ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಒಳಜಗಳ ಹೆಚ್ಚಾಗಿದೆ: ಶೆಟ್ಟರ್

|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್ 25: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಾದ ಬಳಿಕ ಪಕ್ಷದೊಳಗೆ ಗೊಂದಲ, ಒಳಜಗಳ ಆರಂಭವಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಒಂದು ವಾರ ಹೋದರೆ ಇನ್ನಷ್ಟು ಬೆಳವಣಿಗೆಗಳು ಆಗಬಹುದು, ಈಗ ಕಾಂಗ್ರೆಸ್‌ನಲ್ಲಿ ಜಗಳ ಹೆಚ್ಚಾಗುತ್ತಿದೆ.

ಸಂಪುಟ ವಿಸ್ತರಣೆ: ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ? ಸಂಪುಟ ವಿಸ್ತರಣೆ: ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ?

ರಮೇಶ್ ಜಾರಕಿಹೊಳಿ ಕುರಿತು ಮಾತನಾಡಿ, ರಮೇಶ್ ಜೊತೆ ಎಷ್ಟು ಮಂದಿ ಶಾಸಕರಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ, ಸರ್ಕಾರ ರಚನೆ ಮಾಡುವುದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

Cabinet expansion: In congress internal dispute begins

ಶನಿವಾರವೇ ಪ್ರಮಾಣವಚನ: ಸಂಪುಟ ಸೇರುವ ಶಾಸಕರು ಯಾರು? ಇಲ್ಲಿದೆ ಪಟ್ಟಿ ಶನಿವಾರವೇ ಪ್ರಮಾಣವಚನ: ಸಂಪುಟ ಸೇರುವ ಶಾಸಕರು ಯಾರು? ಇಲ್ಲಿದೆ ಪಟ್ಟಿ

ಕುಮಾರಸ್ವಾಮಿ ಅವರು ತಾಳ್ಮೆ ಕಾಪಾಡಿಕೊಳ್ಳಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಸಿಎಂ ಮೊದಲು ಕಾನೂನು ಬಾಹಿರ ಹೇಳಿಕೆ ನೀಡುವುದು ಬಿಡಬೇಕು. ನಾನು ಕುಮಾರಸ್ವಾಮಿ ಆಗಿ ಹೇಳಿಕೆ ಕೊಟ್ಟಿದ್ದೇನೆ ಎನ್ನುತ್ತಾರೆ. ಕುಮಾರಸ್ವಾಮಿ ಬೇರೆ ಸಿಎಂ ಕುಮಾರಸ್ವಾಮಿ ಬೇರೆನಾ ಎಂದು ಪ್ರಶ್ನಿಸಿದರು.

English summary
Former chief minister Jagadish shettar opines that after coalition government cabinet expansion internal dispute begins in congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X