'ಕನ್ನಡಿಗರ ಸಹನೆ ಪರೀಕ್ಷೆ ಮಾಡಬೇಡಿ', ಎಚ್ಚರಿಕೆ..
ಹುಬ್ಬಳ್ಳಿ, ಸೆಪ್ಟೆಂಬರ್, 07: ತಮಿಳುನಾಡಿಗೆ ನೀರು ಹರಿಸಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ ನಗರದ ಹಲವಾರು ಸಂಘಟನೆಗಳು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದವು.
ಸ್ಥಳೀಯ ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ಇರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ತಮ್ಮ ವಿರೋಧವಿದೆ ಎಂದರು.[ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ ವೇಳೆ ಮೂವರು ಅಸ್ವಸ್ಥ]

ಕರ್ನಾಟಕ ರಾಜ್ಯದ ರೈತರ ಹಿತಾಸಕ್ತಿಯನ್ನು ಮೊದಲು ಆದ್ಯತೆಯಾಗಿ ಪರಿಣಮಿಸಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಮಿಳುನಾಡು ರಾಜಕೀಯ ಕಾರಣಕ್ಕೆ ನೀರು ಕೇಳಿದೆ ಎಂದು ಆರೋಪ ಮಾಡಿದರು.[ಕರ್ನಾಟಕದ ಜಲಾಶಯಗಳಲ್ಲಿ ನೀರು ಸಂಗ್ರಹ ಎಷ್ಟಿದೆ?]
ನಮ್ಮ ರೈತರ ಬೆಳೆಗಿಂತ ತಮಿಳುನಾಡಿನ ರೈತರಿಗೆ ನೀರು ಹರಿಸುವುದು ಯಾವ ರೀತಿಯ ನ್ಯಾಯವಿದು ಎಂದು ದೂರಿದ ಪ್ರತಿಭಟನಾಕಾರರು, ಕನ್ನಡಿಗರ ಸಹನೆಯನ್ನು ಪದೇ ಪದೇ ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ, ಕಳಸಾ- ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾವಹಿಸಿದ್ದರು. ಸೂಕ್ತ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು. ನಾಳೆ ಸಹ ಹೋರಾಟ ಮುಂದುವರಿಯುವ ಸಾಧ್ಯತೆ ಇದೆ.












Click it and Unblock the Notifications