ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಳಸಾ ಬಂಡೂರಿ ಹೋರಾಟಗಾರರಿಂದ ಪ್ರಧಾನಿ ಮೋದಿ ಪ್ರತಿಕೃತಿ ದಹನ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜನವರಿ 03: ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗಿರುವುದನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯಿಂದ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು, ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಹಲವಾರು ಕುಟುಂಬಗಳು ಮನೆ ಕಳೆದುಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂದರು.

ಬೆಂಗಳೂರಿನಿಂದ ಹೊಸ ವರ್ಷ ಶುರು ಮಾಡಿದ್ದಕ್ಕೆ ಮೋದಿ ಕೊಟ್ಟ ಕಾರಣ...ಬೆಂಗಳೂರಿನಿಂದ ಹೊಸ ವರ್ಷ ಶುರು ಮಾಡಿದ್ದಕ್ಕೆ ಮೋದಿ ಕೊಟ್ಟ ಕಾರಣ...

ಆದರೆ ಇದರ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಬಗ್ಗೆ ನಿಷ್ಕಾಳಜಿ ತೋರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Burns Of PM Modi replica From the Kalasa Bandhuri Fighters

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಪರಿಹಾರ ನೀಡದೇ ಮಲತಾಯಿ ಧೋರಣೆ ತೋರಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ನಿನ್ನೆ ತುಮಕೂರಿನಲ್ಲಿ ನಡೆದ ರೈತರಿಗೆ ಪಿಂಚಣಿ ಹಣ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರದ ಬಗ್ಗೆ ಮನವಿ ಮಾಡಿದರೂ ಕೂಡ ಅದಕ್ಕೆ ಉತ್ತರ ನೀಡದೇ ಬೇಜವಾಬ್ದಾರಿ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಚಾರ್ಯರಿಗೆ ಜಾತಿ ನಿಂದನೆ ಮಾಡಿದ್ದ ಮಹಿಳೆಗೆ ಜೈಲು ಶಿಕ್ಷೆಪ್ರಾಚಾರ್ಯರಿಗೆ ಜಾತಿ ನಿಂದನೆ ಮಾಡಿದ್ದ ಮಹಿಳೆಗೆ ಜೈಲು ಶಿಕ್ಷೆ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರ ಉತ್ತರ ಕರ್ನಾಟಕದ ಜನತೆಗೆ ಸ್ಪಂದನೆ ಮಾಡುವಲ್ಲಿ ವಿಫಲ‌ವಾಗಿದೆ. 45,000 ಕೋಟಿ ರೂ, ಅತೀವೃಷ್ಠಿಯಿಂದ ಹಾಳಾಗಿದ್ದು, ಸರಕಾರ ಕೇವಲ‌ ಕಾಟಾಚಾರಕ್ಕೆ 10,000 ರೂ, ಒಂದು ಕುಟುಂಬಕ್ಕೆ ನೀಡಿದೆ. ಇದು ಯಾವುದಕ್ಕೂ ಸಾಲುವುದಿಲ್ಲ ಎಂದು ಕಳಸಾ ಬಂಡೂರಿ ಹೋರಾಟಗಾರರು ಅಸಮಾಧಾನ ಹೊರಹಾಕಿದರು.

ಕೂಡಲೇ ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಜನರ ಕಷ್ಟಕ್ಕೆ ಸ್ಪಂದಸಲಿ. ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

English summary
A protest against the central government over the burning of The Prime Minister Narendra Modi replica by the Kalasa Bandhuri Farmers Movement Committee, condemning the delay of Flood Relief Fund in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X