ಹುಬ್ಬಳ್ಳಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ: ಬಂಧನ

Posted By: Ananthanag
Subscribe to Oneindia Kannada

ಹುಬ್ಬಳ್ಳಿ, ನವೆಂಬರ್, 3- ರಾಜ್ಯ ಸರ್ಕಾರ ನ.10 ರಂದು ಆಚರಿಸುತ್ತಿರುವ ಟಿಪ್ಪು ಜಯಂತಿ ವಿರೋಧಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು ಭಾರಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.['ಟಿಪ್ಪು ಜಯಂತಿ ಬೇಡ' ಬಿಜೆಪಿಯಿಂದ ನ.8ರಂದು ರಾಜ್ಯಾದ್ಯಂತ ಪ್ರತಿಭಟನೆ]

BJP Yuva Morcha activists stormed the office of Tehsildar in hubballi

ಮುಂಚಿತವಾಗಿಯೇ ನಿರ್ಧರಿಸಿದಂತೆ ಗುರುವಾರ ನಗರದಲ್ಲಿ ತಹಸೀಲ್ದಾರ್ ಶಶಿಧರ್ ಮಾಡ್ಯಾಳ ಅವರ ಕಚೇರಿಯಲ್ಲಿ ಮುಸ್ಲಿಂ ಸಮುದಾಯದ ಧುರೀಣರ ಸಭೆ ನಡೆಸಲಾಗುತ್ತಿತ್ತು. ಈ ಸಭೆಯನ್ನು ವಿರೋಧಿಸಿ ಯುವ ಮೋರ್ಚಾ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗುತ್ತ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.

ಭಾರಿ ಸಂಖ್ಯೆಯಲ್ಲಿದ್ದ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಯತ್ನಿಸಿದರು. ಆದರೆ ಈ ಸಂದರ್ಭದಲ್ಲಿ ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು.[ರಾತ್ರೋರಾತ್ರಿ ಟಿಪ್ಪು ಚೌಕ್ ನಿರ್ಮಾಣ: ಗುಂಪು ಘರ್ಷಣೆ]

BJP Yuva Morcha activists stormed the office of Tehsildar in hubballi

ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಕೆಲ ಪ್ರತಿಭಟನಾಕಾರರನ್ನು ಬಂಧಿಸಿದರು.

ಈ ಸಮಯದಲ್ಲಿ ಕೆಲ ಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. 35 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದ್ದು, ನಗರದಾದ್ಯಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Taking exception to the State government going ahead with celebrations of the birth anniversary of Tipu Sultan on November 10. BJP Yuva Morcha activists stormed the office of Tehsildar mobilizing expressed their outrage in hubli.
Please Wait while comments are loading...