ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ ಹೆಸರು ನಾಮಕರಣ: ಕೇಂದ್ರ ಒಪ್ಪಿಗೆ

|
Google Oneindia Kannada News

ಹುಬ್ಬಳ್ಳಿ, ಸೆಪ್ಟೆಂಬರ್ 9: ವಾಣಿಜ್ಯ ನಗರಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹುಬಳ್ಳಿಯ ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಕಂದಾಯ ಇಲಾಖೆಗೆ ಆದೇಶದ ಪ್ರತಿ ರವಾನೆ ಮಾಡಲಾಗಿದೆ.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಟ್ವಿಟ್ಟರ್ ಮೂಲಕ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ ಅಂಗಡಿಯವರು ಧನ್ಯವಾದ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಜನರ ಬಹು ನಿರೀಕ್ಷಿತ ಬೇಡಿಕೆಯಲ್ಲಿ ಒಂದಾಗಿರುವ ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸದ್ಗುರು ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವರಾದ ಸುರೇಶ ಅಂಗಡಿಯವರು ಪ್ರಸ್ತಾವನೆ ಸಲ್ಲಿಸಿದ ಬೆನ್ನಲ್ಲೇ ಹುಬ್ಬಳ್ಳಿ ರೈಲು ನಿಲ್ದಾಣದ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Central Govt Approves Name Change Of Hubballi Railway Station To Siddharoodha Swamiji Railway Station

Recommended Video

Amit Malviyaನಾ ಅಧಿಕಾರದಿಂದ ಕೆಳಗಿಳಿಸಿ : Subramanian Swamy | Oneindia Kannada

ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ಸಿದ್ಧಾರೂಢ ರೈಲ್ವೇ ನಿಲ್ದಾಣವೆಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ರೈಲು ನಿಲ್ದಾಣದ ಹೆಸರು ಬದಲಿಸಿ ಆದೇಶ ಹೊರಡಿಸಲಾಗಿದ್ದು, ಹುಬ್ಬಳ್ಳಿ ಜನತೆಯ ಆಸೆ ಕೊನೆಗೂ ಫಲಿಸಿದೆ. ಅಲ್ಲದೇ ಹುಬ್ಬಳ್ಳಿ ಜನರ ಬೇಡಿಕೆಗೆ ಸ್ಪಂದಿಸಿದ ಸುರೇಶ ಅಂಗಡಿ ಅವರಿಗೆ ಹಾಗೂ ಕೇಂದ್ರ ಸಚಿವರಿಗೆ ಹುಬ್ಬಳ್ಳಿ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

English summary
An order has been sent from the Union Home Department to the Karnataka State Revenue Department to nominate the name of the Siddharoodha Swamiji Railway Station for Hubli's railway station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X