ಕೊರೊನಾ ಮಾರ್ಗಸೂಚಿ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸುತ್ತಿದೆ-ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಡಿಸೆಂಬರ್ 24: ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ನೈತಿಕತೆ ಇಲ್ಲಾ. ಕುಡಿಯುವ ನೀರಿಗಾಗಿ ಮನಮೋಹನ್ ಸಿಂಗ್‌ಗೆ ಪರಿಪರಿಯಾಗಿ ಬೇಡಿಕೊಂಡೆವು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಜಾರಿಗೆ ಕೊನೆಯ ಹಂತದ ತೀರ್ಮಾನ ತೆಗೆದುಕೊಳ್ಳಲು ಸಜ್ಜಾಗಿದ್ದೇವೆ. ಒಗ್ಗರಣೆ ಹಾಕಿ ಅಡುಗೆ ಮಾಡುವವರು ನಾವೇ, ಕೊನೆಯಲ್ಲಿ ನಾವು ಮಾಡಿದ್ದು ಎನ್ನುವುದು ಕಾಂಗ್ರೆಸ್ ಅಭ್ಯಾಸ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್‌ನವರು ಕೊರೊನಾ ಹೆಸರಿನಲ್ಲಿ ಕಾಂಗ್ರೆಸ್ ಪಾದಯಾತ್ರೆ ತಡೆಯುತ್ತಿದ್ದಾರೆ ಎಂದು ಆರೋಪ ಮಾಡುತ್ತಿದೆ. ಅವರ ಯಾತ್ರೆ ಯಶಸ್ವಿಯಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಯಾಕೆಂದರೆ ಪಾದಯಾತ್ರೆ ನಡೆದಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತದೆ. ಹೀಗಾಗಿ ಕೊರೊನಾ ಮಾರ್ಗಸೂಚಿ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸುತ್ತಿದೆ ಎಂದು ಲೇವಡಿ ಮಾಡಿದರು.

2023ರ ವಿಧಾನಸಭಾ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಜನಪರ ಆಡಳಿತ ಕೊಡುತ್ತಿದ್ದೇವೆ. ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಭಾರಿ ಬಹುಮತದೊಂದಿಗೆ ಮತ್ತೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಎರಡು ದಿನ ಅವಕಾಶ- ಬಸವರಾಜ ಹೊರಟ್ಟಿ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು ಇಡಲಾಗುತ್ತದೆ. ಈ ಭಾಗದ ಸಮಸ್ಯೆಗಳ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಳಿಗಾಲದ ಅಧಿವೇಶನದಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಗಳಿಗೆ ಚರ್ಚೆಮೀಸಲು ಇಡಲಾಗುತ್ತದೆ. ಮಂಗಳವಾರ- ಬುಧವಾರ ಎರಡು ದಿನ ಉತ್ತರ ಕರ್ನಾಟಕದ ವಿಚಾರ ಚರ್ಚೆ ಮಾಡಲಾಗುತ್ತದೆ. ಸದನ ಆರಂಭವಾದ ತಕ್ಷಣ ಚರ್ಚೆಗೆ ಸಂಬಂಧಿಸಿದ ಸಚಿವರು ಇರಬೇಕು. ಅವರು ಇರಲಿಲ್ಲ ಎಂದರೆ ಮುಖ್ಯಮಂತ್ರಿಗಳಿಗೆ ಉತ್ತರಿಸಲು ಸೂಚಿಸುತ್ತೇನೆ ಎಂದು ಹೇಳಿದರು.
ಕನಿಷ್ಟ 15 ದಿನವಾದರೂ ಚಳಿಗಾಲದ ಅಧಿವೇಶನ ನಡೆಸಬೇಕು. ಸರ್ಕಾರ ಈ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಅನಗತ್ಯ ಗದ್ದಲ ಹಾಗೂ ಗಲಾಟೆಗೆ ಕಾಲಹರಣಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.












Click it and Unblock the Notifications