438 ನಮ್ಮ ಕ್ಲಿನಿಕ್‍ ಆರಂಭ, ಡಿ. 14ಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ

ಹುಬ್ಬಳ್ಳಿ, ಡಿಸೆಂಬರ್ 12; ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ನಮ್ಮ ಕ್ಲಿನಿಕ್' ಯೋಜನೆಗೆ ಚಾಲನೆ ನೀಡಲು ದಿನಾಂಕ ನಿಗದಿಯಾಗಿದೆ. ರಾಜ್ಯಾದ್ಯಂತ 438 ನಮ್ಮ ಕ್ಲಿನಿಕ್ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ನಗರ ಪ್ರದೇಶದ ಬಡ ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ರಾಜ್ಯದ ನಗರ ಪ್ರದೇಶಗಳಲ್ಲಿ 'ನಮ್ಮ ಕ್ಲಿನಿಕ್‍' ಆರಂಭಿಸಲಿದೆ. ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯೋಜನೆಗೆ ಚಾಲನೆ ನೀಡಲಿದ್ದಾರೆಂದು ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಭೈರಿದೇವರಕೊಪ್ಪದ ರೇಣುಕಾನಗರದಲ್ಲಿ ಮುಖ್ಯಮಂತ್ರಿಗಳು 'ನಮ್ಮ ಕ್ಲಿನಿಕ್' ಉದ್ಘಾಟಿಸಲಿದ್ದಾರೆ. ಎಲ್ಲಾ 438 ಕ್ಲಿನಿಕ್‍ಗಳಿಗೆ ವರ್ಚುವಲ್ ಮೂಲಕ ಏಕಕಾಲಕ್ಕೆ ಚಾಲನೆ ನೀಡಲಿದ್ದಾರೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌, ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

15 ರಿಂದ 20 ಸಾವಿರ ಜನರಿಗೆ ಒಂದರಂತೆ ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದೆ. ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು, ಇತರ ಜಿಲ್ಲೆಗಳಲ್ಲಿ 195 ಕ್ಲಿನಿಕ್‌ಗಳು ಬರಲಿವೆ. ಈ ಕ್ಲಿನಿಕ್‌ಗಳಲ್ಲಿ ಮೆಡಿಕಲ್ ಆಫೀಸರ್ (1), ನರ್ಸ್ (1), ಲ್ಯಾಬ್ ಟೆಕ್ನಿಶಿಯನ್/ ಜ್ಯೂನಿಯರ್ ಗ್ರೇಡ್ ಅಸಿಸ್ಟೆಂಟ್ (1), ಡಿ ದರ್ಜೆಯ ಒಬ್ಬರು ಸಿಬ್ಬಂದಿ ಇರಲಿದ್ದಾರೆ.

ಸಮುದಾಯದ ಸಹಭಾಗಿತ್ವ

ಸಮುದಾಯದ ಸಹಭಾಗಿತ್ವ

ನಗರ ಪ್ರದೇಶಗಳ ಬಡ ಜನತೆಗೆ ನಮ್ಮ ಕ್ಲಿನಿಕ್‍ಗಳು 12 ಆರೋಗ್ಯ ಸೇವೆಗಳ ಮೂಲಕ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸಲು, ನಿರಂತರ ಆರೈಕೆಯನ್ನು ನೀಡುವ ನಿಟ್ಟಿನಲ್ಲಿ ದ್ವಿತೀಯ ಮತ್ತು ತೃತೀಯ ಹಂತದ ಆರೋಗ್ಯ ಕೇಂದ್ರಗಳಿಗೆ ರೆಫರಲ್ ಸೇವೆಗಳನ್ನು ಒದಗಿಸುವ ಮೂಲಕ, ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸುಧಾರಿಸಲು, ಸೂಕ್ತವಾದ ಕಾರ್ಯವಿಧಾನಗಳನ್ನು ಬಲಪಡಿಸಲು ಹಾಗೂ ಸಮುದಾಯದ ಸಹಭಾಗಿತ್ವವನ್ನು ಉತ್ತೇಜಿಸುವಲ್ಲಿ ಸಹಾಯಕಾರಿಯಾಗಲಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.

ಹೇಗಿರಲಿದೆ ನಮ್ಮ ಕ್ಲಿನಿಕ್?

ಹೇಗಿರಲಿದೆ ನಮ್ಮ ಕ್ಲಿನಿಕ್?

