ರಕ್ತದಲ್ಲಿ ನಾನು ಪತ್ರ ಬರೆದಿದ್ದಕ್ಕೇ ಮಹದಾಯಿ ಕಾಮಗಾರಿ ಆರಂಭ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಡಿ. 14: ಮಹದಾಯಿ ಕುರಿತು ಕಾಂಗ್ರೆಸ್ ಪಕ್ಷವು ಸಮಾವೇಶ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಹುಬ್ಬಳ್ಳಿಯಲ್ಲಿ ಕಿಡಿಕಾರಿದ್ದಾರೆ.

ಮಹದಾಯಿ ಕುರಿತು ಕಾಂಗ್ರೆಸ್ ಸಮಾವೇಶ ಮಾಡುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

"ರಕ್ತದಲ್ಲಿ ನಾನು ಪತ್ರ ಬರೆದಿದ್ದಕ್ಕೇ ಮಹದಾಯಿ ಕಾಮಗಾರಿ ಪ್ರಾರಂಭವಾಗಿದ್ದು. ನಾನು ನೀರಾವರಿ ಸಚಿವನಾಗಿದ್ದ ಸಂದರ್ಭದಲ್ಲಿ ಕಾಲುವೆ 5.5 ಮೀಟರ್‌ಗಳಷ್ಟು ನಿರ್ಮಾಣವಾಯಿತು. ಕಾಂಗ್ರೆಸ್‌ನವರು ಆಗ ಏನು ಮಾಡಿದರು. ಸೋನಿಯಾ ಗಾಂಧಿ ಗೋವಾದಲ್ಲಿ ಒಂದು ಹನಿ ನೀರನ್ನು ತಿರುಗಿಸಲು ಬಿಡುವುದಿಲ್ಲ ಎಂದಿದ್ದರು" ಎಂದು ಆರೋಪಿಸಿದ್ದಾರೆ.

"ಕಾಂಗ್ರೆಸ್ ಕಾಲದಲ್ಲಿ ನಾವು ನಿರ್ಮಿಸಿದ್ದ ಕಾಲುವೆಗೆ ಗೋಡೆ ಕಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಮಹದಾಯಿ ನೀರನ್ನು ಕರ್ನಾಟಕಕ್ಕೆ ತರುವ ಕಾಲುವೆಗೆ ಗೋಡೆ ಕಟ್ಟಿರುವುದೇ ಅವರ ದೊಡ್ಡ ಸಾಧನೆ" ಎಂದು ವ್ಯಂಗ್ಯವಾಡಿದ್ದಾರೆ.

CM Basavaraj Bommai Slams Congress Over Mahadayi Issue

ಇತ್ತಿಚೆಗೂ ಇದೇ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆ ಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕ ಹಕ್ಕಿದೆ ಈ ಬಗ್ಗೆ ಮಾತನಾಡುವ ಹಕ್ಕಿಲ್ಲ. 5 ವರ್ಷ ಅಧಿಕಾರದಲ್ಲಿದ್ದಾಗ ಕಾಮಗಾರಿ ಬಗ್ಗೆ ಏನೂ ಮಾಡಲಾಗಲಿಲ್ಲ. ಎಸ್.ಸಿ.ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದಿದ್ದರು.

ಇನ್ನು, ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಗೃಹ ಸಚಿವರು ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಸಭೆ ಕರೆಯಲಾಗಿದೆ. ಅಲ್ಲಿ ಕರ್ನಾಟಕದ ನಿಲುವನ್ನು ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ತಿಳಿಸಲಾಗುವುದು. ಕರ್ನಾಟಕದ ನಿಲುವು ಸ್ಪಷ್ಟವಿದೆ ಎಂದು ಮನವರಿಕೆ ಮಾಡಲು ಸಿದ್ದವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಮುಂದುವರಿದು, ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ. ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಸಂವಿಧಾನಬದ್ಧವಾಗಿ ಯೋಚನೆ ಮಾಡಿದಾಗ ಅದು ಮೆಂಟೇನಬಲ್ ಆಗೋಲ್ಲ. ಈಗಾಗಲೇ ಅದರ ಬಗ್ಗೆ ಸಾಕಷ್ಟು ವಾದಗಳಾಗಿವೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+