ದೀಪಾವಳಿ ಬಳಿಕ ಸಿಎಂ ದೆಹಲಿ ಪ್ರವಾಸ: ಸಂಪುಟ ವಿಸ್ತರಣೆ ಫಿಕ್ಸ್‌

ಹುಬ್ಬಳ್ಳಿ, ಅಕ್ಟೋಬರ್‌ 26: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆಗಳು ಆರಂಭವಾಗಿದ್ದು, ಸಚಿವಾಕಾಂಕ್ಷಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಸಂಪುಟ ವಿಸ್ತರಣೆಯ ಬಗ್ಗೆ ಎದುರು ನೋಡುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದೀಪಾವಳಿ ಹಬ್ಬ ಮುಗಿದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ನಡೆಸಲಿದ್ದಾರೆ.

ರಾಜ್ಯ ಸಂಪುಟ ವಿಸ್ತರಣೆ ಮತ್ತು ಸಿಎಂ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, "ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಜೊತೆ ಚರ್ಚೆಯ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ" ಎಂದಿದ್ದಾರೆ.

ಹುಬ್ಬಳ್ಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೀಪಾವಳಿ ಬಳಿಕ ದೆಹಲಿಗೆ ಬರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ನನಗೆ ತಿಳಿಸಿದ್ದಾರೆ. ಹೀಗಿರುವಾಗ ಸಂಪುಟ ವಿಸ್ತರಣೆ ಬಗ್ಗೆ ಯಾರೂ ಗೊಂದಲಪಡುವ ಅಗತ್ಯವಿಲ್ಲ.‌ ಸಮಯ ಬಂದಾಗ ಸಂಪುಟ ವಿಸ್ತರಣೆ ಆಗಲಿದೆ. ಸಿಎಂ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ದೆಹಲಿ ಪ್ರವಾಸ ಮಾಡಲಿದ್ದಾರೆ," ಎಂದು ಹೇಳಿದರು.

Central Minister Prahalad joshi Reaction On Cabinet Expansion In Karnataka

ಇನ್ನು "ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ಬಂದಾಗ, ನಾವೆಲ್ಲ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ತೇವೆ. ದೀಪಾವಳಿ ಬಳಿಕ ದೆಹಲಿಗೆ ಬರುವುದಾಗಿ ಸಿಎಂ ಬೊಮ್ಮಾಯಿ ನನಗೆ ತಿಳಿಸಿದ್ದಾರೆ. ಹೀಗಿರುವಾಗ ಸಂಪುಟ ವಿಸ್ತರಣೆ ಬಗ್ಗೆ ಯಾರೂ ಅನಗತ್ಯಗೊಂದಲಕ್ಕೊಳಗಾಗ ಬೇಡಿ ಎಂದು," ರಾಜ್ಯ ಬಿಜೆಪಿ ನಾಯಕರಿಗೆ ಪ್ರಲ್ಹಾದ್ ಜೋಶಿ ಮನವಿ ಮಾಡಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ದೀಪಾವಳಿಯ ಶುಭಾಶಯ ಕೋರಿದ ಅವರು, "ನಾಳೆಯಿಂದ ಕಾರ್ತಿಕ ಮಾಸ ಆರಂಭವಾಗಲಿದೆ. ಸಮಾಜದಲ್ಲಿ ಕತ್ತಲು ಸಂಪೂರ್ಣವಾಗಿ‌ ನಿವಾರಣೆಯಾಗಿ ಎಲ್ಲರ ಬಾಳಲ್ಲಿ ಬೆಳಕು ಮೂಡಲಿ. ಕತ್ತಲಿನಿಂದ ಬೆಳಕಿನತ್ತ ಸಾಗುವುದೇ ದೀಪಾವಳಿಯ ಹಬ್ಬದ ವಿಶೇಷ. ದೇಶದ ಜನರ ಕಲ್ಯಾಣಕ್ಕಾಗಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಪರೂಪದ ಕಾರ್ಯಕ್ರಮ ನೆರವೇರಿಸಿದ್ದಾರೆ. ದೀಪಾವಳಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ," ಎಂದು ಶುಭಕೋರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+