ನಮ್ಮ ಕ್ಲಿನಿಕ್ 1000 ಚದರ ಅಡಿ ವಿಸ್ತೀರ್ಣ ಹೊಂದಿದ್ದು ಇಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ ಕೂಠಡಿ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಛೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿದ್ದು ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ಒಬ್ಬರು ವೈದ್ಯಾಧಿಕಾರಿ, ಒಬ್ಬರು ಶುಶ್ರೂಷಕರು, ತಲಾ ಒಬ್ಬೊಬ್ಬ ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಕಿರಿಯ ದರ್ಜೆ ಸಹಾಯಕರು, ಒಬ್ಬರು ಡಿ ದರ್ಜೇ ನೌಕರರು ಕಾರ್ಯನಿರ್ವಹಿಸಲಿದ್ದಾರೆ. ಕ್ಲಿನಿಕ್‍ಗಳು ಬೆಳಗ್ಗೆ 9ರಿಂದ ಸಂಜೆ 4.30 ರವರೆಗೆ ಸೋಮವಾರದಿಂದ ಶನಿವಾರದವರೆಗೆ ಕಾರ್ಯನಿರ್ವಹಿಸುತ್ತವೆ.

ಯಾವ-ಯಾವ ಸೇವೆಗಳು ಲಭ್ಯವಿದೆ?

ಯಾವ-ಯಾವ ಸೇವೆಗಳು ಲಭ್ಯವಿದೆ?

ನಮ್ಮ ಕ್ಲಿನಿಕ್‍ಗಳಲ್ಲಿ 12 ಪ್ರಮುಖ ಆರೋಗ್ಯ ಸೇವೆಗಳನ್ನು ನೀಡುವುದರ ಜೊತೆಗೆ ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ, ಆರೈಕೆ, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು ಸಾರ್ವತ್ರಿಕ ಲಸಿಕಾ ಸೇವೆಗಳು, ಕುಟುಂಬ ಕಲ್ಯಾಣ ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೈಕೆ ಕೇಂದ್ರಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಖಾಯಿಲೆಗಳಿಗೆ ಹೊರ ರೋಗಿ ಸೇವೆಗಳು, ಸಾಂಕ್ರಾಮಿಕ ಟಿ.ಬಿ., ಕುಷ್ಟ ರೋಗ ಇತ್ಯಾದಿ ಮತ್ತು ಅಸಾಂಕ್ರಾಮಿಕ ರೋಗಗಳ ಮಧುಮೇಹ ದೀರ್ಘಾವಧಿ ಶ್ವಾಸಕೋಶ ಕಾಯಿಲೆ, ಕೀಲು ನೋವು ಮತ್ತು ಸಂಧಿವಾತ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್, ಸ್ಕ್ರೀನಿಂಗ್, ತಡೆಗಟ್ಟುವಿಕೆ ಮತ್ತು ನಿರ್ವಹಣೆ, ಮೂಲಭೂತ ಬಾಯಿ ಆರೋಗ್ಯ ಸೇವೆಗಳು, ಮೂಲಭೂತ ನೇತ್ರ ಹಾಗೂ ಕಿವಿ, ಮೂಗು, ಗಂಟಲು ಆರೋಗ್ಯ ಆರೈಕೆ ಸೇವೆಗಳು, ಮಾನಸಿಕ ಆರೋಗ್ಯದ ಮೂಲಭೂತ ಸ್ಕ್ರೀನಿಂಗ್ ಸೇವೆಗಳು, ಸುಟ್ಟ ಗಾಯಗಳು, ಅಪಘಾತ, ಮತ್ತಿತರ ಗಾಯಗಳು ಸೇರಿದಂತೆ ತುರ್ತು ವೈದ್ಯಕೀಯ ಸೇವೆಗಳು ಲಭ್ಯವಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದಂತೆ ಕಾರ್ಯ

ಪ್ರಾಥಮಿಕ ಆರೋಗ್ಯ ಕೇಂದ್ರದಂತೆ ಕಾರ್ಯ

ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇರುವಂತೆ ನಗರ ಪ್ರದೇಶದಲ್ಲಿ ನಮ್ಮ ಕ್ಲಿನಿಕ್ ಕಾರ್ಯ ನಿರ್ವಹಣೆ ಮಾಡಲಿವೆ. ಕರ್ನಾಟಕ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗೆ 155 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಕ್ಲಿನಿಕ್‌ಗಳಲ್ಲಿ ಚಿಕಿತ್ಸೆ ಜೊತೆಗೆ ಯೋಗ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ ಮುಂತಾದವುಗಳ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಸಹ ಮಾಡಲಾಗುತ್ತದೆ.

ಕರ್ನಾಟಕ ಸರ್ಕಾರ ನವೆಂಬರ್ ಅಂತ್ಯದ ವೇಳೆಗೆ ನಮ್ಮ ಕ್ಲಿನಿಕ್ ಕಾರ್ಯಾರಂಭ ಮಾಡಲಿದೆ ಎಂದು ಹೇಳಿತ್ತು. ಸಿಬ್ಬಂದಿ ನೇಮಕಾತಿ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಡಿಸೆಂಬರ್‌ನಲ್ಲಿ ರಾಜ್ಯಾದ್ಯಂತ ನಮ್ಮ ಕ್ಲಿನಿಕ್ ಬಾಗಿಲು ತೆರೆಯುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+