ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ, ಇಬ್ಬರ ಅಮಾನತು

|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 28 : ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಅಮಾನತು ಮಾಡಲಾಗಿದೆ. ಅಕ್ಟೋಬರ್ 21ರಂದು ನಡೆದ ಲಘು ಸ್ಫೋಟದಲ್ಲಿ ಒಬ್ಬ ಪ್ರಯಾಣಿಕ ಗಾಯಗೊಂಡಿದ್ದ.

ರೈಲ್ವೆ ನಿಲ್ದಾಣದ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನೈಋತ್ಯ ರೈಲ್ವೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆರ್‌ಪಿಎಫ್‌ನ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್, ಸ್ಟೇಷನ್ ಮಾಸ್ಟರ್ ವರುಣ್ ಕುಮಾರ್ ದಾಸ್ ಅಮಾನತು ಆದವರು.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಪ್ರಕರಣ; ಬಾಕ್ಸ್ ಬಂದಿದ್ದು ಎಲ್ಲಿಂದ?ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಪ್ರಕರಣ; ಬಾಕ್ಸ್ ಬಂದಿದ್ದು ಎಲ್ಲಿಂದ?

"ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಏನೂ ಹೇಳಲು ಸಾಧ್ಯವಿಲ್ಲ. ತನಿಖೆ ನಡೆಸುತ್ತಿರುವ ಅಧಿಕಾರಿಗಳು ಈ ಬಗ್ಗೆ ವರದಿ ನೀಡಲು ಮೂರು ದಿನಗಳ ಕಾಲಾವಕಾಶ ಕೇಳಿದ್ದಾರೆ" ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಬಾಕ್ಸ್‌ ಮೇಲೆ ಹೀಗೆ ಬರೆದಿತ್ತುಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಬಾಕ್ಸ್‌ ಮೇಲೆ ಹೀಗೆ ಬರೆದಿತ್ತು

Blast In Hubballi Railway Station Two Suspended

ಬೆಂಗಳೂರಿನಿಂದ ಆಗಮಿಸಿದ್ದ ಬಾಂಬ್ ನಿಷ್ಕ್ರಿಯ ದಳದ 6 ಮಂದಿಯ ತಂಡ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ 15 ಜೀವಂತ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿವೆ. ರೈಲ್ವೆ ನಿಲ್ದಾಣದಿಂದ ಸ್ಫೋಟಕಗಳನ್ನು ನಗರದ ಹೊರವಲಯದ ಸಿಆರ್‌ಪಿ ಮೈದಾನಕ್ಕೆ ಸಾಗಿಸಲಾಗಿತ್ತು.

ಭಯೋತ್ಪಾದಕ ಸಂಘಟನೆ ನಂಟು ಹೊಂದಿದ್ದ ಹುಬ್ಬಳ್ಳಿ ವ್ಯಕ್ತಿ ಬಂಧನಭಯೋತ್ಪಾದಕ ಸಂಘಟನೆ ನಂಟು ಹೊಂದಿದ್ದ ಹುಬ್ಬಳ್ಳಿ ವ್ಯಕ್ತಿ ಬಂಧನ

ವಿಮಾನ ನಿಲ್ದಾಣದಲ್ಲಿ ಇರುವ ಮಾದರಿಯಲ್ಲಿ ರೈಲ್ವೆ ನಿಲ್ದಾಣದಲ್ಲಿಯೂ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ನಿಲ್ದಾಣದಲ್ಲಿ ನಡೆದ ಸ್ಫೋಟದಲ್ಲಿ ಗಾಯಗೊಂಡ ಹುಸೇನಸಾಬ್ ನಾಯಕವಾಲೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
South Western Railway has suspended two persons after blast at Hubballi Railway station on October 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X