ಶೆಟ್ಟರ್ ಬದಲಾಯಿಸಲು ಮೋದಿ, ಅಮಿತ್ ಶಾ ಮಟ್ಟದಲ್ಲೇ ನಿರ್ಧಾರವಾಗಿತ್ತು- ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಏಪ್ರಿಲ್ 24: ಲಿಂಗಾಯುತರ ಬಗ್ಗೆ ಹಗುರವಾಗಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸಿದ್ದರಾಮಯ್ಯ ಕ್ಷಮೆ ಕೇಳಿಲ್ಲ. ಆದರೆ ಸಿದ್ದರಾಮಯ್ಯ ಕ್ಷಮೆ ಕೇಳಬೇಕು. ಈ ಬಗ್ಗೆ ಈಗಾಗಲೇ ಚುನಾವಣೆ ಆಯೋಗಕ್ಕೆ ದೂರ ಕೊಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು. ಗೌರವಯುತ ಸ್ಥಾನದಲ್ಲಿರುವವರು ಹಾಗೂ ಸಾರ್ವಜನಿಕ ಜೀವನದಲ್ಲಿರುವವರು ನೈತಿಕತೆ ಇದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಲಿಂಗಾಯತ ಸಮುದಾಯ ನಮಗೆ ಅಸ್ತ್ರ ಅಲ್ಲ. ಲಿಂಗಾಯತರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್‌ನವರಿಗೆ, ರಾಹುಲ್ ಗಾಂಧಿ ಅವರಿಗೆ ಸಮುದಾಯದ ಮೇಲೆ ಪ್ರೀತಿ ಇದ್ದರೆ ಲಿಂಗಾಯತ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಲಿ ನೋಡೋಣ. ನಾವು ಮೂರು ಜನ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿಸರುವ ಜಗದೀಶ್ ಶೆಟ್ಟರ್ ಬಗ್ಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಹೋಗಿರುವುದರಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ. ಹಳೆ ಪ್ಲೇಯರ್ ರಿಟೈರ್ಡ್ ಆಗಿ ಅಂದಿದ್ದೇವು. ಆದರೆ ಅವರು ಮತ್ತೊಂದು ಟೀಟ್‌ನಲ್ಲಿ ಆಡೋಕೆ ಹೋಗಿದ್ದಾರೆ. ಆದರೂ ಈ ಸಲ ಕಪ್ ನಮ್ದೇ ಎಂದು ಜಗದೀಶ್ ಶೆಟ್ಟರ್ ವಿರುದ್ಧ ವ್ಯಂಗ್ಯವಾಡಿದರು.
ತಮಗೆ ಟಿಕೆಟ್ ತಪ್ಪಿಸಿರುವ ವಿಷಯ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಗಮನಕ್ಕಿಲ್ಲ ಎನ್ನುವ ಜಗದೀಶ್ ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ಶೆಟ್ಟರ್ ಬದಲಾವಣೆ ಬಗ್ಗೆ ಅಮಿತ್ ಶಾ ,ಮೋದಿ ಮಟ್ಟದಲ್ಲಿ ಈ ನಿರ್ಧಾರವಾಗಿತ್ತು. ಅಮಿತ್ ಶಾ, ಜಗದೀಶ್ ಶೆಟ್ಟರ್ ಜೊತೆ ಮಾತಾಡಿದ್ದಾರೆ. ಅಮಿತ್ ಶಾ ಅವರು ಶೆಟ್ಟರ್‌ಗೆ ಕರೆ ಮಾಡಿ, ನಾವು ನಿಮಗೆ ರಾಜ್ಯ ಸಭಾ ಸದಸ್ಯ ಸ್ಥಾನ, ಅಥವಾ ತಾವು ಬಯಸುವ ಯಾವುದಾದರೂ ಸ್ಥಾನ ನೀಡುವುದಾಗಿ ಹೇಳಿದ್ದರು. ನೀವು ಹೇಳುವ ಕಾರ್ಯಕರ್ತನಿಗೆ ಟಿಕೆಟ್ ನೀಡುವುದಾಗಿ ಸಹ ಹೇಳಿದ್ದರು ಎಂದರು.
ಬಿ.ಎಲ್ ಸಂತೋಷ್ ಮೇಲೆ ಜಗದೀಶ್ ಶೆಟ್ಟರ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಉಲ್ಟಾ ಹೇಳಿದರೆ ಮತ ಸಿಗಲ್ಲ ಎನ್ನುವ ಕಾರಣಕ್ಕೆ ಹೀಗೆ ಮಾತನಾಡುತ್ತಿದ್ದಾರೆ. ಬಿ.ಎಲ್.ಸಂತೋಷ್ ಸಂಘಟನಾ ಕಾರ್ಯದರ್ಶಿ. ಈ ತರಹ ಆರೋಪ ಮಾಡೋದು ಸರಿ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಇಂದು ಅಮಿತ್ ಶಾ ಹುಬ್ಬಳ್ಳಿಗೂ ಬರಲಿದ್ದು, ಜಿಲ್ಲಾ ಪದಾಧಿಕಾರಿಗಳ, ಮಂಡಳ ಅಧ್ಯಕ್ಷರ ಜೊತೆ ಸಭೆ ಮಾಡಲಿದ್ದಾರೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಸಮಗ್ರ ಚರ್ಚೆ ಮಾಡಿ, ಸೂಕ್ತ ಮಾರ್ಗದರ್ಶನ ಮಾಡಲಿದ್ದಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಹಳ ಬಹುಮತದಿಂದ ಗೆಲ್ಲಲಿದೆ. ಗದಗ ,ಹಾವೇರಿ,ಧಾರವಾಡ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಸಭೆ ಮಾಡಲಿದ್ದೇವೆ ಎಂದು ಹೇಳಿದರು.
ಅಲ್ಲದೇ ಏಪ್ರಿಲ್ 29ರಂದು ಕುಡಚಿಗೆ ಮೋದಿ ಬರಲಿದ್ದಾರೆ. ಇದಾದ ಮೇಲೆ ಇನ್ನೊಂದು ಕಾರ್ಯಕ್ರಮ ಕೊಡಲು ನಾನು ವಿನಂತಿ ಮಾಡಿದ್ದೇನೆ. ಬೆಳಗಾವಿ ಜಿಲ್ಲೆಗೆ ಮೋದಿ ಇನ್ನೊಂದು ಕಾರ್ಯಕ್ರಮ ಕೊಡಲು ವಿನಂತಿ ಮಾಡಿದ್ದೇನೆ. ಯೋಗಿ ಆದಿತ್ಯನಾಥ ಕೂಡಾ ಬರಲಿದ್ದಾರೆ. ಕಿತ್ತೂರ ಕರ್ನಾಟಕ ಭಾಗದಲ್ಲಿ ನಮ್ಮ ಸ್ಟ್ರೈಕ್ ರೇಟ್ ಚೆನ್ನಾಗಿದೆ. ಉತ್ತರ ಖಾಂಡದಲ್ಲಿ ಇತಿಹಾಸ ಬ್ರೇಕ್ ಮಾಡಿ ನಾವು ಅಧಿಕಾರಕ್ಕೆ ಬಂದಿದ್ದೇವೆ. ಈ ಬಾರಿ ಕರ್ನಾಟಕದಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್‌ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications