• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ ಬಸವರಾಜ ಬೊಮ್ಮಾಯಿ‌

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್‌ 4: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಜನ ಸಂಕಲ್ಪ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ರಾಮಲಿಂಗಾ ರೆಡ್ಡಿ, ಪ್ರತಿ ಸಲ‌ ಎಲೆಕ್ಷೆನ್‌ನಲ್ಲಿ ಗೆಲ್ಲುತ್ತಿರುವುದೇ ರೌಡಿಗಳ ಕೃಪೆಯಿಂದ: ಬಿಜೆಪಿರಾಮಲಿಂಗಾ ರೆಡ್ಡಿ, ಪ್ರತಿ ಸಲ‌ ಎಲೆಕ್ಷೆನ್‌ನಲ್ಲಿ ಗೆಲ್ಲುತ್ತಿರುವುದೇ ರೌಡಿಗಳ ಕೃಪೆಯಿಂದ: ಬಿಜೆಪಿ

ಈಗಾಗಲೇ ಎಲ್ಲ ಕಡೆಗಳಲ್ಲಿಯೂ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ಸಾಕಷ್ಟು ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಪ್ರತಿ ಚುನಾವಣೆಯಂತೆ ಜನರ ಬಳಿ ಹೋಗುತ್ತಿದ್ದೇವೆ. ಪಕ್ಷದ ಸಂಘಟನೆ ಸಹ ಅನಿವಾರ್ಯ ಇದರಲ್ಲಿ ಏನು ವಿಶೇಷ ಇಲ್ಲ ಎಂದರು.

ಕೇಂದ್ರ ಸರ್ಕಾರ ಬಡವರಿಗೆ ಸೇರಿದಂತೆ ಅನೇಕ ಜನಪ್ರಿಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗುತ್ತಿದೆ. ಇದು ಎಲ್ಲಾ ಮುಖಂಡರ ಹಾಗೂ ಕಾರ್ಯಕರ್ತರ ಕರ್ತವ್ಯ ಸಹ ಎಂದರು.

ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸರಕಾರ ರಚಿಸಲಿದೆ- ಅರುಣ್‌ ಸಿಂಗ್‌

ಇನ್ನು ಶನಿವಾರ ಜನಸಂಕಲ್ಪ ಯಾತ್ರೆಯ ಯಶಸ್ಸಿನ ಬಗ್ಗೆ ಮಾತನಾಡಿದ್ದ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಜನಸಂಕಲ್ಪ ಸಮಾವೇಶ, ಎಸ್‌ಟಿ ಸಮ್ಮೇಳನ, ಒಬಿಸಿ ಸಮಾವೇಶಗಳಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿರುವುದು ರಾಜ್ಯದಲ್ಲಿ ಬಿಜೆಪಿ ಪರ ಒಲವಿನ ಸಂಕೇತವಾಗಿದೆ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಸಂತಸ ಹಂಚಿಕೊಂಡಿದ್ದರು.

CM Bommai And Arun Singh Reaction About Jansankalpa Yathre Success

ಮುಖ್ಯಮಂತ್ರಿಯವರ ಜನಸಂಕಲ್ಪ ಸಮಾವೇಶಗಳಲ್ಲಿ ಜನರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಜನರ ಸಮರ್ಥನೆ ಬಿಜೆಪಿ ಪರವಾಗಿ ಇರುವುದು ಇದರಿಂದ ಸ್ಪಷ್ಟವಾಗುತ್ತದೆ. ನಾನು ಮತ್ತು ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಕಾರ್ಯಕರ್ತರ ಸಂಕಲ್ಪ ಯಾತ್ರೆಯಲ್ಲೂ ಕಾರ್ಯಕರ್ತರ ಪಾಲ್ಗೊಳ್ಳುವಿಕೆ ಗರಿಷ್ಠ ಪ್ರಮಾಣದಲ್ಲಿದೆ. ಇವೆಲ್ಲವನ್ನು ಗಮನಿಸಿದರೆ ಕಾರ್ಯಕರ್ತರಲ್ಲಿ ಗೆಲುವಿನ ವಿಶ್ವಾಸ ಇರುವುದು ಸ್ಪಷ್ಟ. ರಾಜ್ಯದ ಜನರು ಬಿಜೆಪಿ ಸರಕಾರವನ್ನೇ ಮತ್ತೆ ಬಯಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು 150 ಶಾಸಕರ ಸ್ಥಾನಗಳನ್ನು ಗೆಲ್ಲಲಿದ್ದೇವೆ. ಸರಕಾರ ರಚಿಸಿ ವೇಗದಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
CM Basavaraj Bommai and BJP Leader Arun Singh reaction about Jansankalpa yathre success in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X