MUDA: ಹಗರಣದ ಬಗ್ಗೆ ಚರ್ಚಿಸಲಾಗದೇ ಸಿಎಂ ಸಿದ್ದರಾಮಯ್ಯ ಪಲಾಯನ: ಶಾಸಕ
ಹುಬ್ಬಳ್ಳಿ, ಜುಲೈ 28: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ಮಾಡಿದ್ದೇವೆ ಎಂದು ಹೇಳಿದ್ದ ಸರ್ಕಾರ ನಾಯಕರಿಗೆ ಇದೀಗ ಮುಡಾ ಹಗರಣ, ವಾಲ್ಮಿಕಿ ಹಗರಣಗಳು ಮುಳುವಾಗಿ ಕಾಡುತ್ತಿವೆ. ಮುಡಾ ಹಗರಣವಂತೂ ನೇರ ಸಿಎಂ ಸಿದ್ದರಾಮಯ್ಯ ಅವರ ಸುತ್ತ ಸುತ್ತಿದೆ. ಇದೇ ವಿಚಾರ ಇತ್ತೀಚೆಗೆ ಅಂತ್ಯಗೊಂಡ ವಿಧಾನಮಂಡಲ ಅಧಿವೇಶನದಲ್ಲೂ ಭಾರೀ ಚರ್ಚೆ ಸೃಷ್ಟಿಸಿತ್ತು.
ಇದೇ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಡೆಯನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಟೀಕಿಸಿದ್ದಾರೆ.

ನಲವತ್ತು ವರ್ಷದಿಂದ ಸಮಾಜವಾದ ಪ್ರತಿಪಾದಿಸುತ್ತ ಬಂದಿರುವ ಮುಖ್ಯಮಂತ್ರಿಗಳು ಮೊಟ್ಟ ಮೊದಲ ಬಾರಿಗೆ ಮುಡಾ ಹಗರಣದ ಕುರಿತು ಚರ್ಚೆಗೆ ಆಸ್ಪದ ಕೊಡದೆ ಪಲಾಯನ ಮಾಡಿರುವುದು ದುರ್ದೈವ' ಎಂದು ಶಾಸಕರು ದೂರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹಗರಣದಲ್ಲಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲದಿದ್ದರೆ, ಶುದ್ಧರಾಗಿದ್ದರೆ ಚರ್ಚೆಗೆ ಆಸ್ಪದ ನೀಡಬೇಕಿತ್ತು. ಅವರಲ್ಲಿ ಗೊಂದಲ ಕಾಡುತ್ತಿರುವುದರಿಂದ, ಅಧಿವೇಶನವನ್ನು ಮೊಟುಕುಗೊಳಿಸಿದ್ದಾರೆ' ಎಂದು ಅವರು ಆರೋಪಿಸಿದರು.
ಹಗರಣದಲ್ಲಿ ಸರ್ಕಾರದ ಪಾತ್ರವಿದೆ: ಶಾಸಕ
ಮುಡಾ ಹಗರಣದ ಕುರಿತು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಯಾವ ರಾಜಕೀಯನ್ನೂ ಮಾಡುತ್ತಿಲ್ಲ. ರಾಜ್ಯದ ಸಾಕಷ್ಟು ಸಮಸ್ಯೆಗಳ ಕುರಿತು ಚರ್ಚೆ ನಡೆಯಬೇಕಿತ್ತು. ವಾಲ್ಮೀಕಿ ನಿಗಮ ಮಂಡಳಿಯ ಹಗರಣದ ಬಗ್ಗೆಯೂ ಮಾತನಾಡಲು ಬಿಡುತ್ತಿಲ್ಲ. ಈ ಹಗರಣಗಳಲ್ಲಿ ಸರ್ಕಾರದ ಪಾತ್ರವಿದೆ ಎಂದು ಎಲ್ಲರಿಗೂ ತಿಳಿದಿದೆ.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಹೆಸರಿಡುವ ಮೂಲಕ, ವಿಷಯಾಂತರ ಮಾಡುತ್ತಿದ್ದಾರೆ' ಎಂದು ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿಯು ರಾಜ್ಯ ಸರ್ಕಾರ ಬೀಳಿಸುವ ಯತ್ನ ಮಾಡುತ್ತಿಲ್ಲ. ವಿರೋಧ ಪಕ್ಷವಾಗಿ ಹೋರಾಟ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಸಮಸ್ಯೆಯಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಸದ್ಯ ಅವರೇ ತಿರುಗಿ ಬೀಳುವ ಪರಿಸ್ಥಿತಿ ಬರಲಿದೆ' ಎಂದು ಅವರು ಹೇಳಿದರು.
ಎಚ್‌ಡಿಕೆಗೆ ಮುಡಾ ನಿವೇಶನ?
ಮೈತ್ರಿ ಮಾಡಿಕೊಂಡಿರುವ ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಮುಡಾ ಹಗರಣದಲ್ಲಿ ಸಿಎ ಸಿದ್ದರಾಮಯ್ಯ ಹೆಸರು ಕೇಳಿ ಬರುತ್ತಿದ್ದಂತೆ ಅಲರ್ಟ್ ಆಗಿದ್ದರು. ಸದನದಲ್ಲಿಯೂ ಪ್ರಸ್ತಾಪಿಸಿ ಸರ್ಕಾರದ ಮೇಲೆ ಚಾಟಿ ಬೀಸಿದ್ದರು. ಅಧಿವೇಶನ ಮುಕ್ತಾಯವಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಿಂದ ಯಾರೆಲ್ಲ ನಿವೇಶನ ಪಡೆದಿದ್ದಾರೆ ಎಂದು ಒಂದಷ್ಟು ಹೆಸರು ಹೇಳಿದ್ದರು. ಇದರಲ್ಲಿ ಮಾಜಿ ಸಿಎಂ ಹಾಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಹೆಸರು ಸಹ ಕೇಳಿ ಬಂದಿದೆ.
ಒಟ್ಟಾರೆ ಮುಡಾ ಮತ್ತು ವಾಲ್ಮಿಕ ಹಗರಣಗಳ ವಿಚಾರಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿವೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications