• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇಂದು ಪ್ರಮಾಣವಚನ ನಡೆಯೋದು ಅನುಮಾನ: ಬಿಎಸ್ ವೈ

|

ಹುಬ್ಬಳ್ಳಿ, ಡಿಸೆಂಬರ್ 22: ಕೊನೆಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದೆ. ಶನಿವಾರ ಸಂಜೆ 5:20 ಕ್ಕೆ ಸಂಪುಟ ಸೇರಲಿರುವ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಶನಿವಾರವೇ ಪ್ರಮಾಣವಚನ: ಸಂಪುಟ ಸೇರುವ ಶಾಸಕರು ಯಾರು? ಇಲ್ಲಿದೆ ಪಟ್ಟಿ

ಆದರೆ ಇಂದು ಶಾಸಕರು ಪ್ರಮಾಣವಚನ ಸ್ವೀಕರಿಸುವುದೇ ಅನುಮಾನ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕುಮಾರಸ್ವಾಮಿ-ಯಡಿಯೂರಪ್ಪ ಕ್ಷಮಾಪಣೆ ಕಿತ್ತಾಟ, ಕಲಾಪ ಬಲಿ

ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಸಂಪುಟ ವಿಸ್ತರಣೆ ಮಾಡುತ್ತೇನೆ ಎನ್ನುತ್ತಲೇ ಮೂರು ತಿಂಗಳ ಕಾಲ ಕಾಲಹರಣ ಮಾಡಲಾಗಿದೆ. ಆದರೆ ಸಂಪುಟ ವಿಸ್ತರಣೆಯ ನಂತರ ಅಸಮಾಧಾನ ಬುಗಿಲೇಳುತ್ತದೆ. ಸಂಪುಟದಿಂದ ರಮೇಶ್ ಜಾರಕಿಹೊಳಿ ಅವರನ್ನು ಕೈಬಿಟ್ಟರೆ ಸರ್ಕಾರಕ್ಕೆ ಸಂಕಷ್ಟ ತಪ್ಪಿದ್ದಲ್ಲ' ಎಂದರು.

ಸಂಪುಟ ವಿಸ್ತರಣೆ: ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ?

ನಾನು ಶೀಘ್ರವೇ ಶಾಸಕರ ಸಭೆ ಕರೆಯುತ್ತೇನೆ. ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

English summary
BJP national president BS Yeddyurappa said, If Congress left Ramesh Jarakiholi from cabinet, it will be a major setback to Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X