ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಡರೋಗಿಗಳ ಪಾಲಿಗೆ ಸಂಜೀವಿನಿ ಆದ ಹುಬ್ಬಳ್ಳಿಯ ಚಿಟಗುಪ್ಪಿ ಸರ್ಕಾರಿ ‌ಆಸ್ಪತ್ರೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಸೆಪ್ಟೆಂಬರ್‌, 20: ಹುಬ್ಬಳ್ಳಿಯ ಚಿಟಗುಪ್ಪಿ ಸರ್ಕಾರಿ ಆಸ್ಪತ್ರೆ ಇತರೆ ಸರ್ಕಾರಿ ಆಸ್ಪತ್ರೆಗಳಿಗೆ ಮಾದರಿ ಎನ್ನುವಂತೆ ಕಾರ್ಯ ನಿರ್ವಹಿಸುತ್ತಿದೆ. ಅಲ್ಲದೆ ಇಲ್ಲಿಯ ವೈದ್ಯರು ಬಡ ರೋಗಿಗಳಿಗೆ ಸಂಜೀವಿನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಹೊಸ ಸಾಧನೆಯನ್ನು ಮಾಡಿದ್ದಾರೆ.

ಸ್ವಚ್ಛತೆ, ಸೇವೆಯಲ್ಲಿ ಚಿಟಗುಪ್ಪಿ ಸರ್ಕಾರಿ ಆಸ್ಪತ್ರೆ ಯಾವುದೇ ಖಾಸಗಿ ಆಸ್ಪತ್ರೆಗೂ ಕಡಿಮೆ ಇಲ್ಲ ಎಂಬುದನ್ನು ತೋರಿಸಿಕೊಟ್ಟಿದೆ. ಕೇವಲ ಖಾಸಗಿ ಆಸ್ಪತ್ರೆಗಳು ಮಾತ್ರವಲ್ಲ, ಸರ್ಕಾರಿ ಆಸ್ಪತ್ರೆಗಳು ಕೂಡ ಸ್ವಚ್ಛತೆ ಹಾಗೂ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತವೆ ಎಂಬುದನ್ನು ಈ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ದಂಡೆಪ್ಪನವರ ಅವರು ತಮ್ಮ ವೃತ್ತಿಯ ಮೂಲಕ ತೋರಿಸಿದ್ದಾರೆ. ದಂಡೆಪ್ಪನವರ ಅವರ ಈ ಕಾರ್ಯಕ್ಕೆ ರೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಭಾರತ ಎ vs ನ್ಯೂಜಿಲೆಂಡ್ ಎ ಟೆಸ್ಟ್‌: ಹುಬ್ಬಳ್ಳಿ ಫ್ಯಾನ್ಸ್‌ಗೆ ಮತ್ತೆ ನಿರಾಸೆ ಮೂಡಿಸಿದ ಮಳೆರಾಯ ಭಾರತ ಎ vs ನ್ಯೂಜಿಲೆಂಡ್ ಎ ಟೆಸ್ಟ್‌: ಹುಬ್ಬಳ್ಳಿ ಫ್ಯಾನ್ಸ್‌ಗೆ ಮತ್ತೆ ನಿರಾಸೆ ಮೂಡಿಸಿದ ಮಳೆರಾಯ

ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಪ್ರತಿನಿತ್ಯ 100 ರಿಂದ 200 ಜನರು ವಿವಿಧ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದರೆ ಇದೀಗ ಹೊರ ರೋಗಿಗಳು ಕೂಡ ಹೆಚ್ಚಾಗಿ ಬರುತ್ತಿದ್ದಾರೆ. ಗಣನೀಯವಾಗಿ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಚಿಟಗುಪ್ಪಿ ಆಸ್ಪತ್ರೆ ಮೇಲೆ ಸಾಕಷ್ಟು ಒತ್ತಡ ಉಂಟಾಗುತ್ತಿತ್ತು. ಆದರೂ ಸಹ ಇಲ್ಲಿನ ವೈದ್ಯರು ತಾಳ್ಮೆ ಕಳೆದುಕೊಳ್ಳದೆ ಚಿಕಿತ್ಸೆ ನೀಡುತ್ತಾ ಬಂದಿದ್ದಾರೆ. ಇದರಿಂದ ರೋಗಿಗಳಲ್ಲಿರುವ ಆತಂಕ ದೂರ ಆದಂತಾಗಿದೆ.

