿಯಲ್ಲ' ಎಂದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಶಿವಶಿವಾ.. ಸಂತರ ಬಾಯಿಯಿಂದ ಇಂಥಾ ಮಾತಾ?

'ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಆರಂಭಿಸುವ ಮುನ್ನ ನಮ್ಮನ್ನು ಸಂಪರ್ಕ ಮಾಡಿ ಚರ್ಚೆ ಮಾಡದ ಕಾಂಗ್ರೆಸ್ ನಾಯಕರು, ಈಗ ವೇದಿಕೆಯಲ್ಲಿ ಬಿಜೆಪಿ ನಾಯಕರಿಗೆ ಆಹ್ವಾಾನ ನೀಡಿದರೂ ಅವರು ಬಂದಿಲ್ಲ ಎಂದು ಬೊಬ್ಬೆ ಹಾಕುವುದು ನಾಚಿಕೆಗೇಡಿತ ಸಂಗತಿ. ಲಿಂಗಾಯತ ಪ್ರತ್ಯೇಕ ಧರ್ಮವನ್ನು ವೈಯಕ್ತಿಕ ನಿಂದನೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ, ಸಮಾಜಕ್ಕೆ ಮಾದರಿಯಾಗಬೇಕಿದ್ದ ಸ್ವಾಾಮೀಜಿಗಳು ಅವಾಚ್ಯ ಶಬ್ದಗಳನ್ನು ಬಳಿಸಿ ಮಾತನಾಡುತ್ತಿರುವುದು ಕಳವಳಕಾರಿ ಸಂಗತಿ' ಎಂದು ಬೇಸರ ವ್ಯಕ್ತಪಡಿಸಿದರು.

'ಲಿಂಗಾಯತ ಪ್ರತ್ಯೇಕ ಧರ್ಮದ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಮೈಂಡ್ ಕೆಲಸ ಮಾಡುತ್ತಿದೆ. ಸಚಿವರು ಅಧಿಕಾರ ವಹಿಸಿಕೊಳ್ಳುವ ಮುನ್ನ ಎಲ್ಲ ಜಾತಿ-ಜನಾಂಗ ಒಂದೇ ಎಂದು ತಿಳಿದುಕೊಂಡು ಕೆಲಸ ನಿರ್ವಹಿಸುತ್ತೇನೆ ಎಂಬ ಪ್ರಮಾಣ ವಚನ ಮಾಡಿರುತ್ತಾಾರೆ. ಆದರೆ, ಹೀಗೆ ಒಂದು ಜಾತಿಗಾಗಿ ಹೋರಾಟ ಮಾಡುವುದು ಸರಿಯಲ್ಲ' ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Opposition leader and Former CM Jagadish Shettar said, BJP will return to power in 2018 Karnataka assembly election.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