ಸಚಿವ ಸಂಪುಟ ವಿಸ್ತರಣೆ ದಿನಾಂಕ ಘೋಷಣೆ ಮಾಡಿದ ಜಮೀರ್!

ಹುಬ್ಬಳ್ಳಿ, ನವೆಂಬರ್ 22 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವ ಸಂಪುಟವನ್ನು ಯಾವಾಗ ವಿಸ್ತರಣೆ ಮಾಡಲಿದ್ದಾರೆ?. ಸಂಪುಟದಲ್ಲಿ ಖಾಲಿ ಇರುವ 8 ಸ್ಥಾನಗಳಿಗೆ 18ಕ್ಕೂ ಅಧಿಕ ಶಾಸಕರು ಆಕಾಂಕ್ಷಿಗಳಾಗಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಅವರು ಸಂಪುಟ ವಿಸ್ತರಣೆಯ ದಿನಾಂಕವನ್ನು ಘೋಷಣೆ ಮಾಡಿದರು. ಆದರೆ, ಇದಕ್ಕೆ ಬೇರೆ ಯಾವುದೇ ನಾಯಕರು ಪ್ರತಿಕ್ರಿಯೆ ಕೊಟ್ಟಿಲ್ಲ.

'ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎರಡೂ ಪಕ್ಷಗಳ ನಾಯಕರು ಈಗಾಗಲೇ ಚರ್ಚಿಸಿ ತೀರ್ಮಾನ ಕೈಗೊಂಡಿದ್ದು, ಡಿಸೆಂಬರ್ 3ರಂದು ಸಂಪುಟ ವಿಸ್ತರಣೆಯಾಗಲಿದೆ' ಎಂದು ಜಮೀರ್ ಅಹಮದ್ ಖಾನ್ ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 2 ಸ್ಥಾನಗಳು ಜೆಡಿಎಸ್‌ ಪಕ್ಷಕ್ಕೆ ಸಿಗಲಿವೆ. 6 ಸ್ಥಾನಗಳು ಕಾಂಗ್ರೆಸ್‌ಗೆ ಪಾಲಾಗಲಿವೆ. ಆದರೆ, ಯಾವ ಶಾಸಕರು ಸಂಪುಟ ಸೇರಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ.

ಸಂಪುಟ ವಿಸ್ತರಣೆ ಗೊಂದಲ

ಸಂಪುಟ ವಿಸ್ತರಣೆ ಗೊಂದಲ

ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ವಿಸ್ತರಣೆ ಬಗ್ಗೆ ಹಲವಾರು ಗೊಂದಲಗಳಿವೆ. ಹಲವು ಬಾರಿ ಸಂಪುಟ ವಿಸ್ತರಣೆ ದಿನಾಂಕವನ್ನು ಮುಂದೂಡಲಾಗಿದೆ. ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮೊದಲು ಸಂಪುಟ ವಿಸ್ತರಣೆಯಾಗಲಿದೆ ಎಂಬ ಸುದ್ದಿ ಈಗ ಹಬ್ಬಿದೆ. ಆದರೆ, ಎರಡೂ ಪಕ್ಷಗಳ ನಾಯಕರು ಈ ಕುರಿತು ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.

ಸಿದ್ದರಾಮಯ್ಯ, ದೇವೇಗೌಡ ಭೇಟಿ

ಸಿದ್ದರಾಮಯ್ಯ, ದೇವೇಗೌಡ ಭೇಟಿ

ನವೆಂಬರ್ 19ರಂದು ಕುಮಾರಕೃಪಾ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ದಿನಾಂಕ ನಿಗದಿ ಪಡಿಸುವ ಹೊಣೆಯನ್ನು ದೇವೇಗೌಡರಿಗೆ ಕಾಂಗ್ರೆಸ್‌ ನೀಡಿದೆ.

ಹೈಕಮಾಂಡ್ ಒಪ್ಪಿಗೆ ಸಿಕ್ಕಿಲ್ಲ

ಹೈಕಮಾಂಡ್ ಒಪ್ಪಿಗೆ ಸಿಕ್ಕಿಲ್ಲ

ಸಚಿವ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಅವರ ಒಪ್ಪಿಗೆ ಬೇಕು. ಆದರೆ, 5 ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಬ್ಯುಸಿಯಾಗಿದ್ದು, ಕರ್ನಾಟಕದ ಪಕ್ಷದ ನಾಯಕರ ಜೊತೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಆದ್ದರಿಂದ, ವಿಸ್ತರಣೆ ಪ್ರಕ್ರಿಯೆ ವಿಳಂಬವಾಗುತ್ತಲೇ ಇದೆ.

ಉಪ ಚುನಾವಣೆ ಮುಗಿಯಿತು

ಉಪ ಚುನಾವಣೆ ಮುಗಿಯಿತು

5 ಕ್ಷೇತ್ರಗಳ ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಎರಡೂ ಪಕ್ಷದ ನಾಯಕರು ಹೇಳಿದ್ದರು. ಆದರೆ, ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡರೂ ಮುಖ್ಯಮಂತ್ರಿ ಕುಮಾರಸ್ವಾಮಿಯಾಗಲಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಎಲ್ಲಾ ತೀರ್ಮಾನ ತೆಗೆದುಕೊಳ್ಳುವ ಹೊಣೆಯನ್ನು ದೇವೇಗೌಡರಿಗೆ ನೀಡಿದ್ದಾರೆ.

ದೇವೇಗೌಡರ ಲೆಕ್ಕಾಚಾರವೇ ಬೇರೆ

ದೇವೇಗೌಡರ ಲೆಕ್ಕಾಚಾರವೇ ಬೇರೆ

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಲೆಕ್ಕಾಚಾರವೇ ಬೇರೆ. ಒಂದು ವೇಳೆ ಈಗ ಸಂಪುಟ ವಿಸ್ತರಣೆ ಮಾಡಿದರೆ ಸಚಿವ ಸ್ಥಾನ ಸಿಗದ ಶಾಸಕರು ಅಸಮಾಧಾನಗೊಳ್ಳಬಹುದು. ಇದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ಚುನಾವಣೆ ತನಕ ವಿಸ್ತರಣೆಗೆ ಕೈ ಹಾಕದಿರುವಂತೆ ಅವರು ಪುತ್ರ ಎಚ್.ಡಿ.ಕುಮಾರಸ್ವಾಮಿಗೆ ಸಲಹೆ ನೀಡುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+