Get Updates
Get notified of breaking news, exclusive insights, and must-see stories!

ಹುಬ್ಬಳ್ಳಿ: ಬಸ್‌ದಿನಕ್ಕೆ ಚಾಲನೆ ನೀಡಿ ಬಸ್ಸಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ

ಹುಬ್ಬಳ್ಳಿ, ಜುಲೈ 20 : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಬಸ್ ದಿನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಗುರುವಾರ) ನಗರದ ವಿಮಾನ ನಿಲ್ದಾಣದಲ್ಲಿ ಚಾಲನೆ ನೀಡಿದರು. ಬಳಿಕ ಹುಬ್ಬಳ್ಳಿ ನಗರ ಸಾರಿಗೆ ಡಿಪೋದ ಬಸ್ಸಿನಲ್ಲಿ ಧಾರವಾಡಕ್ಕೆ ಪ್ರಯಾಣ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಸಿ.ಎಸ್.ಶಿವಳ್ಳಿ, ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ ಮತ್ತಿತರರು ಸಾತ್ ನೀಡಿದರು.

CM Siddaramaiah has inaugurated ‘Bus Day’ in Hubballi on July 20

ಈ ವೇಳೆ ಮಾತನಾಡಿದ ಅವರು, ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಧ್ಯೆಸ್ಥಿಕೆಯೊಂದೆ ದಾರಿಯಾಗಿದ್ದು, ಈ ಕುರಿತು ಈಗಾಗಲೇ ಎರಡು ಪತ್ರ ಬರೆದಿದ್ದೇನೆ. ಆದರೂ ಅವರಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ವಿವಾದ ಬಗೆ ಹರಿಸಲು ರಾಜ್ಯ ಸರ್ಕಾರ ಮಾಡಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡಿದೆ. ವಿವಾದವನ್ನು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳು ಗೋವಾ ಸರ್ಕಾರ ಮಾಡುತ್ತಿರುವ ಡರ್ಟಿ ಪಾಲಿಟಿಕ್ಸ್ ಎಂದು ಕಿಡಿ ಕಾರಿದರು.

CM Siddaramaiah has inaugurated ‘Bus Day’ in Hubballi on July 20

ಪ್ರತ್ಯೇಕ ಧ್ವಜ ಸಮರ್ಥನೆ: ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದಬೇಕು ಎಂಬ ಕಾರಣಕ್ಕೆ ಸಮಿತಿ ರಚಿಸಿರುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಕ್ಕೆ ಪ್ರತ್ಯೇಕ ಬಾವುಟ ಇರಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಈ ಬಗ್ಗೆ ಇದರ ಸಾಧಕ ಬಾಧಕಗಳನ್ನು ಕುರಿತು ಚರ್ಚಿಸಲು ಸಮಿತಿ ರಚಿಸಲಾಗಿದೆ ಎಂದರು.

ಸಮಿತಿ ವರದಿ ನೀಡಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಮುಖ್ಯವಾಗಿ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಪ್ರತ್ಯೇಕ ಧ್ವಜಹೊಂದಬಾರದು
ಎಂದು ಎಲ್ಲಿಯೂ ಹೇಳಿಲ್ಲ.

ಪ್ರತ್ಯೇಕ ಧ್ವಜದಿಂದ ರಾಷ್ಟ್ರದ ಸಾರ್ವಭೌಮತ್ವ ಹಾಗೂ ಐಕ್ಯತೆಗೆ ಯಾವುದೇ ಧಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+