ಹಿಂದೂಗಳ ಹಬ್ಬ ಬಂದಾಗ ಮಾತ್ರ ಆಹಾರ ಸುರಕ್ಷತೆ ನೆನಪಾಗುತ್ತದೆಯೇ?- ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ, ಸೆಪ್ಟೆಂಬರ್‌ 07: ಗಣೇಶ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಿಗೆ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂತಹ ಆದೇಶ ಹೊರಡಿಸಿದೆ ಅಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಂಪ್ಯಾನಲ್ ಅದವರಿಂದಲೇ ಪ್ರಸಾದ ತಯಾರಿಸಬೇಕು ಎಂದಿರುವ ರಾಜ್ಯ ಸರ್ಕಾರದ ಈ ಸೂಚನೆ ಸರಿಯಲ್ಲ. ಗಣೇಶ ಹಬ್ಬದ ವೇಳೆ ದೇಶಾದ್ಯಂತ, ರಾಜ್ಯಾದ್ಯಂತ ಬಹಳ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಆಹಾರ ಸುರಕ್ಷಾ ಕ್ರಮ ಕೈಗೊಳ್ಳುವುದು ಸರಿ. ಆದರೆ, ಹೀಗೆ ಹುಚ್ಚರ ರೀತಿ ಅಲ್ಲ ಎಂದು ರಾಜ್ಯ ಸರ್ಕಾರ ವಿರುದ್ಧ ವ್ಯಂಗ್ಯವಾಡಿದರು.

Central Minister Pralhad Joshi Lashes Out At Congress Government

ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ಇಂತಹ ಕ್ರಮ

ರಾಜ್ಯದಲ್ಲಿ ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ರಾಜ್ಯ ಸರ್ಕಾರದಿಂದ ಇಂಥ ಆದೇಶ ಹೊರ ಬಿದ್ದಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಟಕರು ಇದಕ್ಕೆ ಕಿವಿಗೊಡಬೇಕಿಲ್ಲ. ಎಲ್ಲಾದರೂ ದುರುದ್ದೇಶದಿಂದ ಪ್ರಸಾದದಲ್ಲಿ ವಿಷ ಬೆರೆಸುವಂತ ಪ್ರಕರಣ ನಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಿ. ಆದರೆ ಸರ್ಕಾರವೇ ಹೀಗೆ ದುರುದ್ದೇಶ ಇಟ್ಟುಕೊಂಡು ಆದೇಶ ಹೊರಡಿಸಿದರೆ ಹೇಗೆ? ಎಂದು ಪ್ರಶ್ನಿಸಿದರು.

ಹಿಂದೂ ಹಬ್ಬದಲ್ಲಷ್ಟೇ ಆಹಾರ ಸುರಕ್ಷೆ ನೆನಪಾಗುತ್ತೆದೆಯೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದೂಗಳ ಹಬ್ಬ ಬಂದಾಗ ಮಾತ್ರ ಆಹಾರ ಸುರಕ್ಷತಾ ನಿಯಮ ಇರೋದು ನೆನಪಾಗುತ್ತದೆಯೇ? ಎಂದ ಸಚಿವ ಜೋಶಿ, ಇಫ್ತಿಯಾರ್ ಕೂಟ ಇದ್ದಾಗ ಇಂಥ ಆದೇಶ ಹೊರಡಿಸಿ ನೋಡೋಣ ಎಂದು ಸವಾಲು ಹಾಕಿದರು.

ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಿ: ಕೇಂದ್ರ ಸಚಿವರ ಕಿವಿಮಾತು

ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಟಕರು ಗಣೇಶ ಪೆಂಡಾಲ್‌ಗಳಲ್ಲಿ ಪ್ರಸಾದ ತಯಾರಿಕೆ ವೇಳೆ ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ ಕೇಂದ್ರ ಸಚಿವರು, ಅಗತ್ಯ ಬಿದ್ದರೆ ರಾಜ್ಯ ಸರ್ಕಾರದ ಈ ಆದೇಶ ಧಿಕ್ಕರಿಸಿ ಎಂದು ಕರೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+