'ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ರಾಜ್ಯ ಸರಕಾರದಿಂದ ವಿಶ್ವಾಸದ್ರೋಹ'

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ಮೇ 20: ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ್ ಅವರು ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಜಂತಕಲ್ ಮೈನಿಂಗ್ ಸೇರಿದಂತೆ ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ರಾಜ್ಯ ಸರಕಾರ ವಿಶ್ವಾಸದ್ರೋಹ ಮಾಡುತ್ತಿದೆ ಎಂದು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನೇರವಾದ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುವ ಮೊದಲಿಗೆ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ತೆಗೆದುಕೊಳ್ಳುವ ಮಾತುಗಳನ್ನು ಆಡುತ್ತಿದ್ದರು. ಆದರೆ ಮುಖ್ಯಮಂತ್ರಿ ಆದ ಮೇಲೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕಾಗಿ ರಚಿಸಿದ ಸಚಿವ ಸಂಪುಟದ ಉಪ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ ಹಾಗೂ ಗಣಿ ಸಚಿವ ವಿನಯ್ ಕುಲಕರ್ಣಿ ಅವರಿಗೂ ಈ ಬಗ್ಗೆ ಆಸಕ್ತಿ ಇಲ್ಲ ಎಂದರು.[ಎಚ್ಡಿಕೆ ಗಣಿ ಲಂಚ ಸಿಡಿ ಪ್ರಕರಣಕ್ಕೆ ಮತ್ತೆ ಜೀವ, ಗಾಲಿ ರೆಡ್ಡಿಗೆ ನೋಟಿಸ್]

SR Hiremath

ಈಗ ಬಿಜೆಪಿ ಸೇರಿರುವ ಎಸ್ಸೆಂ ಕೃಷ್ಣ ಅವರು ಅಕ್ರಮ ಗಣಿಗಾರಿಕೆಯ ಜನಕ. ಅವರ ನಂತರ ಮುಖ್ಯಮಂತ್ರಿಗಳಾದ ಎನ್ ಧರಂ ಸಿಂಗ್, ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅದರ ಕೇಂದ್ರ ಬಿಂದುಗಳಾಗಿದ್ದರು ಎಂದು ಹಿರೇಮಠ್ ಆರೋಪ ಮಾಡಿದ್ದಾರೆ. ಶ್ರೀ ಸಾಯಿ ವೆಂಕಟೇಶ್ವರ ಹಾಗೂ ಹನುಮಾನ್ ಮೈನ್ ಗೆ ಗಣಿಗಾರಿಕೆಗೆ ಅವಕಾಶ ನೀಡಿರುವುದೂ ಅಕ್ರಮ ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Congress government neglecting illegal mining case after came into power in Karnataka state, said by Samaja Parivartana Samudaya founder SR Hiremath in Hubballi.
Please Wait while comments are loading...