ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಅವರಿಂದಲೇ ಸಮ್ಮಿಶ್ರ ಸರ್ಕಾರ ಬೀಳುತ್ತೆ ಎಂದ ಶೆಟ್ಟರ್

|
Google Oneindia Kannada News

Recommended Video

ಸಿದ್ದರಾಮಯ್ಯ ಅವರಿಂದಲೇ ಸಮ್ಮಿಶ್ರ ಸರ್ಕಾರ ಬೀಳುತಂತೆ..! | Oneindia Kannada

ಹುಬ್ಬಳ್ಳಿ, ಜನವರಿ 31: ಸಿದ್ದರಾಮಯ್ಯ ಅವರಿಂದಲೇ ಸಮ್ಮಿಶ್ರ ಸರ್ಕಾರ ಬೀಳಲಿದೆ, ಕಾಂಗ್ರೆಸ್‌ನವರು ಸರ್ಕಾರವನ್ನು ಐಸಿಯುನಲ್ಲಿಟ್ಟುಕೊಂಡು ಹೋಗುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವೆಂಗ್ಯವಾಡಿದ್ದಾರೆ.

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಒಳಜಗಳ ಹೆಚ್ಚಾಗಿದೆ: ಶೆಟ್ಟರ್ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಒಳಜಗಳ ಹೆಚ್ಚಾಗಿದೆ: ಶೆಟ್ಟರ್

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಅದರ ಪರಿಣಾಮ ಈಗ ಹೊರಗೆ ಬರುತ್ತಿದೆ. ಸಿದ್ದರಾಮಯ್ಯ ಅವರಿಂದಲೇ ಸರ್ಕಾರ ಬೀಳುವುದು ಖಾತ್ರಿಯಾಗಿದೆ ಎಂದು ಹೇಳಿದರು.

ಹುಬ್ಬಳ್ಳಿ: ಜಗದೀಶ್ ಶೆಟ್ಟರ್-ದೇಶಪಾಂಡೆ ನಡುವೆ ಮಾತಿನ ಚಕಮಕಿಹುಬ್ಬಳ್ಳಿ: ಜಗದೀಶ್ ಶೆಟ್ಟರ್-ದೇಶಪಾಂಡೆ ನಡುವೆ ಮಾತಿನ ಚಕಮಕಿ

ಸಿದ್ದರಾಮಯ್ಯ ಯೋಜನೆಗಳಿಗೆ ಮಂಜೂರು ಮಾಡಿದ್ದ ಹಣವನ್ನು ನೀಡಲು ಕುಮಾರಸ್ವಾಮಿಯವರಿಗೆ ಆಗುತ್ತಿಲ್ಲ. ಈ ಸರ್ಕಾರವನ್ನು ಬೀಳಿಸಲು ನಾವು ಯಾವುದೇ ಪ್ರಯತ್ನ ಪಡಬೇಕಾಗಿಲ್ಲ. ಅದು ತನ್ನಷ್ಟಕ್ಕೆ ತಾನೇ ಪತನವಾಗಲಿದೆ ಎಂದರು.

coalition government will collapse because of Siddaramaiah

ರಾಜ್ಯದಲ್ಲಿ ಆರ್ಥಿಕ ಸ್ಥಿತಿ ತೀವ್ರವಾಗಿ ಹದಗೆಟ್ಟಿದೆ, ಇನ್ನೊಂದೆಡೆ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯವನ್ನೇ ಒತ್ತೆ ಇಡಲು ಹೊರಟಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಈ ರೀತಿಯ ಪರಿಸ್ಥಿತಿಯಲ್ಲಿ ಕುಮಾರಸ್ವಾಮಿಯವರು ಸರ್ಕಾರ ಮುನ್ನಡೆಸದೆ ರಾಜೀನಾಮೆ ನೀಡಿ ಮನೆಗೆ ಹೋಗಲಿ. ಮೈತ್ರಿ ಸರ್ಕಾರದಲ್ಲಿ ದೊಂಬರಾಟ, ನಾಟಕೀಯತೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಕುಮಾರಸ್ವಾಮಿಯವರು ಕೆಲವು ಯೋಜನೆಗಳನ್ನು ಕೈಬಿಡಲು ಮುಂದಾದಾಗ ಸಿದ್ದರಾಮಯ್ಯನವರೊಂದಿಗೆ ಸಂಘರ್ಷ ಆರಂಭವಾಗಿತ್ತು. ಈ ಸರ್ಕಾರ ಹಿಟ್ ವಿಕೆಟ್ ಆಗಲಿದೆ. ಸರ್ಕಾರ ತನ್ನಷ್ಟಕ್ಕೆ ತಾನೇ ಪತನವಾಗಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಬಹಳ ಗಂಭೀರವಾಗಿದೆ ಎಂದರು.

English summary
Former chief minister and BJP leader Jagadish shettar says that Karnataka coalition government will collapse because of Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X