ಗರ್ಭಿಣಿಯರಿಗೆ ಹೆರಿಗೆ ಸೇರಿದಂತೆ ಎಲ್ಲವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವ ಆಸ್ಪತ್ರೆ ಸಿಬ್ಬಂದಿಗೆ ಪ್ರತ್ಯೇಕ ಸಮವಸ್ತ್ರ, ಮುಂಜಾಗ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಸ್ಪತ್ರೆಗಳಲ್ಲಿ ಸ್ವಚ್ಛತೆ ಸೇರಿದಂತೆ ಹಲವು ಬದಲಾವಣೆ ಆಗಿದ್ದು, ವಿವಿಧ ಹುದ್ದೆಗೆ ನೇಮಕಾತಿಯನ್ನು ಸಹ ಮಾಡಿಕೊಳ್ಳಲಾಗಿದ್ದು, ಇಲ್ಲಿನ ರೋಗಿಗಳಿಗೆ ಮತ್ತಷ್ಟು ಆತಂಕ ದೂರ ಆದಂತಾಗಿದೆ.

ಡಾ. ಶ್ರೀಧರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

ಡಾ. ಶ್ರೀಧರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

ಇಲ್ಲಿಯ ವೈದ್ಯರು ಬಡ ಜನರ ಸೇವೆ ಸಲಿಸುತ್ತಾ ಬಂದಿದ್ದಾರೆ. ಜೊತೆಗೆ ಬಡ ಹೆಣ್ಣುಮಗಳ ಜೀವನಕ್ಕೆ ಆಶಾ ಕಿರಣವಾಗಿದ್ದಾರೆ. ರಶಿದಾ ಮುದಗಲ್ ಎನ್ನುವ ಮಹಿಳೆ ತುಂಬಾ ಅಪರೂಪದ ಕಾಯಿಲೆ ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಕೆಗೆ ವೃದ್ಯರು ಓಪನ್ ಸರ್ಜರಿ ಮಾಡಿದ್ದಾರೆ. ಇವರಿಗೆ ಇರುವ ವಯೋಸಹಜ ಕಾಯಿಲೆಯಿಂದ ಸಾಕಷ್ಟು ತೊಂದರೆ ಆಗುವ ಸಾಧ್ಯತೆ ಹೆಚ್ಚಾಗಿತ್ತು. ಅದಕ್ಕಾಗಿ ವಿಶೇಷ ಕಾಳಜಿ ವಹಿಸಿದ ಡಾ.ಶ್ರೀಧರ್ ದಂಡೆಪ್ಪನವರ ಖಾಸಗಿ ಸ್ನೇಹಿತರ ಬಳಿಯಿಂದ ಲ್ಯಾಪೋಸ್ಕೋಪಿ ಮಷಿನ್ ಪಡೆದು ಸರ್ಜರಿ ಮಾಡಿದ್ದಾರೆ. ಸರ್ಜರಿ ಮಾಡಿ ಗರ್ಭಕೋಶದಲ್ಲಿದ್ದ ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಚಿತ್ರದುರ್ಗ:ಕಟ್ಟಡ ಕಾರ್ಮಿಕರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್ಚಿತ್ರದುರ್ಗ:ಕಟ್ಟಡ ಕಾರ್ಮಿಕರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್

ವೈದ್ಯರನ್ನು ಹಾಡಿಹೊಗಳಿದ ರಶಿದಾ

ವೈದ್ಯರನ್ನು ಹಾಡಿಹೊಗಳಿದ ರಶಿದಾ

ಸದ್ಯ ಆಪರೇಷನ್ ನಂತರ ರಶಿದಾ ಬೇಗಂ ಅವರು ಪೂರ್ಣವಾಗಿ ಗುಣಮುಖರಾಗಿದ್ದಾರೆ. ರಶಿದಾ ಬೇಗಂ ಅವರು ಮಾತನಾಡಿ, ಸರ್ಕಾರಿ ವೈದ್ಯರು ನೀಡಿದ ಚಿಕೆತ್ಸೆ ಹಾಗೂ ಕಾಳಜಿಗೆ ನಾನು ಚಿರಋಣಿ ಎಂದಿದ್ದಾರೆ. ನಾನು ಬೇರೆ ಸರ್ಕಾರಿ ಆಸ್ಪತ್ರೆಗಳಿಗೆ ಅಲೆದಾಡಿದರು ಕೂಡ ಅಲ್ಲಿ ಯಾರು ಸರಿಯಾಗಿ ಚಿಕಿತ್ಸೆ ಖಾಸಗಿ ಆಸ್ಪತ್ರೆಗಳಲ್ಲಿ ತೋರಿಸುವ ಹಣ ನನ್ನ ಬಳಿ ಇರಲಿಲ್ಲ. ಆದರೆ ಇಲ್ಲಿನ ವೈದ್ಯ ದಂಡೆಪ್ಪನವರ ನನ್ನ ಪಾಲಿನ ದೇವರು ಎಂದು ಬಣ್ಣಿಸಿದ್ದಾರೆ.

ರಾಜ್ಯದಲ್ಲಿಯೇ ಅತ್ಯುತ್ತಮ ಆಸ್ಪತ್ರೆ ಎಂಬ ಹೆಗ್ಗಳಿಕೆ

ರಾಜ್ಯದಲ್ಲಿಯೇ ಅತ್ಯುತ್ತಮ ಆಸ್ಪತ್ರೆ ಎಂಬ ಹೆಗ್ಗಳಿಕೆ

ಇನ್ನು ಕೋವಿಡ್ ಸಮಯದಲ್ಲೂ ಚಿಟಗುಪ್ಪಿ ಆಸ್ಪತ್ರೆಯ ಸಿಬ್ಬಂದಿಯ ಕಾರ್ಯವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಕೋವಿಡ್ ಬರದಂತೆ ತಡೆಯಲು ಕನಿಷ್ಟ ಎರಡು ಡೋಸ್ ಆದರೂ ವ್ಯಾಕ್ಸಿನ್ ಹಾಕಿಸಿಕೊಳ್ಳಲೇಬೇಕು. ಅದರಲ್ಲಿಯೂ ವೃದ್ಧರು ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಅನಿವಾರ್ಯವಾಗಿದೆ. ಆದರೆ ಕೆಲವೊಬ್ಬರು ಬೇರೆ ಬೇರೆ ಕಾರಣಗಳಿಂದ ವ್ಯಾಕ್ಸಿನ್ ಹಾಕಿಸಿಕೊಂಡಿಲ್ಲ. ಅಂತಹ ವೃದ್ಧರಿಗೆ ವ್ಯಾಕ್ಸಿನ್ ಹಾಕುವುದಕ್ಕೆ ಹುಬ್ಬಳ್ಳಿ - ಧಾರವಾಡ ಪಾಲಿಕೆ ವ್ಯಾಪ್ತಿಯ ಚಿಟಗುಪ್ಪಿ ಆಸ್ಪತ್ರೆ ವಿಶೇಷ ವ್ಯವಸ್ಥೆ ಮಾಡಿತ್ತು. ವೃದ್ಧರಿಗಾಗಿಯೇ ಪ್ರತ್ಯೇಕ ಕಂಟ್ರೋಲ್ ರೂಂ ಸ್ಥಾಪಿಸಿ, ಮನೆ ಮನೆಗೆ ತೆರಳಿ ಕೋವಿಡ್‌ ಲಸಿಕೆ ಹಾಕುವ ಕಾರ್ಯವನ್ನು ಆರಂಭಿಸಿತ್ತು. ಆದ್ದರಿಂದ ಇದು ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ಆಸ್ಪತ್ರೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ರೆ ಸೇವೆ ಲಭ್ಯ

ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ರೆ ಸೇವೆ ಲಭ್ಯ

ಡಾ. ಶ್ರೀಧರ್ ದಂಡಪ್ಪನವರ ನೇತೃತ್ವದ ವೈದ್ಯಕೀಯ ತಂಡವು, ಮನೆ ಮನೆಗೆ ತೆರಳಿ ವೃದ್ಧರಿಗೆ ವ್ಯಾಕ್ಸಿನ್‌ ಕೊಡುತ್ತಿದ್ದಾರೆ. ಮನೆಯಿಂದ ಹೊರಗಡೆ ಬರಲು ಆಗದಿದ್ದವರು ಕಂಟ್ರೋಲ್ ರೂಮ್‌ಗೆ ಕರೆ ಮಾಡಿದರೆ ಸಾಕು, ಅವರ ಮನೆಗೆ ಹೋಗಿ ವ್ಯಾಕ್ಸಿನ್ ನೀಡುತ್ತಿದ್ದಾರೆ. ಇನ್ನು ಈ ಹಿಂದೆ ಕೂಡ ಇದೇ ರೀತಿಯ ಅನೇಕ ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ್ದರು. ಮುಂದಿನ ದಿನಗಳಲ್ಲಿ ತಮಗೆ ಲ್ಯಾಪೋಸ್ಕೋಪಿ ಉಪಕರಣಗಳನ್ನು ಒದಗಿಸುವಂತೆ ಈಗಾಗಲೇ ದಂಡೆಪ್ಪನವರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೊಸ ಕಟ್ಟಡದೊಂದಿಗೆ 100 ಹಾಸಿಗೆಗಳ ಆಸ್ಪತ್ರೆ ಜೊತೆಗೆ ಅತ್ಯಾಧುನಿಕ ಚಿಕಿತ್ಸೆ ಸಿಗಲಿದೆ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ.

English summary
Hubballi Chitaguppi Government Hospital is functioning model for other government hospitals. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X